ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ನವಾಬ್ ಮಲಿಕ್‌ಗೆ ಜಾಮೀನು ಮಂಜೂರು

PPeepal Media

Peepal Media ದೇಶ

• 1 ನಿಮಿಷದ ಓದು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ನವಾಬ್ ಮಲಿಕ್‌ಗೆ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣ ನೀಡಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಮಲಿಕ್ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಮಲಿಕ್ ಪರ ವಾದ ಮಂಡಿಸಿದ ವಕೀಲರ ವಾದವನ್ನು ಗಮನಿಸಿತು.

ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಲಿಕ್ ಅವರ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಜಾಮೀನು ಮಂಜೂರಾತಿಗೆ ವಿರೋಧ ವ್ಯಕ್ತಪಡಿಸಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನನ್ನು ಕಾಯಂಗೊಳಿಸಬಹುದು ಎಂದು ಹೇಳಿದರು.

ಪರಾರಿಯಾಗಿರುವ ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಫೆಬ್ರವರಿ 2022ರಲ್ಲಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.

ಜಾಗತಿಕ ಭಯೋತ್ಪಾದಕ ಮತ್ತು 1993ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣವನ್ನು ದಾಖಲಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು