ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂವರು ಗ್ರಾಮಸ್ಥರನ್ನು ಕತ್ತು ಹಿಸುಕಿ ಕೊಂದು, ಏಳು ಜನರನ್ನು ಅಪಹರಿಸಿದ ನಕ್ಸಲರು

PPeepal Media

Peepal Media • ದೇಶ

• 1 ನಿಮಿಷದ ಓದು

ಮೂವರು ಗ್ರಾಮಸ್ಥರನ್ನು ಕತ್ತು ಹಿಸುಕಿ ಕೊಂದು, ಏಳು ಜನರನ್ನು ಅಪಹರಿಸಿದ ನಕ್ಸಲರು

ಮಂಗಳವಾರ ಸಂಜೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಮೂವರು ಗ್ರಾಮಸ್ಥರನ್ನು ಕೊಂದರು. ಪೆದ್ದಕೋರ್ಮಾ (ನಯಪಾರ) ಗ್ರಾಮದ ಮೂವರು ಸಂತ್ರಸ್ತರನ್ನು ಹಗ್ಗಗಳಿಂದ ಕ್ರೂರವಾಗಿ ಕತ್ತು ಹಿಸುಕಿ ಕೊಂದಿದ್ದಾರೆ. ಇನ್ನೂ ಏಳು ಜನರನ್ನು ಅಪಹರಿಸಿರುವುದಾಗಿಯೂ ವರದಿಗಳಿವೆ. ಇವರಲ್ಲಿ ಕೆಲವರು ಇತ್ತೀಚೆಗೆ ಪೊಲೀಸರಿಗೆ ಶರಣಾದ ನಕ್ಷಲ್‌ ನಾಯಕರ ಕುಟುಂಬದವರು ಎಂದೂ ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ದಾಳಿಯು ಸ್ಥಳೀಯರಲ್ಲಿ ಭಯವನ್ನು ಹರಡಲು ನಕ್ಸಲರು ಮಾಡಿದ ಪ್ರಯತ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಸ್ತುತ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಡಪಂಥೀಯ ಉಗ್ರವಾದದ ಕೇಂದ್ರವಾಗಿರುವ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಚಳುವಳಿಯನ್ನು ನಿರ್ಮೂಲನೆ ಮಾಡುವಲ್ಲಿ ಭದ್ರತಾ ಪಡೆಗಳು ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿವೆ. ಈ ಹಂತದಲ್ಲಿ ಇಂತಹ ದಾಳಿ ನಡೆದಿರುವುದು ಗಮನಾರ್ಹ.

“ಮಾವೋವಾದಿ ಚಳುವಳಿ ಕೊನೆಯ ಕ್ಷಣಗಳಲ್ಲಿದೆ. ಅವರ ನಾಯಕತ್ವವು ಛಿದ್ರಗೊಂಡಿದ್ದು ನಕ್ಷಲರು ಹತಾಶರಾಗಿದ್ದಾರೆ. ದಂಡಕಾರಣ್ಯಂ ವಲಯದಲ್ಲಿ ಕೇವಲ 300 ಸಶಸ್ತ್ರ ಕಾರ್ಯಕರ್ತರು ಮಾತ್ರ ಉಳಿದಿದ್ದಾರೆ. ಅವರು ಶರಣಾಗಬೇಕು ಅಥವಾ ನಿರ್ಣಾಯಕ ಯುದ್ಧಕ್ಕೆ ಸಿದ್ಧರಾಗಿರಬೇಕು ” ಎಂದು ಬಸ್ತಾರ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಿಲಿಂಗಂ ಹೇಳಿದರು.

ಈ ತಿಂಗಳ ಆರಂಭದಲ್ಲಿ ಬಿಜಾಪುರ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಕೇಂದ್ರ ಸಮಿತಿ ಸದಸ್ಯ ಸುಧಾಕರ್ ಅವರನ್ನು ಕೊಂದಿವೆ.

ಸುಧಾಕರ್ ಮೇಲೆ ಈಗಾಗಲೇ 40 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಅಬುಜ್‌ಮದ್‌ನ ದಟ್ಟ ಕಾಡುಗಳಲ್ಲಿ ಸಿಪಿಐ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅವರನ್ನು ಕೊಂದ ನಂತರ ಸುಧಾಕರ್ ಅವರನ್ನು ಸಹ ಕೊಲ್ಲಲಾಯಿತು. 1970 ರಿಂದ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಕೇಶವ ರಾವ್ ವಿರುದ್ಧ 1.5 ಕೋಟಿ ರೂ. ಬಹುಮಾನ ಘೋಷಿಸಲಾಗಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು