ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಸ್ರೇಲ್-ಪ್ಯಾಲೆಸ್ತೀನ್‌ ಯುದ್ಧದ ಕುರಿತು ಸರ್ವಪಕ್ಷ ಸಭೆ ನಡೆಯಬೇಕು: NCP ಆಗ್ರಹ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಇಸ್ರೇಲ್-ಪ್ಯಾಲೆಸ್ತೀನ್‌ ಯುದ್ಧದ ಕುರಿತು ಸರ್ವಪಕ್ಷ ಸಭೆ ನಡೆಯಬೇಕು: NCP ಆಗ್ರಹ

ಹೊಸದಿಲ್ಲಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧದ ಕುರಿತು ಭಾರತದ ನಿಲುವು ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ನಡೆಸಬೇಕು ಎಂದು NCP ಕಾರ್ಯಾಧ್ಯಕ್ಷೆ ಹಾಗೂ ಲೋಕಸಭೆ ಸದಸ್ಯೆ ಸುಪ್ರಿಯಾ ಸುಳೆ ಗುರುವಾರ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರ ಇಸ್ರೇಲ್‌ಗೆ ಬೆಂಬಲ ನೀಡುವ ಮೂಲಕ ವಿಭಿನ್ನ ನಿಲುವು ತಳೆದಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿ ಹಾಗೂ ಯುದ್ಧ ಆರಂಭವಾದ ಬೆನ್ನಲ್ಲೇ ಕಾಂಗ್ರೆಸ್ ಪ್ಯಾಲೆಸ್ತೀನ್ ಜನರ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದರೆ, ಕೇಂದ್ರದ ನರೇಂದ್ರ ಮೋದಿ ಸರಕಾರ ಇಸ್ರೇಲ್ ಬೆಂಬಲಕ್ಕೆ ಸ್ಪಂದಿಸಿದೆ.

ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತದ ನಿಲುವು ಒಂದೇ ಆಗಿತ್ತು, ಆದರೆ ಈಗ ಕೇಂದ್ರ ಸರ್ಕಾರ ವಿಭಿನ್ನ ನಿಲುವು ತೆಗೆದುಕೊಂಡಿದೆ ಎಂದು ಅವರು ಹೇಳಿದರು. ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಂತಹ ಸಮಸ್ಯೆಗಳು ಉದ್ಭವಿಸಿದಾಗ ಸರ್ವಪಕ್ಷ ಸಭೆ ನಡೆಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜಗತ್ತು ಈಗ ಯುದ್ಧದ ಪರಿಸ್ಥಿತಿಯನ್ನು ಎದುರಿಸುತ್ತಿದೆ ಮತ್ತು ದೇಶದ ಎಲ್ಲಾ ಹಿರಿಯ ನಾಯಕರೊಂದಿಗೆ ತಕ್ಷಣವೇ ಸರ್ವಪಕ್ಷ ಸಭೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದರು.

ತುರ್ತಾಗಿ ಸರ್ವಪಕ್ಷ ಸಭೆ ಆಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದಾಗಿ ಸುಪ್ರಿಯಾ ಹೇಳಿದ್ದಾರೆ.
ಏತನ್ಮಧ್ಯೆ, ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು ಪ್ಯಾಲೆಸ್ತೀನ್ ಜನರ ಹಕ್ಕುಗಳಿಗಾಗಿ ತನ್ನ ದೀರ್ಘಕಾಲದ ಬೆಂಬಲವನ್ನು ಪುನರುಚ್ಚರಿಸಿತು. ಪ್ಯಾಲೇಸ್ಟಿನಿಯನ್ ಜನರಿಗೆ ಸ್ವ-ಆಡಳಿತ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ನೀಡಬೇಕು, ಹಾಗೆಯೇ ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕಾಗಿ ಮಾತುಕತೆಗಳು ಮತ್ತು ಕದನ ವಿರಾಮವನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಲಹೆ ನೀಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು