ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ವಿರುದ್ಧ ಸೋಷಿಯಲ್‌ ಮೀಡಿಯಾ ಕೆಂಡಾಮಂಡಲ: ಕದನ ವಿರಾಮ ಘೋಷಿಸಿ ಭಾರತದ ಇಮೇಜ್‌ ಹಾಳು ಮಾಡಿದ್ದಾರೆಂದು ಆಕ್ರೋಶ

PPeepal Media

Peepal Media • ದೇಶ

• 1 ನಿಮಿಷದ ಓದು

ಮೋದಿ ವಿರುದ್ಧ ಸೋಷಿಯಲ್‌ ಮೀಡಿಯಾ ಕೆಂಡಾಮಂಡಲ: ಕದನ ವಿರಾಮ ಘೋಷಿಸಿ ಭಾರತದ ಇಮೇಜ್‌ ಹಾಳು ಮಾಡಿದ್ದಾರೆಂದು ಆಕ್ರೋಶ

ದೆಹಲಿ: ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಬಿಜೆಪಿ ಸರ್ಕಾರ ಅಮೆರಿಕದ ಒತ್ತಡಕ್ಕೆ ಮಣಿದಿದೆ ಎಂದು ಟೀಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಭಾರತದ ಇಮೇಜ್ ಡ್ಯಾಮೇಜ್‌ ಆಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಯುದ್ಧದಲ್ಲಿ ನಮ್ಮದೇ ಮೇಲುಗೈ ಇತ್ತು, ಹೀಗಾಗಿ ಕದನ ವಿರಾಮಕ್ಕೆ ಒಪ್ಪಿಕೊಳ್ಳುವ ಅಗತ್ಯವಿರಲಿಲ್ಲ ಎಂದು ಜನರು ಪ್ರತಿಭಟಿಸುತ್ತಿದ್ದಾರೆ.

ಕದನ ವಿರಾಮಕ್ಕೆ ಇದು ಸರಿಯಾದ ಸಮಯವಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ನಿರ್ಧಾರಕ್ಕೆ ಪ್ರೇರಣೆ ನೀಡಿದವರು ಯಾರು ಮತ್ತು ಅಮೆರಿಕದ ಮಧ್ಯಸ್ಥಿಕೆಯನ್ನು ಸ್ವೀಕರಿಸಿ ಅದಕ್ಕೆ ತಲೆಬಾಗುವ ಅವಶ್ಯಕತೆ ಏನಿತ್ತು ಎನ್ನುವ ಪ್ರಶ್ನೆಗಳ ಸುರಿಮಳೆಯನ್ನೇ ಸೋಷಿಯಲ್‌ ಮೀಡಿಯಾಗಳಲ್ಲಿ ಸುರಿಸಲಾಗುತ್ತಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಶನಿವಾರ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇದನ್ನು ಘೋಷಿಸಿದ ನಂತರ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಹೇಳಿದರು. ತಕ್ಷಣವೇ, ಈ ವಿಷಯವು ದೇಶಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿಬಿಸಿ ಚರ್ಚೆಯ ವಿಷಯವಾಯಿತು.

ಪ್ರಧಾನಿ ಮೋದಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ನೆಟಿಜನ್ ಒಬ್ಬರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಪ್ರಧಾನಿ ಮೋದಿ ತಮ್ಮ ಜೀವನದ ಅತಿ ದೊಡ್ಡ ತಪ್ಪನ್ನು ಮಾಡಿದ್ದಾರೆ. ಅವರು ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ನಾನು ಇನ್ನು ಮುಂದೆ ಅವರಿಗೆ ಮತ ಹಾಕುವುದಿಲ್ಲ” ಎಂದು ಅವರು ಹೇಳಿದ್ದಾರೆ.

‘ಈ ಕದನ ವಿರಾಮವು ಶಾಶ್ವತ ಶಾಂತಿಗೆ ಕೊಡುಗೆ ನೀಡುತ್ತದೆಯೇ? ಪಾಕಿಸ್ತಾನ ಮತ್ತೆ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಏನಿದೆ? ಇನ್ನು ಮುಂದೆ ಅಮಾಯಕ ಜನರ ಮೇಲೆ ದಾಳಿಯಾಗುವುದಿಲ್ಲ ಎಂದು ಮೋದಿ ಗ್ಯಾರಂಟಿ ಕೊಡಬಲ್ಲರೇ? ಪಹಲ್ಗಾಮ್‌ ರೀತಿಯ ಘಟನೆಗಳು ಮುಂದೆ ನಡೆಯುವುದಿಲ್ಲ ಎನ್ನುವ ಕುರಿತು ಸರ್ಕಾರ ಖಾತರಿ ನೀಡಬಲ್ಲದೇ? ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಜನರಿಗೆ ಇದರಿಂದ ಸಮಾಧಾನ ಸಿಗುತ್ತದೆಯೇ? ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಪ್ರವಾಸೋದ್ಯಮ ಸುರಕ್ಷಿತವಾಗಿರಲಿದೆಯೇ? ಇದೆಲ್ಲ ಪ್ರಶ್ನೆಗಳಿಗೆ ಉತ್ತರ ಹೌದು ಎಂದಾದಲ್ಲಿ ಮಾತ್ರ ಈ ಶಾಂತಿ ಮಾತುಕತೆಗೆ ಅರ್ಥ ಸಿಗಲಿದೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರು ಹೇಳಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು