ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದೆಹಲಿ ಎಲ್ ಜಿ ಶಿಫಾರಸು: ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ದೆಹಲಿ ಎಲ್ ಜಿ ಶಿಫಾರಸು: ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ

ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ನಿಂದ ರಾಜಕೀಯ ದೇಣಿಗೆ ಪಡೆದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎನ್ ಐಎ ತನಿಖೆ ನಡೆಸುವಂತೆ ರಾಜ್ಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶಿಫಾರಸು ಮಾಡಿದ್ದಾರೆ.

ಈ ಸಂಬಂಧ ಸಕ್ಸೇನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

1993ರ ಸ್ಫೋಟ ಪ್ರಕರಣದ ಅಪರಾಧಿ ದೇವೇಂದ್ರ ಪಾಲ್ ಭುಲ್ಲರ್ ಅವರನ್ನು ಬಿಡುಗಡೆ ಮಾಡಲು ಸಹಾಯ ಕೋರಿ ಖಲಿಸ್ತಾನ್ ಪರ ಭಯೋತ್ಪಾದಕ ಸಂಘಟನೆಗಳಿಂದ ಕೇಜ್ರಿವಾಲ್ ನೇತೃತ್ವದ ಎಎಪಿ 16 ಮಿಲಿಯನ್ ಡಾಲರ್ ಪಡೆದಿದೆ ಎಂಬ ದೂರನ್ನು ಸ್ವೀಕರಿಸಿರುವುದಾಗಿ ಸಕ್ಸೇನಾ ಪತ್ರದಲ್ಲಿ ತಿಳಿಸಿದ್ದಾರೆ. ‌

ಈ ನಡುವೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಘೋಷಿಸಿದ ಕೆಲವೇ ದಿನಗಳಲ್ಲಿ ಸಕ್ಸೇನಾ ಪತ್ರದೊಂದಿಗೆ ಇದಕ್ಕೆ ಸಂಬಂಧಿಸಿದ ಸಾಕ್ಷ್ಯವನ್ನು ಸಹ ಲಗತ್ತಿಸಿದ್ದಾರೆ ಎಂದು ವರದಿಯಾಗಿದೆ.

ಇದು ಬಿಜೆಪಿಯ ಆದೇಶದ ಮೇರೆಗೆ ಕೇಜ್ರಿವಾಲ್ ವಿರುದ್ಧದ ಮತ್ತೊಂದು ಪಿತೂರಿ ಎಂದು ಎಎಪಿ ಟೀಕಿಸಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುವ ಭಯದಲ್ಲಿರುವ ಬಿಜೆಪಿ ಇಂತಹ ಷಡ್ಯಂತ್ರಗಳಿಗೆ ಮುಂದಾಗಿದೆ ಎಂದು ಎಎಪಿ ನಾಯಕರು ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಟೀಕಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು