ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ಷೇತ್ರ ಪುನರ್ವಿಂಗಡಣೆ ಮುಂದಿನ 25 ವರ್ಷಗಳವರೆಗೆ ಮಾಡಬಾರದು: ಸಮಿತಿ ನಿರ್ಣಯ

P

Peepal Media • ದೇಶ

• 1 ನಿಮಿಷದ ಓದು

ಕ್ಷೇತ್ರ ಪುನರ್ವಿಂಗಡಣೆ ಮುಂದಿನ 25 ವರ್ಷಗಳವರೆಗೆ ಮಾಡಬಾರದು: ಸಮಿತಿ ನಿರ್ಣಯ

ಚೆನ್ನೈ: ಮುಂದಿನ 25 ವರ್ಷಗಳ ಕಾಲ ಕ್ಷೇತ್ರ ಪುನರ್ವಿಂಗಡಣೆಯನ್ನು ಸ್ಥಗಿತಗೊಳಿಸುವಂತೆ ಕೋರುವ ನಿರ್ಣಯವನ್ನು ಜಂಟಿ ಕ್ರಿಯಾ ಸಮಿತಿಯ ಸಭೆಯು ಅಂಗೀಕರಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಶನಿವಾರ ಚೆನ್ನೈನಲ್ಲಿ ಆಯೋಜಿಸಿದ್ದ ಜಂಟಿ ಕ್ರಿಯಾ ಸಮಿತಿಯ ಸಭೆಯಲ್ಲಿ ಕೇರಳ, ತೆಲಂಗಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್, ರೇವಂತ್ ರೆಡ್ಡಿ, ಭಗವಂತ್ ಸಿಂಗ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಬಿಜೆಡಿ, ಬಿ‌ಆರ್‌ಎಸ್ ಮತ್ತು ಎಸ್ಎಡಿ ಪ್ರತಿನಿಧಿಗಳು ಭಾಗವಹಿಸಿದ್ದರು.

ಡಿಎಂಕೆ ಸಂಸದೆ ಕನಿಮೋಳಿ ಅವರು ಮುಂದಿನ 25 ವರ್ಷಗಳ ಕಾಲ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರುವ ಜಂಟಿ ಪ್ರಸ್ತಾವನೆಯನ್ನು ಓದಿದರು. ಬಹು ಪಕ್ಷಗಳ ಬೆಂಬಲದೊಂದಿಗೆ ನಡೆದ ಸಭೆಯಲ್ಲಿ ರಾಜಕೀಯ ಪ್ರಾತಿನಿಧ್ಯ ಮತ್ತು ಪ್ರಾದೇಶಿಕ ಸಮತೋಲನದ ಬಗ್ಗೆ ಸಭೆಯಲ್ಲಿದ್ದ ಎಲ್ಲ ಪಕ್ಷಗಳ ಮುಖಂಡರು ಕಳವಳ ವ್ಯಕ್ತಪಡಿಸಿದರು.

ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕೆಂದು ಜಂಟಿ ಕ್ರಿಯಾ ಸಮಿತಿ ಸರ್ವಾನುಮತದಿಂದ ಒತ್ತಾಯಿಸಿತು. 1971 ರ ಜನಗಣತಿಯ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಸಂಸದೀಯ ಕ್ಷೇತ್ರಗಳ ಮೇಲಿನ ಪುನರ್ವಿಂಗಡನೆಯನ್ನು ಮುಂದಿನ 25 ವರ್ಷಗಳವರೆಗೆ ಯಥಾಸ್ಥಿತಿ ಕಾಪಾಡಬೇಕು ಎಂದು ಒತ್ತಾಯಿಸಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version