ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

P

Peepal Media • ದೇಶ

• 1 ನಿಮಿಷದ ಓದು

ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ರಾಹುಲ್ ಗಾಂಧಿ | ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. 2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಜಾರ್ಖಂಡ್‌ನ ಚೈಬಾಸಾದಲ್ಲಿರುವ ಸಂಸದ-ಶಾಸಕರ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ರಾಹುಲ್ ಅವರ ವಕೀಲರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.

2018ರಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಅಮಿತ್ ಶಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ ಎಂದು ರಾಹುಲ್ ಆರೋಪಿಸಿದ್ದರು.

ಬಿಜೆಪಿ ನಾಯಕ ಪ್ರತಾಪ್ ಕಟಿಯಾರ್ ಅವರು ರಾಹುಲ್‌ ಗಾಂಧಿಯವರ ಹೇಳಿಕೆಅವಮಾನಕರ ಮತ್ತು ಖ್ಯಾತಿಗೆ ಹಾನಿಯನ್ನುಂಟುಮಾಡುವಂತಿವೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಜುಲೈ 9, 2018 ರಂದು ಚೈಬಾಸಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಯಿತು.

ನಂತರ, ಜಾರ್ಖಂಡ್ ಹೈಕೋರ್ಟ್‌ ಆದೇಶದಂತೆ, ಫೆಬ್ರವರಿ 2020ರಲ್ಲಿ ಪ್ರಕರಣವನ್ನು ರಾಂಚಿಯ ಸಂಸದ-ಶಾಸಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ನಂತರ ಅಲ್ಲಿಂದ ಪ್ರಕರಣವನ್ನು ಚೈಬಾಸಾ ಸಂಸದ-ಶಾಸಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ಅಲ್ಲಿ ಅರ್ಜಿಯನ್ನು ಪರಿಗಣಿಸಿದ ಮ್ಯಾಜಿಸ್ಟ್ರೇಟ್ ರಾಹುಲ್‌ ಗಾಂಧಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರು. ಆದರೆ, ರಾಹುಲ್ ಪದೇ ಪದೇ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರೊಂದಿಗೆ, ನ್ಯಾಯಾಲಯವು ಆರಂಭದಲ್ಲಿ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ನಂತರ ರಾಹುಲ್ ವಾರಂಟ್‌ಗೆ ತಡೆ ನೀಡುವಂತೆ ಕೋರಿ ಜಾರ್ಖಂಡ್ ಹೈಕೋರ್ಟ್‌ನ ಮೊರೆ ಹೋದರು.

ಆದರೆ ನ್ಯಾಯಾಲಯವು ಮಾರ್ಚ್ 20, 2024ರಂದು ಅರ್ಜಿಯನ್ನು ವಜಾಗೊಳಿಸಿತು. ಇದರೊಂದಿಗೆ, ರಾಹುಲ್ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿಯನ್ನು ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಚೈಬಾಸಾ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಇದೀಗ ಸಂಸದ-ಶಾಸಕದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಈ ನಿಟ್ಟಿನಲ್ಲಿ, ಜೂನ್ 26ರಂದು ರಾಹುಲ್ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸ್ಪಷ್ಟ ಆದೇಶಗವನ್ನು ಹೊರಡಿಸಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version