ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಲ್ಲ ಪೆಟ್ರೋಲ್‌ ಬಂಕ್‌ಗಳಲ್ಲಿ ಮೋದಿ ಕಿ ಗ್ಯಾರಂಟಿ ಹೋರ್ಡಿಂಗ್‌ ಅಳವಡಿಕೆಗೆ ಸೂಚನೆ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಎಲ್ಲ ಪೆಟ್ರೋಲ್‌ ಬಂಕ್‌ಗಳಲ್ಲಿ ಮೋದಿ ಕಿ ಗ್ಯಾರಂಟಿ ಹೋರ್ಡಿಂಗ್‌ ಅಳವಡಿಕೆಗೆ ಸೂಚನೆ

ಹೊಸದಿಲ್ಲಿ: ಸರ್ಕಾರಿ ಒಡೆತನದ ಇಂದನ ರಿಟೇಲರ್‌ಗಳು ಈಗ ಪೆಟ್ರೋಲ್‌ ಬಂಕ್‌‌ಗಳಲ್ಲಿರುವ ಸರ್ಕಾರಿ ಕಲ್ಯಾಣ ಯೋಜನೆಗಳ ಹೋರ್ಡಿಂಗ್‌ಗಳಲ್ಲಿ “ಮೋದಿ ಸರ್ಕಾರ್‌ ಕಿ ಗ್ಯಾರಂಟಿ ಮತ್ಲಬ್‌ ಆಸಾನ್‌ ಜೀವನ್‌ ಕಿ ಗ್ಯಾರಂಟಿ” (ಮೋದಿ ಸರ್ಕಾರದ ಗ್ಯಾರಂಟಿಯ ಅರ್ಥವೆಂದರೆ ಸುಲಭ ಜೀವನದ ಗ್ಯಾರಂಟಿ) ಎಂದು ಬರೆಯಲಾಗಿರುವ ಹೊಸ ಹೋರ್ಡಿಂಗ್‌ಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ.


ಬುಧವಾರ ಸಂಜೆಯೊಳಗೆ ಈ ಹೊಸ ಫ್ಲೆಕ್ಸ್‌ ಹೋರ್ಡಿಂಗ್‌ಗಳನ್ನು ಅಳವಡಿಸಲು “ಸಹಕರಿಸಬೇಕು” ಎಂದು ಎಲ್ಲಾ ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗಳಿಗೆ ಹೇಳಲಾಗಿದೆ. ಈ ಹೋರ್ಡಿಂಗ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯ ಫಲಾನುಭವಿಯೊಬ್ಬರಿಗೆ ಎಲ್‌ಪಿಜಿ ಸಿಲಿಡರ್‌ ನೀಡುವ ಫೋಟೋ ಕೂಡ ಇದೆ.


ತೈಲ ಕಂಪನಿಗಳು ನಿಯೋಜಿಸಲ್ಪಟ್ಟ ಹೋರ್ಡಿಂಗ್‌ ಅಳವಡಿಸುವವರು ಬಾರದೇ ಇದ್ದಲ್ಲಿ ಆಯಾ ಮೇಲಧಿಕಾರಿಗಳಿಗೆ ತಿಳಿಸುವಂತೆಯೂ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ ಎಂದು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.


ಕೇಂದ್ರ ತೈಲ ಸಚಿವಾಲಯದ ಅನೌಪಚಾರಿಕ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದ್ದು, ಇದರಿಂದಾಗಿ ಇಂಡಿಯನ್‌ ಆಯಿಲ್‌, ಹಿಂದುಸ್ತಾನ್‌ ಪೆಟ್ರೋಲಿಯಂ ಮತ್ತು ಭಾರತ್‌ ಪೆಟ್ರೋಲಿಯಂ ಸಂಸ್ಥೆಗಳು ನೂರಾರು ಕೋಟಿ ರೂಪಾಯಿ ವೆಚ್ಚ ಭರಿಸಬೇಕಾಗುತ್ತದೆ, ದೇಶದಲ್ಲಿರುವ ಸುಮಾರು 88,000 ಪೆಟ್ರೋಲ್‌ ಬಂಕ್‌ಗಳಲ್ಲಿ ಶೇ 90ರಷ್ಟು ಬಂಕ್‌ಗಳು ಈ ಮೂರು ಕಂಪನಿಗಳ ಒಡೆತನದಲ್ಲಿದೆ.


ಆದರೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದಾಕ್ಷಣ ಇಂತಹ ಹೋರ್ಡಿಂಗ್‌ಗಳನ್ನು ತೆಗೆಯಬೇಕಾಗುತ್ತದೆ. ಇಷ್ಟು ಕಡಿಮೆ ಅವಧಿಗೆ ನೂರಾರು ಕೋಟಿ ರೂ.ಗಳನ್ನು ಖರ್ಚು ಮಾಡುವ ಅಗತ್ಯವಿದೆಯೇ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು