ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಪಪ್ರಚಾರದ ಮೂಲಕ ವಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ

P

Peepal Media • ದೇಶ

• 1 ನಿಮಿಷದ ಓದು

ಅಪಪ್ರಚಾರದ ಮೂಲಕ ವಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ

ಬಿಜೆಪಿ ನೇತತ್ವದ ಎನ್‌ಡಿಎ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದ ಆತ್ಮವನ್ನು ಪುಡಿಮಾಡಿದ್ದಾರೆ ಮತ್ತು ಪ್ರಜಾಪ್ರಭುತ್ವದ ಎಲ್ಲಾ ಮಾನದಂಡಗಳನ್ನು ತಿರಸ್ಕರಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.

ಭುವನೇಶ್ವರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ಒಂದೇ ಒಂದು ಗುರಿ ಇದೆ, ಜನರನ್ನು ದಾರಿ ತಪ್ಪಿಸುವ ಮೂಲಕ ಹೇಗಾದರೂ ಅಧಿಕಾರವನ್ನು ಹಿಡಿಯುವುದು ಎಂದು ಹೇಳಿದರು.

ಅಧಿಕಾರವನ್ನು ತಮ ಜನಸಿದ್ಧ ಹಕ್ಕು ಎಂದು ಪರಿಗಣಿಸುವವರು ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಅಧಿಕಾರದಲ್ಲಿಲ್ಲ ಎಂದು ಅವರು ಪ್ರತಿಪಕ್ಷಗಳನ್ನು ಕೆಣಕಿದರು.ವಿವಿಧ ವಿಷಯಗಳಲ್ಲಿ ರಾಜಕೀಯ ಪಕ್ಷಗಳ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ಸಹಜ ಮತ್ತು ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮತ್ತು ಆಂದೋಲನಗಳನ್ನು ಆಶ್ರಯಿಸಲು ಅವರಿಗೆ ಹಕ್ಕಿದೆ ಎಂದು ಪ್ರಧಾನಿ ಹೇಳಿದರು.

ನಾನು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದ ಅವಧಿಯಲ್ಲಿ ನಾನು ರಾಜಕೀಯದ ವಿವಿಧ ಬಣ್ಣಗಳನ್ನು ನೋಡಿದೆ. ಪ್ರಜಾಪ್ರಭುತ್ವದಲ್ಲಿ ರಚನಾತಕ ವಿರೋಧ ಸಹಜ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಯಾವುದೇ ನಿರ್ಧಾರದಲ್ಲಿ ಭಿನ್ನಾಭಿಪ್ರಾಯಗಳಿರಬಹುದು ಎಂದರು. ಆದರೆ, ಪ್ರತಿಯೊಬ್ಬರೂ ಈಗ ಪ್ರತಿಭಟನೆಗಳನ್ನು ಆಯೋಜಿಸುವ ವಿಧಾನದಲ್ಲಿ ದೊಡ್ಡ ವ್ಯತ್ಯಾಸವನ್ನು ಅನುಭವಿಸಬಹುದು ಎಂದು ಪ್ರಧಾನಿ ಮೋದಿ ಹೇಳಿದರು.

ಸಂವಿಧಾನದ ಆತವನ್ನು ಹತ್ತಿಕ್ಕಲಾಗಿದೆ ಮತ್ತು ಪ್ರಜಾಪ್ರಭುತ್ವದ ಎಲ್ಲಾ ಮಾನದಂಡಗಳನ್ನು ತಿರಸ್ಕರಿಸಲಾಗಿದೆ. ಬಿಜೆಪಿ ನೇತತ್ವದ ಎನ್‌ಡಿಎಗೆ ಜನರು ತಮ ಜನಾದೇಶವನ್ನು ನೀಡಿದ್ದಾರೆ ಎಂಬ ಅಂಶವನ್ನು ಮೊದಲಿನಿಂದಲೂ ವಿರೋಧ ಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಾಗಿಲ್ಲ ಎಂದು ಪ್ರಧಾನಿ ಹೇಳಿದರು.

ಕಳೆದ ದಶಕದಿಂದ ಅಧಿಕಾರವನ್ನು ನಿರಾಕರಿಸಲಾಗಿದೆ, ಅಂತಹ ಪಕ್ಷಗಳು ಈಗ ತುಂಬಾ ಕೋಪದಿಂದ ತುಂಬಿವೆ, ಅವರು ದೇಶ ಮತ್ತು ಅದರ ಜನರ ವಿರುದ್ಧ ಪಿತೂರಿ ಮಾಡಲು ಹಿಂಜರಿಯುವುದಿಲ್ಲ. ಅವರು ಜೂತ್‌ ಔರ್‌ ಅಫ್ವಾ ಕಿ ದುಕಾನ್‌‍ೞ (ಸುಳ್ಳು ಮತ್ತು ವದಂತಿಗಳು) ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಹೇಳಿದರು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version