ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್

Pa. Ranjith Supports Udayanidhi Stalin Statement on Sanathana Dharma:

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಆಡಳಿತ ಪಕ್ಷದ ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ಖ್ಯಾತ ನಿರ್ದೇಶಕ ಪಾ ರಂಜಿತ್‌ ಬೆಂಬಲವಾಗಿ ನಿಂತಿದ್ದಾರೆ.

ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ, ಶಾಸಕ/ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಉದಯನಿಧಿ ಸ್ಟಾಲಿನ್ ಹೀರೋ ಆಗಿಯೂ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇನೊಂದು ಕಡೆ ಸನಾತನ ಧರ್ಮದಲ್ಲಿ ನಂಬಿಕೆ ಇರುವ ಅನೇಕರು ಉದಯನಿಧಿಯತ್ತ ಮಣ್ಣು ಎರಚುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಬೆಂಬಲಕ್ಕೆ ಬಂದಿರುವ ನಿರ್ದೇಶಕ ರಂಜಿತ್‌ ಉದಯನಿಧಿಯ ವಿರುದ್ಧ ಕಾರಲಾಗುತ್ತಿರುವ ದ್ವೇಷ ಮತ್ತು ಎಸಗಲಾಗುತ್ತಿರುವ ದಾಳಿಯು ದುರದೃಷ್ಟಕರ ಎಂದಿದ್ದಾರೆ. ಈ ಕುರಿತು ಟ್ವೀಟ್‌ (X) ಮಾಡಿರುವ ಅವರು ತಮ್ಮ ಟ್ವೀಟಿನಲ್ಲಿ,

“ಸಚಿವ ಉದಯನಿಧಿ ಸನಾತನ ಧರ್ಮದ ವಿರುದ್ಧ ನೀಡಿರುವ ಹೇಳಿಕೆಯು ಶತಮಾನಗಳ ಜಾತಿ ವಿರೋಧಿ ಚಳವಳಿಯ ಮೂಲ ತತ್ವವಾಗಿದೆ. ಜಾತಿ ಮತ್ತು ಲಿಂಗದ ಹೆಸರಿನಲ್ಲಿ ನಡೆಯುತ್ತಿರುವ ಅಮಾನವೀಯ ಆಚರಣೆಗಳ ಬೇರು ಸನಾತನ ಧರ್ಮದಲ್ಲಿದೆ. ಕ್ರಾಂತಿಕಾರಿ ನಾಯಕ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಜಾತಿ ವಿರೋಧಿ ಸುಧಾರಕರಾದ ಅಯೋದಿದಾಸ್ ಪಂಡಿತರ್, ತಂದೈ ಪೆರಿಯಾರ್, ಮಹಾತ್ಮ ಫುಲೆ, ಸಂತ ರವಿದಾಸ್ ಮುಂತಾದವರು ತಮ್ಮ ಜಾತಿ ವಿರೋಧಿ ಸಿದ್ಧಾಂತದಲ್ಲಿ ಇದನ್ನೇ ಪ್ರತಿಪಾದಿಸಿದ್ದಾರೆ.

ಸಚಿವರ ಹೇಳಿಕೆಯನ್ನು ತಿರುಚಿ ಅದನ್ನು ನರಮೇಧದ ಕರೆ ಎಂದು ದುರ್ಬಳಕೆ ಮಾಡಿಕೊಳ್ಳುವ ದುರುದ್ದೇಶಪೂರಿತ ಧೋರಣೆ ಸ್ವೀಕಾರಾರ್ಹವಲ್ಲ. ಸಚಿವರ ಮೇಲೆ ಹೆಚ್ಚುತ್ತಿರುವ ದ್ವೇಷ ಮತ್ತು ದಾಳಿಯು ತುಂಬಾ ಕಳವಳಕಾರಿಯಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಹೊಂದಿರುವ ಸಮಾಜವನ್ನು ಸ್ಥಾಪಿಸಲು ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡುವ ಉದಯನಿಧಿಯವರ ಮಾತುಗಳಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ.

ಸಚಿವ ಉದಯನಿಧಿ ಸ್ಟಾಲಿನ್ ಅವರೊಂದಿಗೆ ನಾನಿದ್ದೇನೆ!” ಎಂದಿದ್ದಾರೆ.

ಒಟ್ಟಿನಲ್ಲಿ ಈ ವಿವಾದವು ವಿವಿಧ ತಿರುವುಗಳನ್ನು ತೆಗೆದುಕೊಳ್ಳುತ್ತಿರುವುದರ ಜೊತೆ ಜೊತೆಯಲ್ಲೇ ತಮಿಳುನಾಡಿಗೆ ಇನ್ನೊಬ್ಬ ದ್ರಾವಿಡ ನಾಯಕನ್ನು ನೀಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಇನ್ನು ಉದಯನಿಧಿ ತಾನು ತನ್ನ ಮಾತಿಗೆ ಬದ್ಧನಾಗಿದ್ದ, ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು