ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆಮಹದೇವ್ ಬೆಟ್ಟಿಂಗ್ ಆಯಪ್ ಜಾಲಕ್ಕೆ ಸಿಬಿಐ ಶಾಕ್; 6 ರಾಜ್ಯಗಳ 33 ಕಡೆ ದಾಳಿಆರ್‌ಎಸ್‌ಎಸ್‌ ನಂಟಿನ ಆರೋಪ: ನಿಗಮ ಮಂಡಳಿ ಹುದ್ದೆಗಳಿಗೆ ರಾಜೀನಾಮೆ ನೀಡಲು ಸೂಚನೆKPS ಶಾಲೆಗಳ ಬಲವರ್ಧನೆ – ಕರಡು ಪ್ರಕಟಿಸಿದ ರಾಜ್ಯ ಸರ್ಕಾರಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವಿವಾದಾತ್ಮಕ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲುಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್ಮೇಕೆದಾಟು ಯೋಜನೆಗೆ ವಿರೋಧ ರಾಜಕೀಯ ಪ್ರೇರಿತ: ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪ್ರಧಾನಿ ಒಪ್ಪಿಗೆಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಮಾಡುವ ಅವಶ್ಯಕತೆ ಏನಿತ್ತು – ನಿ. ನ್ಯಾ. ನಾಗಮೋಹನ್‌ನಾಳೆಯಿಂದ ತುಂಗಭದ್ರಾ ಕಾಲುವೆ ನಾಳೆಯಿಂದ ಬಂದ್ – ರೈತರಿಂದ ತೀವ್ರ ಆಕ್ರೋಶಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆಮಧುಮೇಹ ಪತ್ತೆಯಲ್ಲಿನ ವಿಳಂಬ ಆತಂಕಕಾರಿ; ಆರಂಭಿಕ ತಪಾಸಣೆಗೆ WHO ಕರೆವಿಶ್ವ ಬಾಕ್ಸ್ ಆಫೀಸ್‌ನಲ್ಲಿ ₹1,110 ಕೋಟಿ ಗಳಿಸಿದ ‘ರಾಮಾಯಣ’; ಯಶ್‌ಗೆ ಮತ್ತೊಂದು 1,000 ಕೋಟಿ ದಾಖಲೆ!ಋತುಬಂಧದ ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತುತಾರೆ’ ಯೋಜನೆ ಜಾರಿ; ನಟಿ, ಮಾಜಿ ಸಂಸದೆ ರಮ್ಯಾ ರಾಯಭಾರಿ

81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!

MMurali Maluru

Murali Maluru ದೇಶ

• 1 ನಿಮಿಷದ ಓದು

81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!

ಅನಂತಪುರಂ: ಆಂಧ್ರಪ್ರದೇಶದ ಎರಡು ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯ ಸ್ಥಾನಕ್ಕಾಗಿ ಬಹಿರಂಗವಾಗಿ ಹರಾಜು ನಡೆದಿರುವ ಬಗ್ಗೆ ವರದಿಯಾಗಿದೆ. ಒಂದು ಗ್ರಾಮದಲ್ಲಿ 29 ಲಕ್ಷ ರೂಪಾಯಿಗೆ ಹರಾಜು ನಡೆದಿದ್ದರೆ, ಮತ್ತೊಂದು ಗ್ರಾಮದಲ್ಲಿ ಬರೋಬ್ಬರಿ 81 ಲಕ್ಷ ರೂಪಾಯಿಗೆ ಬಿಡ್‌ ಮಾಡಲಾಗಿದೆ.

ಅನಂತಪುರಂ ಜಿಲ್ಲೆಯ ಶಿಂಗನಮಲ ಕ್ಷೇತ್ರದ ಗಾರ್ಲದಿನ್ನೆ ತಾಲೂಕಿನ ಕೊಪ್ಪಲಕೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರಾಮಮಂದಿರದ ಬಳಿ ಗ್ರಾಮಸ್ಥರು ಸೇರಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದೆ.

ಈ ಹರಾಜಿನಲ್ಲಿ ಟಿಡಿಪಿ ನಾಯಕ ಎಲ್‌ಐಸಿ ಆದಿನಾರಾಯಣ ಅವರು 29 ಲಕ್ಷ ರೂಪಾಯಿ ಬಿಡ್‌ ಮಾಡಿ ಮೊದಲ ಸ್ಥಾನ ಪಡೆದಿದ್ದಾರೆ. ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮತ್ತೊಂದು ಗ್ರಾಮದಲ್ಲಿ 81 ಲಕ್ಷ ರೂಪಾಯಿ ಬಿಡ್‌!

ಇದೇ ರೀತಿಯ ಮತ್ತೊಂದು ಘಟನೆ ಪಲ್ನಾಡು ಜಿಲ್ಲೆಯ ನರಸರಾವ್‌ಪೇಟೆ ಸಮೀಪದ ಜೊನ್ನಲಗಡ್ಡ ಗ್ರಾಮದಲ್ಲೂ ನಡೆದಿದೆ.

ಇಲ್ಲಿಯೂ ಸದಸ್ಯ ಸ್ಥಾನಕ್ಕಾಗಿ ಹರಾಜು ನಡೆಸಲಾಗಿದೆ. ಈ ಹರಾಜಿನಲ್ಲಿ ಯರ್ರಾ ಶ್ರೀನಿವಾಸರಾವ್‌ ಅವರು 81 ಲಕ್ಷ ರೂಪಾಯಿ ಬಿಡ್‌ ಮಾಡಿ ಗೆದ್ದಿದ್ದಾರೆ. ಅವರ ಎದುರಾಳಿ ಕೊರಿಟಾಲ ಗೋಪಾಲರಾವ್‌ ಅವರು 77 ಲಕ್ಷ ರೂಪಾಯಿ ನೀಡಲು ಸಿದ್ಧರಿದ್ದರು ಎಂದು ವರದಿ ಹೇಳಿದೆ.

ಒಟ್ಟು ಮೂವರು ಈ ಹರಾಜಿನಲ್ಲಿ ಭಾಗವಹಿಸಿದ್ದರು. ಕೊನೆಗೆ ಅತಿ ಹೆಚ್ಚು ಹಣ ಬಿಡ್‌ ಮಾಡಿದ ಶ್ರೀನಿವಾಸರಾವ್‌ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಗ್ರಾಮದ ಹಿರಿಯರು ನಿರ್ಧರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಹರಾಜಿಗೆ ಸ್ಥಾನವಿದೆಯೇ?

ಗ್ರಾಮದ ಅಭಿವೃದ್ಧಿ, ಕುಡಿಯುವ ನೀರು, ರಸ್ತೆ, ಚರಂಡಿ, ಸ್ವಚ್ಛತೆ ಸೇರಿದಂತೆ ಜನರ ದಿನನಿತ್ಯದ ಸಮಸ್ಯೆಗಳನ್ನು ಪರಿಹರಿಸಬೇಕಾದ ಜವಾಬ್ದಾರಿ ಗ್ರಾಮ ಪಂಚಾಯಿತಿ ಸದಸ್ಯ ಹುದ್ದೆಯ ಮೇಲಿದೆ. ಇಂತಹ ಜವಾಬ್ದಾರಿಯುತ ಸ್ಥಾನಕ್ಕೆ ಹಣದ ಆಧಾರದ ಮೇಲೆ ಹರಾಜು ನಡೆಯುತ್ತಿರುವ ವರದಿಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

MMurali Maluru

Murali Maluru

Peepal Media · ದೇಶ ವಿಭಾಗ

Murali MV is a reporter cum presenter at Peepal Media, covering sports and political affairs. An avid reader with a keen interest in current affairs, he brings curiosity, insight and a passion for storytelling to his journalism. His reporting focuses on exploring key developments and issues shaping the worlds of sports and politics.

ಸಂಬಂಧಿತ ಸುದ್ದಿಗಳು