ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಸತ್ತು ಚರ್ಚೆಯ ವೇದಿಕೆ ಎನ್ನುವುದನ್ನು ಎನ್‌ಡಿಎ ನೆನಪಿಟ್ಟುಕೊಳ್ಳಬೇಕು – ಸಂಸದ ಜಾನ್ ಬ್ರಿಟಾಸ್

PPeepal Media

Peepal Media • ದೇಶ

• 1 ನಿಮಿಷದ ಓದು

ಸಂಸತ್ತು ಚರ್ಚೆಯ ವೇದಿಕೆ ಎನ್ನುವುದನ್ನು ಎನ್‌ಡಿಎ ನೆನಪಿಟ್ಟುಕೊಳ್ಳಬೇಕು – ಸಂಸದ ಜಾನ್ ಬ್ರಿಟಾಸ್

ಸಂಸತ್ ಅಧಿವೇಶನಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಸಿಪಿಐ(ಎಂ) ರಾಜ್ಯಸಭಾ ಉಪನಾಯಕ ಜಾನ್ ಬ್ರಿಟಾಸ್ ಆಗ್ರಹಿಸಿದ್ದಾರೆ. ಸಂಸತ್ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಆಯೋಜಿಸಿದ್ದ ಸರ್ವಪಕ್ಷ ಸಭೆಯಲ್ಲಿ ಅವರು ಮಾತನಾಡಿದರು. ಸಂಸತ್ತು ಚರ್ಚೆಗೆ ವೇದಿಕೆ ಎಂಬ ಸಂದೇಶವನ್ನೂ ಲೋಕಸಭೆ ಚುನಾವಣೆ ಫಲಿತಾಂಶ ಸಾರುತ್ತಿದೆ ಎಂದು ಅವರು ಹೇಳಿದರು. ಅದನ್ನು ಅರ್ಥ ಮಾಡಿಕೊಂಡು ಮುನ್ನಡೆಯಲು ಸರಕಾರ ಸಿದ್ಧವಾಗಬೇಕು ಎಂದು ಕೋರಿದರು.

ಈ ಹಿಂದೆ ಪ್ರತಿಪಕ್ಷಗಳು ಯಾವುದೇ ವಿಷಯ ಪ್ರಸ್ತಾಪಿಸಿದರೆ ಸಚಿವರ ಬಳಿಗೆ ಬಂದು ಉತ್ತರಿಸಲಾಗುತ್ತಿತ್ತು, ಇಲ್ಲವಾದಲ್ಲಿ ಆ ಕುರಿತು ಪ್ರತ್ಯೇಕ ಚರ್ಚೆ ನಡೆಸಲಾಗುತ್ತಿತ್ತು ಎಂದು ಅವರುನೆನಪಿಸಿದರು. ಈಗೊಂದು ದಶಕದಿಂದ ಇವುಗಳ ಪ್ರಸ್ತಾಪವೇ ಇಲ್ಲ ಎಂದು ಅವರು ಟೀಕಿಸಿದರು.

ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನದಲ್ಲಿ ಮಣಿಪುರ ಮತ್ತು ನೀಟ್ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒತ್ತಾಯಿಸಿದರೂ ಅವಕಾಶ ನೀಡಲಿಲ್ಲ ಎಂದು ಅವರು ನೆನಪಿಸಿದರು. ಈ ವಿಧಾನವನ್ನು ಬದಲಿಸಿ ಮಾತುಕತೆಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.

ಒಕ್ಕೂಟ ತತ್ವಗಳನ್ನು ಗಾಳಿಗೆ ತೂರಲಾಗಿದೆ ಎಂದು ಟೀಕಿಸಿದ ಅವರು, ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳಲು ಮತ್ತು ರಾಜ್ಯಗಳಲ್ಲಿನ ಸರ್ಕಾರಗಳನ್ನು ಉರುಳಿಸಲು ರಾಜ್ಯಪಾಲರು ಪೈಪೋಟಿ ನಡೆಸುತ್ತಿರುವುದು ಅತಿರೇಕದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ನಿರುದ್ಯೋಗ, ಬಡತನದಂತಹ ಹಲವು ವಿಷಯಗಳಲ್ಲಿ ಸರಕಾರದ ಲೆಕ್ಕಾಚಾರದಲ್ಲಿ ಅಸಂಗತತೆ ಇದೆ ಎಂದರು. ಜನಗಣತಿ ನಡೆಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದಿರುವ ಬ್ರಿಟಾಸ್, ನೀಟ್, ಮಣಿಪುರ, ಕಾಶ್ಮೀರ, ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ಅಗ್ನಿಪಥ್ ಮುಂತಾದ ಎಲ್ಲ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧರಾಗಿರಬೇಕು ಎಂದು ಕೇಳಿಕೊಂಡರು.

ಕಾಂವಾಡಿ ಯಾತ್ರೆಗೆ ಸಂಬಂಧಿಸಿದ ಆದೇಶದಿಂದ ಕೋಮು ಸೌಹಾರ್ದತೆಗೆ ಆಗುವ ಅಪಾಯವನ್ನು ಅರಿತು ಅದನ್ನು ಹಿಂಪಡೆಯುವಂತೆ ಯುಪಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಕೇಂದ್ರ ಸಿದ್ಧವಾಗಬೇಕು ಎಂದು ಅವರು ಕೇಳಿಕೊಂಡರು. ಸಭೆಯ ಅಧ್ಯಕ್ಷತೆ ವಹಿಸಿರುವ ರಾಜನಾಥ್ ಸಿಂಗ್ ಅವರು ಈ ಕುರಿತು ಮುತುವರ್ಜಿ ವಹಿಸಬೇಕು ಎಂದು ಅವರು ಕೋರಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು