ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇನ್ನು ಸಣ್ಣ ಕನಸುಗಳು ಸಾಲದು, ದೇಶದ ಸಂಕಲ್ಪವೂ ದೊಡ್ಡದಿರಬೇಕು’: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಸಂದೇಶ

PPeepal Media

Peepal Media ದೇಶ

• 1 ನಿಮಿಷದ ಓದು

ಇನ್ನು ಸಣ್ಣ ಕನಸುಗಳು ಸಾಲದು, ದೇಶದ ಸಂಕಲ್ಪವೂ ದೊಡ್ಡದಿರಬೇಕು’: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಸಂದೇಶ

ದೆಹಲಿ: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಕೊತ್ತಲದಿಂದ ಸತತ 13ನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ಇದಕ್ಕೂ ಮುನ್ನ ಅವರು ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿದ್ದು, 21 ಕುಶಾಲತೋಪುಗಳ ಗೌರವ ಸಮರ್ಪಿಸಲಾಯಿತು.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ‘ವಂದೇ ಮಾತರಂ’ ಗೀತೆಯ 150 ವರ್ಷಗಳ ಸಂಭ್ರಮಾಚರಣೆ ಹಾಗೂ ‘ಯುವಶಕ್ತಿ’ಗೆ ವಿಶೇಷ ಆದ್ಯತೆ ನೀಡಲಾಗಿತ್ತು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿಯವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸೇನಾ ಪಡೆಗಳ ಮುಖ್ಯಸ್ಥರು ಸ್ವಾಗತಿಸಿದರು.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ದೇಶದ ಯುವಶಕ್ತಿ ಹಾಗೂ ಮಹಾನ್ ಸಂಕಲ್ಪಗಳ ಬಲದಿಂದ ಭಾರತವು ಮುನ್ನಡೆಯುತ್ತಿದೆ. ಇನ್ನು ಮುಂದೆ ಸಣ್ಣಪುಟ್ಟ ಕನಸುಗಳನ್ನು ಹೊತ್ತು ಸಾಗಲು ಸಾಧ್ಯವಿಲ್ಲ, ದೇಶದ ಸಂಕಲ್ಪಗಳು ಮತ್ತು ಗುರಿಗಳು ಉನ್ನತ ಮಟ್ಟದ್ದಾಗಿರಬೇಕು” ಎಂದು ಕರೆ ನೀಡಿದರು.

ರೈತರಿಗೆ ರಸಗೊಬ್ಬರ ಸಬ್ಸಿಡಿ ಭರವಸೆ:

ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಬಿಕ್ಕಟ್ಟಿನ ನಡುವೆಯೂ ದೇಶದ ರೈತರ ಮೇಲೆ ರಸಗೊಬ್ಬರದ ಬೆಲೆ ಏರಿಕೆಯ ಹೊರೆ ಬೀಳದಂತೆ ಸರ್ಕಾರ ನೋಡಿಕೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದರು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯೂರಿಯಾ ಬೆಲೆ ಪ್ರತಿ ಚೀಲಕ್ಕೆ ಸುಮಾರು ₹3,000 ತಲುಪಿದ್ದರೂ ಭಾರತೀಯ ರೈತರಿಗೆ ಅದನ್ನು ಕೇವಲ ₹300 ಕ್ಕೆ ಒದಗಿಸಲಾಗುತ್ತಿದೆ. ಅದೇ ರೀತಿ ಡಿಎಪಿ (DAP) ಬೆಲೆ ಜಾಗತಿಕವಾಗಿ ₹5,000 ಕ್ಕೆ ತಲುಪಿದ್ದರೂ ರೈತರಿಗೆ ₹1,350 ರ ರಿಯಾಯಿತಿ ದರದಲ್ಲಿ ಪೂರೈಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

‘ವಿಕಸಿತ ಭಾರತ@2047’ಗೆ ಯುವಶಕ್ತಿಯೇ ಬೆನ್ನೆಲುಬು:

2047 ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ವನ್ನಾಗಿ ರೂಪಿಸುವ ಪಯಣದಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದ ಪ್ರಧಾನಿ, ಈ ಅಭಿವೃದ್ಧಿ ಪರ್ವದ ಗರಿಷ್ಠ ಪ್ರಯೋಜನ ಮತ್ತು ಯಶಸ್ಸು ದೇಶದ ಯುವಪೀಳಿಗೆಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು