ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಷ್ಯಾ-ಉಕ್ರೇನ್ ದೇಶಗಳಿಗೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ: ಭಾರತದ ಪ್ರಯತ್ನವನ್ನು ಶ್ಲಾಘಿಸಿದ ರಷ್ಯಾ, ಉಕ್ರೇನ್

PPeepal Media

Peepal Media ದೇಶ

• 1 ನಿಮಿಷದ ಓದು

ರಷ್ಯಾ-ಉಕ್ರೇನ್ ದೇಶಗಳಿಗೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ: ಭಾರತದ ಪ್ರಯತ್ನವನ್ನು ಶ್ಲಾಘಿಸಿದ ರಷ್ಯಾ, ಉಕ್ರೇನ್

ದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸಲು ಸಂಧಾನ ಮತ್ತು ರಾಜತಾಂತ್ರಿಕ ಮಾತುಕತೆಗಳೇ ಪರಿಹಾರ ಎಂಬ ಭಾರತದ ನಿಲುವಿಗೆ ಉಭಯ ರಾಷ್ಟ್ರಗಳಿಂದ ಮಹತ್ವದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚೆಗೆ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಯುದ್ಧವನ್ನು ನಿಲ್ಲಿಸಿ ಶಾಂತಿಯತ್ತ ಹೆಜ್ಜೆ ಇಡುವ ತುರ್ತು ಅಗತ್ಯವನ್ನು ಪುನರುಚ್ಚರಿಸಿದ್ದರು.

ತಮ್ಮ ಸಂದರ್ಶನವೊಂದರಲ್ಲಿ ಪ್ರಧಾನಿ ಮೋದಿಯವರ ಈ ಪ್ರಯತ್ನವನ್ನು ಉಲ್ಲೇಖಿಸಿರುವ ಪುಟಿನ್, “ಮೋದಿಯವರನ್ನು ಭೇಟಿಯಾದ ಪ್ರತಿ ಬಾರಿಯೂ ಅವರು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ವಿಷಯವನ್ನು ಪ್ರಸ್ತಾಪಿಸುತ್ತಾರೆ. ಮಾತುಕತೆ ಮತ್ತು ಶಾಂತಿಯ ಮೂಲಕ ಬಿಕ್ಕಟ್ಟು ಬಗೆಹರಿಸಲು ಮೋದಿ ನಡೆಸುತ್ತಿರುವ ನಿರಂತರ ಪ್ರಯತ್ನಗಳಿಗೆ ಧನ್ಯವಾದಗಳು,” ಎಂದು ಪ್ರಶಂಸಿಸಿದ್ದಾರೆ. ಆದರೆ, ಶಾಂತಿ ಮಾತುಕತೆಯ ಮೂಲ ಷರತ್ತುಗಳ ವಿಷಯದಲ್ಲಿ ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳು ಇನ್ನೂ ಮುಂದುವರಿದಿವೆ.

ಮತ್ತೊಂದೆಡೆ, ಭಾರತವನ್ನು ‘ಜಾಗತಿಕ ಶಕ್ತಿ’ (ಗ್ಲೋಬಲ್ ಪವರ್) ಎಂದು ಬಣ್ಣಿಸಿರುವ ಉಕ್ರೇನ್ ವಿದೇಶಾಂಗ ಸಚಿವ ಆಂಡ್ರಿ ಸಿಬಿಹಾ, ಪ್ರಧಾನಿ ಮೋದಿಯವರ ಶಾಂತಿ ಕರೆಯನ್ನು ಸ್ವಾಗತಿಸಿದ್ದಾರೆ. ರಾಜತಾಂತ್ರಿಕ ಮಾತುಕತೆಗೆ ಉಕ್ರೇನ್ ಸದಾ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ ಅವರು, ಕೀವ್‌ನಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ನಡೆಸಿದ ಮಹತ್ವದ ದ್ವಿಪಕ್ಷೀಯ ಸಭೆಯ ನಂತರ ಈ ಹೇಳಿಕೆ ನೀಡಿದ್ದಾರೆ.

ಈ ಭೇಟಿಯ ವೇಳೆ ರಷ್ಯಾದ ದಾಳಿಗಳು, ಕಪ್ಪು ಸಮುದ್ರದ ನೌಕಾಯಾನ ಮತ್ತು ಜಾಗತಿಕ ಆಹಾರ ಭದ್ರತೆಯ ಕುರಿತು ವಿಸ್ತೃತ ಚರ್ಚೆಗಳು ನಡೆದಿವೆ. ಈ ಯುದ್ಧಕ್ಕೆ ರಣರಂಗದಲ್ಲಿ ಪರಿಹಾರವಿಲ್ಲ, ರಾಜತಾಂತ್ರಿಕತೆಯೇ ಏಕೈಕ ಮಾರ್ಗ ಎಂದು ಜೈಶಂಕರ್ ಮತ್ತೊಮ್ಮೆ ದೃಢಪಡಿಸಿದ್ದು, ಭಾರತದ ಶಾಂತಿ ಪ್ರಯತ್ನಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು