ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಿಒಕೆಯಲ್ಲಿ ಮತ್ತೆ ರಕ್ತಪಾತ: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ ಪಾಕ್ ಸೇನೆಯಿಂದ ಗುಂಡಿನ ದಾಳಿ; 16 ಸಾವು!

PPeepal Media

Peepal Media ದೇಶ

• 1 ನಿಮಿಷದ ಓದು

ಪಿಒಕೆಯಲ್ಲಿ ಮತ್ತೆ ರಕ್ತಪಾತ: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ ಪಾಕ್ ಸೇನೆಯಿಂದ ಗುಂಡಿನ ದಾಳಿ; 16 ಸಾವು!

ರಾವಲಕೋಟ್: ‌ಪಾಕ್ ఆಕ್ರಮಿತ ಕಾಶ್ಮೀರದಲ್ಲಿ (PoK) ನಾಗರಿಕರ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಜೂನ್ 11ರಂದು ಭದ್ರತಾ ಪಡೆಗಳು ನಡೆಸಿದ ಭೀಕರ ಗುಂಡಿನ ದಾಳಿಗೆ 16 ಪ್ರತಿಭಟನಾಕಾರರು ಬಲಿಿಯಾಗಿದ್ದಾರೆ.

ತಮಗೆ ಹೆಚ್ಚಿನ ನಾಗರಿಕ ಹಕ್ಕುಗಳನ್ನು ನೀಡಬೇಕು ಹಾಗೂ ನಿತ್ಯೋಪಯೋಗಿ ವಸ್ತುಗಳ ಬೆಲೆಗಳನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿ ರಾವಲಕೋಟ್ ನಗರದ ಈದ್ಗಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ಆಯೋಜಿಸಲಾಗಿತ್ತು. ಗೋಧಿ ಹಿಟ್ಟು, ಅಕ್ಕಿ ಹಾಗೂ ವಿದ್ಯುತ್ ದರಗಳನ್ನು ಇಳಿಸುವಂತೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಶಾಂತಿಪ್ರಯುತವಾಗಿ ಧರಣಿ ನಡೆಸುತ್ತಿದ್ದಾಗ ಈ ರಕ್ತಪಾತ ಸಂಭವಿಸಿದೆ.

ಸ್ಥಳೀಯ ಮೂಲಗಳ ಪ್ರಕಾರ, ಮೈದಾನದಲ್ಲಿ ಸುಮಾರು 60 ರಿಂದ 70 ಸಾವಿರದಷ್ಟು ಜನರು ಒಟ್ಟುಗೂಡಿದ್ದರು. ಈ ವೇಳೆ ಪಾಕಿಸ್ತಾನಿ ಸೇನೆ ಮತ್ತು ಅರೆಸೇನಾ ಪಡೆಗಳಾದ ‘ರೇಂಜರ್ಸ್’ ಸಿಬ್ಬಂದಿ ಒಮ್ಮೆಲೇ ಪ್ರತಿಭಟನಾಕಾರರ ಮೇಲೆ ಕ್ರೂರವಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಅಂಧಾಧುಂಧಿ ಗುಂಡಿನ ದಾಳಿಯಲ್ಲಿ 16 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 37ಕ್ಕೂ ಹೆಚ್ಚು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಳೆದ ಶುಕ್ರವಾರದಿಂದ ಇಡೀ ಪಿಒಕೆ ವ್ಯಾಪ್ತಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗಲಭೆಗಳನ್ನು ಹತ್ತಿಕ್ಕುವ ಹೆಸರಿನಲ್ಲಿ ಪಾಕ್ ಸೇನೆ ನಡೆಸುತ್ತಿರುವ ಹಿಂಸಾತ್ಮಕ ದಮನಕಾಂಡಕ್ಕೆ ಇದುವರೆಗೆ ಒಟ್ಟು 53 ಸಾಮಾನ್ಯ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ದೃಢಪಡಿಸಿದ್ದಾರೆ. ರಾವಲಕೋಟ್‌ನಲ್ಲಿ ನಡೆದ ಈ ತಾಜಾ ಹತ್ಯಾಕಾಂಡದ ಬೆನ್ನಲ್ಲೇ ಇಡೀ ಪಿಒಕೆಯಾದ್ಯಂತ ಗುರುವಾರ ತೀವ್ರ ಆಕ್ರೋಶ ಭುಗಿಲೆದ್ದಿದ್ದು, ಜನರು ಸ್ವಯಂಪ್ರೇರಿತರಾಗಿ ರಸ್ತೆಗಿಳಿದು ಪಾಕಿಸ್ತಾನ ಸರ್ಕಾರದ ವಿರುದ್ಧ ಬೃಹತ್ ನಿರಸನ ಮುಂದುವರಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು