ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ MEA ಉದ್ಯೋಗಿ ನವೀನ್‌ ಪಾಲ್ ಬಂಧನ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ MEA ಉದ್ಯೋಗಿ ನವೀನ್‌ ಪಾಲ್ ಬಂಧನ

ನವದೆಹಲಿ: ಪಾಕಿಸ್ತಾನಕ್ಕೆ ರಹಸ್ಯ ದಾಖಲೆಗಳನ್ನು ಪೂರೈಸಿದ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದ ಉದ್ಯೋಗಿಯನ್ನು ಉತ್ತರ ಭಾರತದ ಗಾಜಿಯಾಬಾದ್‌ ನಗರದಲ್ಲಿ ಬಂಧಿಸಲಾಗಿದೆ.

ಆರೋಪಿಯು ಜಿ 20 ಶೃಂಗಸಭೆಗೆ ಸಂಬಂಧಿಸಿದ ವಿವರಗಳನ್ನು ಪಾಕಿಸ್ತಾನ ಮೂಲದ್ದು ಎಂದು ಶಂಕಿಸಲಾದ ಮೊಬೈಲ್ ಸಂಖ್ಯೆಗೆ ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಗಾಜಿಯಾಬಾದ್‌ ನಗರದ ಭೀಮ್ ನಗರ ನಿವಾಸಿ ನವೀನ್ ಪಾಲ್ (27) ಎಂದು ಗುರುತಿಸಲಾಗಿದೆ. ಈತನು ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಡಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿ ಉದ್ಯೋಗದಲ್ಲಿದ್ದ.

ಆರೋಪಿ ನವೀನ್‌ ಪಾಲ್‌ ಬಂಧನವು ಅಧಿಕಾರಿಗಳಿಗೆ ಸುಳಿವು ದೊರೆತ ನಂತರ, ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

“ಆರೋಪಿಯು ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದು, ಮಲ್ಟಿ ಟಾಸ್ಕಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ. ಅವನ ಮೊಬೈಲ್ ಸಂಖ್ಯೆಯಿಂದ ಮತ್ತೊಂದು ಮೊಬೈಲ್ ಸಂಖ್ಯೆಗೆ ಅನುಮಾನಾಸ್ಪದ ಸಂದೇಶಗಳನ್ನು ಕಳುಹಿಸಲಾಗಿದೆ. ಮತ್ತು ಈ ಸಂಖ್ಯೆಯೊಂದಿಗೆ ಗೌಪ್ಯ ದಾಖಲೆಗಳನ್ನು ಹಂಚಿಕೊಂಡಿದ್ದಾನೆ ಹಾಗೂ ಪ್ರತಿಯಾಗಿ ಆರೋಪಿ ಆನ್ ಲೈನ್ ಮೂಲಕ ಹಣವನ್ನು ಸ್ವೀಕರಿಸಿದ್ದಾನೆ” ಎಂದು ಗಾಜಿಯಾಬಾದ್ ಡಿಸಿಪಿ ಶುಭಂ ಪಟೇಲ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

“ಪಾಲ್‌ ರಹಸ್ಯ ದಾಖಲೆಗಳನ್ನು ಯಾರೊಂದಿಗೋ ಹಂಚಿಕೊಳ್ಳುತ್ತಿರುವ ಮಾಹಿತಿ ನಮಗೆ ದೊರಕಿತ್ತು. ಈ ಹಿನ್ನೆಲೆಯಲ್ಲಿ ನಾವು ಆತನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದೇವೆ. ಅವನು ಹಣವನ್ನು ಪಡೆದು ಕೆಲವು ದಾಖಲೆಗಳನ್ನು ಅಪರಿಚಿತ ಮೂಲದೊಡನೆ ಹಂಚಿಕೊಂಡಿರುವುದು ಆತನ ಫೋನ್‌ ಮೂಲಕ ಪತ್ತೆಯಾಗಿದೆ” ಎಂದು  ಪಟೇಲ್ ಹೇಳಿದರು.

ತನಿಖೆಯ ಸಮಯದಲ್ಲಿ ಆರೋಪಿಯ ಫೋನಿನಲ್ಲಿ “ಅಂಜಲಿ ಕೊಲ್ಕತ್ತಾ” ಎಂದು ಸೇವ್‌ ಮಾಡಿಕೊಂಡಿದ್ದ ನಂಬರ್‌ ಪೊಲೀಸರಿಗೆ ದೊರಕಿದೆ. ಇದು ಪಾಕಿಸ್ತಾನದ ಸಂಖ್ಯೆ ಎಂದು ಶಂಕಿಸಲಾಗಿದೆ. ಇದಲ್ಲದೆ, 61 ಪುಟಗಳ ಅಧಿಕೃತ ದಾಖಲೆಯನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಆತನ ಬ್ಯಾಂಕ್ ವಹಿವಾಟುಗಳನ್ನು ಪರಿಶೀಲಿಸಲಾಗಿದೆ. ಹಣಕ್ಕೆ ಬದಲಾಗಿ ರಹಸ್ಯ ಮಾಹಿತಿಯನ್ನು ವರ್ಗಾಯಿಸಿ, ಪ್ರತಿ ದಾಖಲೆಗೆ 8,000 ರೂ.ಗಳಿಂದ 10,000 ರೂ.ಗಳವರೆಗೆ ತೆಗೆದುಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಾಲ್ ತನ್ನ ಫೋನಿನಲ್ಲಿ “ಮಹಿಳೆಗೆ” ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿರಬಹುದು ಮತ್ತು ಈ ಮೂಲಕ ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡಿರಬಹುದು ಮತ್ತು ಇತರ ದೇಶಗಳೊಂದಿಗಿನ ಭಾರತದ ಸಂಬಂಧಕ್ಕೆ ಹಾನಿ ಮಾಡಿರಬಹುದು ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ಪುಣೆ ಮೂಲದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿ ಪ್ರದೀಪ್ ಕುರುಲ್ಕರ್ ವಿರುದ್ಧ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಚಾರ್ಜ್‌ಶೀಟ್ ಸಲ್ಲಿಸಿದ ಕೆಲವೇ ದಿನಗಳ ನಂತರ ಗಾಜಿಯಾಬಾದ್ ಪೊಲೀಸರು ನವೀನ್ ಪಾಲ್ ಅನ್ನು ಬಂಧಿಸಿದ್ದಾರೆ.

ವಿಷಯಗಳು: #india #kannada #peepal #peepalmedia
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು