ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮೈಸೂರು ಅಂಬಾರಿ ವಿವಾದ: ರಾಜಮಾತೆಯ ಅಧಿಕಾರವೋ, ಪ್ರಜಾಪ್ರಭುತ್ವದ ಸಾರ್ವಭೌಮತ್ವವೋ?ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿ

ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಪೊಲೀಸ್ ಕೇಸ್

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಪೊಲೀಸ್ ಕೇಸ್

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 10 ಗಂಟೆಯ ನಂತರ ಚುನಾವಣಾ ಪ್ರಚಾರ ನಡೆಸಿದ್ದಕ್ಕಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅಕ್ರಮ ಸಭೆ, ಅಕ್ರಮ ಬಂಧನ ಹಾಗೂ ಜನರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಎಂಕೆ ಮತ್ತು ಎಡಪಕ್ಷಗಳು ಅನುಮತಿಸಿದ ಸಮಯಕ್ಕಿಂತ ಹೆಚ್ಚು ಕಾಲ ಪ್ರಚಾರ ಮಾಡಿದ್ದಕ್ಕೆ ಆಕ್ಷೇಪಿಸಿದಾಗ ವಾಗ್ವಾದ ನಡೆಯಿತು. ಸೆಕ್ಷನ್ 143, 341 ಮತ್ತು 290 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಡಿಎಂಕೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಸೋಲಿನ ಭಯದಿಂದ ಅಣ್ಣಾಮಲೈ ಗಲಭೆ ಎಬ್ಬಿಸುತ್ತಿದ್ದಾರೆ ಮತ್ತು ಜನರ ನಡುವೆ ವೈಷಮ್ಯ ಹೆಚ್ಚಿಸುತ್ತಿದ್ದಾರೆ ಎಂದು ಡಿಎಂಕೆ ವಕ್ತಾರ ಸರವಣನ್ ಹೇಳಿದ್ದಾರೆ. ಕೊಯಮತ್ತೂರು ಶಾಂತಿಯುತ ನಗರ. ಆಗಾಗ ಹೆಮ್ಮೆಯ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ, ಅಣ್ಣಾಮಲೈ ಅವರಿಗೆ ಜ್ಞಾನೋದಯವಾಗಲಿ ಎಂದರು. ಆದರೆ, ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಣ್ಣಾಮಲೈ, ತಾವು ಯಾವುದೇ ತಪ್ಪು ಮಾಡಿಲ್ಲ. ರಾತ್ರಿ 10 ಗಂಟೆಯ ನಂತರ ಜನರನ್ನು ಭೇಟಿ ಮಾಡುವ ಹಕ್ಕು ನನಗಿದೆ, ಯಾವ ಚುನಾವಣಾ ಆಯೋಗ ನಮ್ಮನ್ನು ತಡೆಯುತ್ತದೆ, ಆದೇಶ ಎಲ್ಲಿದೆ, ನನಗೆ ತೋರಿಸಿ..? ಎಂದು ಕೇಳಿದರು.

ಬಿಜೆಪಿ ರಾಜ್ಯ ವಕ್ತಾರ ಎಎನ್ ಎಸ್ ಪ್ರಸಾದ್ ಮಾತನಾಡಿ, ಅಣ್ಣಾಮಲೈ ಗೆಲುವನ್ನು ತಡೆಯಲು ಡಿಎಂಕೆ ತಂತ್ರ ಹೆಣೆಯುತ್ತಿದ್ದು, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು. ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳನ್ನು ನಿಂದಿಸಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು. ಅ‍ಣ್ಣಾಮಲೈ ಅವರೊಂದಿಗೆ ಆಡಳಿತಾರೂಢ ಡಿಎಂಕೆ ಪಕ್ಷದಿಂದ ಗಣಪತಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆಯಿಂದ ಸಿಂಗೈ ರಾಮಚಂದ್ರನ್ ಕಣದಲ್ಲಿದ್ದಾರೆ. ತಮಿಳುನಾಡಿನ 39 ಸಂಸದ ಸ್ಥಾನಗಳಿಗೆ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು