ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾನಸಿಕ ಸ್ಥಿತಿ ಸರಿಯಿಲ್ಲದ ಮಹಿಳೆಯನ್ನು ರಸ್ತೆಯುದ್ದಕ್ಕೂ ಎಳೆದೊಯ್ದ ಮಹಿಳಾ ಪೊಲೀಸರು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಾನಸಿಕ ಸ್ಥಿತಿ ಸರಿಯಿಲ್ಲದ ಮಹಿಳೆಯನ್ನು ರಸ್ತೆಯುದ್ದಕ್ಕೂ ಎಳೆದೊಯ್ದ ಮಹಿಳಾ ಪೊಲೀಸರು

ಲಖನೌ: ಮಾನಸಿಕ ಸ್ಥಿತಿ ಸರಿಯಿಲ್ಲದ ಮಹಿಳೆಯನ್ನು ಮಹಿಳಾ ಪೊಲೀಸರು ರಸ್ತೆಯುದ್ದಕ್ಕೂ ಎಳೆದೊಯ್ದ ಘಟನೆಯೊಂದು ಉತ್ತರ ಪ್ರದೇಶದಿಂದ ವರದಿಯಾಗಿದೆ. ದೂರು ನೀಡಲು ಬಂದ ಮಹಿಳೆಯ ಜೊತೆ ಈ ರೀತಿ ವರ್ತಿಸಿದ ಪೊಲೀಸರ ಕುರಿತು ಹಿರಿಯ ಅಧಿಕಾರಿಗಳು ಸ್ಪಂದಿಸಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಸ್ಥಿತಿ ಸರಿ ಇಲ್ಲದ ಮಹಿಳೆ ಹಾಗೂ ಆಕೆಯ ಪತಿ ನಡುವೆ ಜಗಳ ನಡೆದಿದೆ. ಈ ಹಿನ್ನೆಲೆಯಲ್ಲಿ ಪತಿ ವಿರುದ್ಧ ದೂರು ನೀಡಲು ಮಹಿಳೆ ಎಸ್ಪಿ ಕಚೇರಿಗೆ ತೆರಳಿದ್ದರು. ಆದರೆ ಆಕೆ ಅಲ್ಲಿನ ಗೋಡೆ ಹತ್ತಲು ಪ್ರಯತ್ನಿಸಿದರು.

ಅಷ್ಟರಲ್ಲಿ ಗಮನಿಸಿದ ಇಬ್ಬರು ಮಹಿಳಾ ಪೊಲೀಸರು ಮಹಿಳೆಯ ಬಳಿ ಹೋಗಿ ಅಲ್ಲಿಂದ ಹೋಗುವಂತೆ ಆಕೆಯನ್ನು ಎಳೆದಾಡಿದರು. ಈ ಸಂದರ್ಭದಲ್ಲಿ ಮಹಿಳೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಲು ಯತ್ನಿಸಿದರು. ಆಗ ಮಹಿಳಾ ಪೇದೆಗಳು ಆಕೆಯ ಎರಡೂ ಕೈಗಳನ್ನು ಹಿಡಿದು ರಸ್ತೆಯಲ್ಲಿ ಎಳೆದೊಯ್ದಿದ್ದಾರೆ. ಅಲ್ಲಿದ್ದ ಕೆಲವರು ಇದನ್ನು ರೆಕಾರ್ಡ್ ಮಾಡಿಕೊಂಡಿದ್ದು, ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಮೇಲಧಿಕಾರಿಗಳು ಸ್ಪಂದಿಸಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು