ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿಯಲ್ಲಿ ನಾಳೆ NDA ಸಭೆ: ಮೋದಿ ಅಲೆಯ ಮ್ಯಾಜಿಕ್‌ ಮುಗಿಯಿತೇ?

P

Peepal Media Desk • ದೇಶ

• 2 ನಿಮಿಷದ ಓದು

ದೆಹಲಿಯಲ್ಲಿ ನಾಳೆ NDA ಸಭೆ: ಮೋದಿ ಅಲೆಯ ಮ್ಯಾಜಿಕ್‌ ಮುಗಿಯಿತೇ?
the economic times

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನಾಳೆ ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಔತಣಕೂಟವನ್ನು ಆಯೋಜಿಸಲು ಸಜ್ಜಾಗಿದೆ, ಜುಲೈ 18ರಂದು‌ ನಡೆಯಲಿರುವ ಈ ಡಿನ್ನರ್ ಪಾರ್ಟಿಗೆ ಆರು ಹೊಸ ಪಕ್ಷಗಳು ಸೇರಿದಂತೆ ಕನಿಷ್ಠ 31 ಎನ್‌ಡಿಎ ಮಿತ್ರಪಕ್ಷಗಳನ್ನು ಆಹ್ವಾನಿಸಿದೆ. ಬಿಜೆಪಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೈತ್ರಿ ಪಾಲುದಾರರ ಜೊತೆಗೆ, ವಿವಿಧ ಹೊಸ ಮಿತ್ರಪಕ್ಷಗಳಿಗೆ ಮತ್ತು ಕೆಲವು ಮಾಜಿ ಮಿತ್ರರಿಗೆ ಕೂಟದಲ್ಲಿ ಭಾಗವಹಿಸಲು ಆಹ್ವಾನವನ್ನು ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಈ ಪಕ್ಷಗಳ ಮುಖಂಡರೊಂದಿಗೆ ಭಾಗವಹಿಸಲಿದ್ದಾರೆ. ಎನ್‌ಡಿಎಗೆ ಹೊಸದಾಗಿ ಸೇರ್ಪಡೆಗೊಂಡ ಪಕ್ಷಗಳಲ್ಲಿ ಉತ್ತರಪ್ರದೇಶದ ಎಸ್‌ಬಿಎಸ್‌ಪಿ, ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಬಿಹಾರದ ಚಿರಾಗ್ ಪಾಸ್ವಾನ್‌ರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಸೇರಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಉತ್ತರ ಪ್ರದೇಶ ಮೂಲದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ನಾಯಕ ಓಂ ಪ್ರಕಾಶ್ ರಾಜ್‌ಭರ್ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸ್ವಾಗತಿಸಿದ್ದರು. ರಾಜ್‌ಭರ್ ಅವರು ಈ ಹಿಂದೆ 2022ರ ಯುಪಿ ಅಸೆಂಬ್ಲಿ ಚುನಾವಣೆಯ ಸಮಯದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮಿತ್ರರಾಗಿದ್ದರು. ಅಪರಾಧಿ ದರೋಡೆಕೋರ ಮುಕ್ತಾರ್ ಅನ್ಸಾರಿಯ ಪುತ್ರ ಮೌ ಕ್ಷೇತ್ರದ ಅಬ್ಬಾಸ್ ಅನ್ಸಾರಿ ಸೇರಿದಂತೆ ಎಸ್‌ಬಿಎಸ್‌ಪಿ ಆರು ಶಾಸಕರನ್ನು ಹೊಂದಿದೆ.

ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಬಿಜೆಪಿಯ ಎನ್‌ಡಿಎ ಮಿತ್ರಕೂಟದಿಂದ ದೂರವಾಗಿರುವ ಎರಡು ಪ್ರಮುಖ ಪಕ್ಷಗಳಾಗಿವೆ. ಹಲವು ಪ್ರಯತ್ನಗಳ ನಂತರವೂ ಬಿಜೆಪಿ ಇವೆರಡೂ ಪಕ್ಷಗಳನ್ನು ಸೆಳೆಯುವಲ್ಲಿ ವಿಫಲವಾಗಿದೆ.

ಬಿಜೆಪಿ ನಾಯಕತ್ವವು ಪಶ್ಚಿಮ ಉತ್ತರಪ್ರದೇಶದಲ್ಲಿ ಎಸ್‌ಪಿಯ ಮಿತ್ರಪಕ್ಷವಾದ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಜೊತೆಯಲ್ಲೂ ಸಂಪರ್ಕದಲ್ಲಿದೆ. ಜೂನ್ 23ರಂದು ಪ್ರತಿಪಕ್ಷಗಳ ಸಭೆಯಿಂದ ಹೊರಗುಳಿದಿದ್ದ ಚೌಧರಿಯವರು ಬೆಂಗಳೂರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇತ್ತ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಮೈತ್ರಿಯ ಮಾತುಕತೆಗಳು ಚಾಲನೆಯಲ್ಲಿವೆ ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಳೆದ ಬಾರಿ ಕರ್ನಾಟಕದಿಂದ 25 ಸಂಸದ ಕ್ಷೇತ್ರಗಳನ್ನು ಗೆದ್ದ ಬಿಜೆಪಿಗೆ ಈ ಬಾರಿ ಅಂತಹ ಆತ್ಮವಿಶ್ವಾಸವಿದ್ದಂತೆ ಕಾಣುತ್ತಿಲ್ಲ. ಕರ್ನಾಟಕದಲ್ಲಿ ಮುರಿದ ಮನೆಯಾಗಿರುವ ಬಿಜೆಪಿಯನ್ನು ಅದರ ಸ್ಥಳೀಯ ನಾಯಕರೇ ಸೋಲಿಸಿದರೂ ಆಶ್ಚರ್ಯವಿಲ್ಲ. ಏಕೆಂದರೆ ಸ್ಥಳೀಯ ಕೆಲವು ನಾಯಕರಲ್ಲಿ ಬಿಜೆಪಿ ಹೈಕಮಾಂಡ್‌ ನಾಯಕರ ಕುರಿತು ಅಷ್ಟು ಅಸಹನೆಯಿದೆ.

ಹೆಸರಿನಲ್ಲಿ ಒಂದು ಕರೆಂಟ್‌ ಕಂಬ ನಿಂತರೂ ಗೆಲ್ಲುತ್ತದೆ ಎನ್ನಲಾಗುತ್ತಿದ್ದ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್‌ ಮೊರೆ ಹೋಗಿರುವುದು ಮೋದಿ ಅಲೆ ತಗ್ಗಿರುವುದಕ್ಕೆ ಸಾಕ್ಷಿ ಎನ್ನುತ್ತಾರೆ ವಿಶ್ಲೇಷಕರು. ದೇಶದೆಲ್ಲೆಡೆ ಆಡಳಿತ ವಿರೋಧಿ ಅಲೆಯಿದ್ದು, ಸರಕಾರ ತನ್ನ ಸಂಸ್ಥೆಗಳನ್ನು ಬಳಸಿ ವಿರೋಧಿ ನಾಯಕರ ಬಾಯಿ ಮುಚ್ಚಿಸುತ್ತಿದೆಯಾದರೂ, ಬೆಲೆಯೇರಿಕೆಯ ಬಿಸಿಯನ್ನು ತಣಿಸುವ ಯಾವ ಉಪಾಯವು ಸದ್ಯಕ್ಕೆ ಅದರ ಬಳಿ ಇದ್ದಂತಿಲ್ಲ. ಇದು ವಿಜೆಪಿಗೆ ಮುಂದಿನ ಸಲ ತೊಡಕಾಗುವ ಎಲ್ಲಾ ಲಕ್ಷಣಗಳೂ ಕಂಡು ಬರುತ್ತಿದೆ.

ಇಷ್ಟು ದಿನದ ಮೋದಿಯವರ ಒನ್‌ ಮ್ಯಾನ್‌ ಶೋ ಕಾರಣದಿಂದಾಗಿ ಆ ಪಕ್ಷದಲ್ಲಿ ಎರಡನೇ ಹಂತದ ನಾಯಕರ ಕೊರತೆಯೂ ತೀವ್ರವಾಗಿ ಕಾಡುತ್ತಿದೆ.

ಒಟ್ಟಿನಲ್ಲಿ ಮುಂದಿನ ಮತ ಸುಗ್ಗಿಯಲ್ಲಿ ಒಳ್ಳೆಯ ಕೊಯ್ಲು ಮಾಡಲು ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ನೆಲ ಹದ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆ. ಯಾರ ಕಣಜ ತುಂಬಲಿದೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಹತ್ತು-ಹನ್ನೊಂದು ತಿಂಗಳು ಕಾಯಲೇಬೇಕು.

ವಿಷಯಗಳು: #kannada #news #peepal #peepalmedia #politics
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version