ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಂಡಿತ್ ಜವಾಹರಲಾಲ್ ನೆಹರೂ ಪ್ರತಿಮೆ ಧ್ವಂಸ: ಪಶ್ಚಿಮ ಬಂಗಾಳ ಕಾಂಗ್ರೆಸ್ ತೀವ್ರ ಆಕ್ರೋಶ, ಆರೋಪಿಗಳ ಬಂಧನಕ್ಕೆ ಆಗ್ರಹ

PPeepal Media

Peepal Media ದೇಶ

• 1 ನಿಮಿಷದ ಓದು

ಪಂಡಿತ್ ಜವಾಹರಲಾಲ್ ನೆಹರೂ ಪ್ರತಿಮೆ ಧ್ವಂಸ: ಪಶ್ಚಿಮ ಬಂಗಾಳ ಕಾಂಗ್ರೆಸ್ ತೀವ್ರ ಆಕ್ರೋಶ, ಆರೋಪಿಗಳ ಬಂಧನಕ್ಕೆ ಆಗ್ರಹ

ಕೋಲ್ಕತ್ತಾ: ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆಧುನಿಕ ಭಾರತದ ಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ದುರ್ಗಾಪುರದಲ್ಲಿ ಕಿತ್ತೆಸೆದು ಕಾಡಿನಲ್ಲಿ ಬಿಸಾಡಿರುವುದಕ್ಕೆ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ.

ದುರ್ಗಾಪುರದ ಹರ್ಷವರ್ಧನ ಪ್ರಾಥಮಿಕ ಶಾಲೆಯ ಪಕ್ಕದಲ್ಲಿರುವ ಧ್ಯಾನ ಕೇಂದ್ರದ ಮುಂಭಾಗದಲ್ಲಿದ್ದ ಪಂಡಿತ್ ನೆಹರೂ ಅವರ ಪ್ರತಿಮೆಯನ್ನು ಕ್ರೇನ್ ನೆರವಿನಿಂದ ಕಿತ್ತು, ಸಮೀಪದ ಅರಣ್ಯ ಪ್ರದೇಶಕ್ಕೆ ಎಸೆಯಲಾಗಿದೆ. ಈ ಕೃತ್ಯವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಾಯಕರು ಈಗಾಗಲೇ ಪ್ರತಿಭಟನೆ ನಡೆಸಿದ್ದು, ಆಡಳಿತ ವರ್ಗ ತಕ್ಷಣವೇ ಪ್ರತಿಮೆಯನ್ನು ಮೂಲ ಸ್ಥಾನದಲ್ಲಿ ಮರುಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.

ಘಟನೆಯನ್ನು ಖಂಡಿಸಿ ಮಾತನಾಡಿದ ಶುಭಂಕರ್ ಸರ್ಕಾರ್, “ಪಂಡಿತ್ ಜವಾಹರಲಾಲ್ ನೆಹರೂ ಅವರು ಕೇವಲ ಕಾಂಗ್ರೆಸ್ ನಾಯಕರಾಗಿರಲಿಲ್ಲ; ಅವರು ಸ್ವಾತಂತ್ರ್ಯ ಹೋರಾಟಗಾರರು, ದೇಶದ ಮೊದಲ ಪ್ರಧಾನಿ ಮತ್ತು ಆಧುನಿಕ ಭಾರತದ ಪ್ರಮುಖ ನಿರ್ಮಾತೃ. ಅವರ ಪ್ರತಿಮೆಯನ್ನು ಕಿತ್ತು ಕಾಡಿಗೆ ಎಸೆದಿರುವುದು ಕೇವಲ ಒಂದು ಪ್ರತಿಮೆಯ ಅಪಮಾನವಲ್ಲ, ಇದು ಭಾರತದ ಸ್ವಾತಂತ್ರ್ಯ ಸಂಗ್ರಾಮ, ಇತಿಹಾಸ ಮತ್ತು ಪ್ರಜಾಪ್ರಭುತ್ವದ ಪರಂಪರೆಗೆ ಎಸಗಿದ ಘೋರ ಅವಮಾನ” ಎಂದು ಕಿಡಿಕಾರಿದ್ದಾರೆ.

ಯಾವ ರಾಜಕೀಯ ಸಿದ್ಧಾಂತದ ಬೆಂಬಲಿಗರು ಈ ಹೇಯ ಕೃತ್ಯ ಎಸಗಿದ್ದಾರೆ ಎಂಬುದನ್ನು ತನಿಖೆ ನಡೆಸಿ ಪತ್ತೆಹಚ್ಚುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದಿರುವ ಅವರು, “ನಾವು ಯಾವುದೇ ನೆಪಗಳನ್ನು ಕೇಳಲು ಸಿದ್ಧರಿಲ್ಲ. ನೆಹರೂ ಅವರ ಪ್ರತಿಮೆಯನ್ನು ಪೂರ್ಣ ಗೌರವದೊಂದಿಗೆ ತಕ್ಷಣವೇ ಮರುಸ್ಥಾಪಿಸಬೇಕು. ಹಾಗೆಯೇ ಈ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಗುರುತಿಸಿ, ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು, ಆದರೆ ದೇಶದ ಮೊದಲ ಪ್ರಧಾನಿಗೆ ಅವಮಾನ ಮಾಡುವ ಹಕ್ಕು ಯಾರಿಗೂ ಇಲ್ಲ. ಇತಿಹಾಸವನ್ನು ಅಳಿಸಿಹಾಕಲು ಮತ್ತು ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕರನ್ನು ಅವಮಾನಿಸಲು ಯತ್ನಿಸುವವರ ವಿರುದ್ಧ ಕಾಂಗ್ರೆಸ್ ಪಕ್ಷವು ರಾಜಕೀಯವಾಗಿ ಹಾಗೂ ಪ್ರಜಾಸತ್ತಾತ್ಮಕವಾಗಿ ಪೂರ್ಣ ಶಕ್ತಿಯೊಂದಿಗೆ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಪ್ರತಿಮೆಯನ್ನು ಮರುಸ್ಥಾಪಿಸಿ, ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸದಿದ್ದರೆ ಬೃಹತ್ ಪ್ರಜಾಸತ್ತಾತ್ಮಕ ಚಳವಳಿ ರೂಪಿಸುವುದಾಗಿ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಎಚ್ಚರಿಕೆ ನೀಡಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು