ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟಾರ್ಗೆಟ್‌ ಪ್ರಕಾಶ್‌ ರಾಜ್: ನಟನ ಕಡೆ ಕೈ ಚಾಚಿದ ಇಡಿ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಟಾರ್ಗೆಟ್‌ ಪ್ರಕಾಶ್‌ ರಾಜ್: ನಟನ ಕಡೆ ಕೈ ಚಾಚಿದ ಇಡಿ

ಹೊಸದಿಲ್ಲಿ: ಚಿನ್ನಾಭರಣ ವ್ಯವಹಾರಕ್ಕೆ ಸಂಬಂಧಿಸಿದ 100 ಕೋಟಿ ರೂ. ಖೊಟ್ಟಿ ಯೋಜನೆಗೆ ಸಂಬಂಧಿಸಿದಂತೆ ನಟ ಪ್ರಕಾಶ್‌ರಾಜ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಸಮನ್ಸ್ ನೀಡಿದೆ.

ಪ್ರಕರಣದ ತನಿಖೆಯ ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಲಾಗಿದೆ. ಪ್ರಕಾಶ್‌ರಾಜ್ ತಮಿಳುನಾಡಿನ ತಿರುಚ್ಚಿಯ ಪ್ರಣವ್ ಜ್ಯುವೆಲರ್ಸ್‌ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಅವರು ಈ ಯೋಜನೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.


ಈ ಖೊಟ್ಟಿ ಯೋಜನೆಗೆ ಸಂಬಂಧಿಸಿದಂತೆ ಚೆನ್ನೈ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಶಾಖೆಗಳನ್ನು ಹೊಂದಿರುವ ಆಭರಣ ಸರಣಿಯ ಮಾಲೀಕರ ಶಾಖೆಗಳು ಮತ್ತು ಮನೆಗಳ ಮೇಲೆ 100 ಕೋಟಿ ಭ್ರಷ್ಟಾಚಾರದ ಆರೋಪದ ಮೇಲೆ ಇಡಿ ದಾಳಿ ನಡೆಸಿದೆ. ಆಭರಣ ಉದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿರುವ ನಟ ಪ್ರಕಾಶ್ರಾಜ್ ಈ ಬಗ್ಗೆ ಇನ್ನೂ ಹೇಳಿಕೆ ನೀಡಿಲ್ಲ.

ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳನ್ನು ಅಕ್ಟೋಬರ್‌ನಲ್ಲಿ ಮುಚ್ಚಲಾಗಿತ್ತು. ದೂರುಗಳ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಜ್ಯುವೆಲ್ಲರ್ಸ್ ಮಾಲೀಕ ಮಧನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಎರಡು ದಿನಗಳ ಹಿಂದೆ, ಹೆಚ್ಚಿನ ಆದಾಯವನ್ನು ಮರಳಿ ನೀಡುವ ಚಿನ್ನದ ಹೂಡಿಕೆ ಯೋಜನೆಯ ಹೆಸರಿನಲ್ಲಿ ಪ್ರಣವ್ ಜ್ಯುವೆಲ್ಲರ್ಸ್ 100 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ ಎಂದು ತನಿಖೆ ಆರೋಪಿಸಿದೆ.

ನಟ ಪ್ರಕಾಶ್ ರೈ ಕಳೆದ ಕೆಲವು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಹಲವು ಸಂದರ್ಭಗಳಲ್ಲಿ ಮೋದಿ ಸರ್ಕಾರದ ನೀತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಇಂತಹ ಹೊತ್ತಿನಲ್ಲಿ ಕೇಂದ್ರ ತನಿಖಾ ಸಂಸ್ಥೆ ಇಡಿ ಪ್ರಕಾಶ್ ರಾಜ್ ಅವರನ್ನು ಟಾರ್ಗೆಟ್ ಮಾಡಿರುವುದು ಗಮನಾರ್ಹ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು