ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

PPeepal Media

Peepal Media ದೇಶ

• 1 ನಿಮಿಷದ ಓದು

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ದೆಹಲಿ: ತೀವ್ರ ವಿರೋಧ ಮತ್ತು ಚರ್ಚೆಗಳ ನಡುವೆಯೇ ‘ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಂಕಿತ ಹಾಕಿದ್ದಾರೆ. ಈ ಕುರಿತು ಕೇಂದ್ರ ಕಾನೂನು ಸಚಿವಾಲಯವು ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕಳೆದ ಮಾರ್ಚ್ 25 ಮತ್ತು 26 ರಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಆದರೆ, ಈ ಮಸೂದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಘನತೆಗೆ ಧಕ್ಕೆ ತರುವಂತಹ ಕೆಲವು ನಿಬಂಧನೆಗಳಿವೆ ಎಂದು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಮಸೂದೆಯನ್ನು ಹೆಚ್ಚಿನ ಪರಿಶೀಲನೆಗಾಗಿ ಸೆಲೆಕ್ಟ್ ಕಮಿಟಿಗೆ ಕಳುಹಿಸಬೇಕು ಎಂದು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮರುದಿನವೇ ದೇಶದ ಸುಮಾರು 140 ಮಂದಿ ವಕೀಲರು, ಸ್ತ್ರೀವಾದಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಸುದೀರ್ಘ ಪತ್ರ ಬರೆದಿದ್ದರು. ಮಸೂದೆಯ ಕೆಲವು ಅಂಶಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಮತ್ತು ಇದನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿ ಲೋಪದೋಷಗಳಿವೆ ಎಂದು ಅವರು ದೂರಿದ್ದರು. ಆದರೆ, ಈ ಎಲ್ಲಾ ವಿವಾದ ಮತ್ತು ಮನವಿಗಳ ನಡುವೆಯೂ ರಾಷ್ಟ್ರಪತಿಗಳು ಮಸೂದೆಗೆ ಸಹಿ ಮಾಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಹೊಸ ಕಾಯಿದೆಯ ಪ್ರಕಾರ, ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಪಡೆಯುವ ಪ್ರಕ್ರಿಯೆ ಮತ್ತು ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಸರ್ಕಾರದ ಈ ಕ್ರಮವು ಸಮುದಾಯದ ಸಬಲೀಕರಣಕ್ಕೆ ಸಹಕಾರಿ ಎಂದು ಕೇಂದ್ರ ಸಮರ್ಥಿಸಿಕೊಂಡಿದ್ದರೆ, ಹಕ್ಕುಗಳ ಹೋರಾಟಗಾರರು ಇದನ್ನು “ಗೌರವಕ್ಕೆ ಚ್ಯುತಿ ತರುವ ಕಾನೂನು” ಎಂದು ಟೀಕಿಸುತ್ತಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು