ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುದುಚೇರಿಯಲ್ಲಿ ಸೌರವ್ ದಾಸ್ ಮನೆಗೆ ಪೊಲೀಸರು: ‘ಇದಕ್ಕೆಲ್ಲಾ ನಾವು ಹೆದರುವುದಿಲ್ಲ’ ಎಂದ ಸಿಜೆಪಿ ವಕ್ತಾರ

PPeepal Media

Peepal Media ದೇಶ

• 1 ನಿಮಿಷದ ಓದು

ಪುದುಚೇರಿಯಲ್ಲಿ ಸೌರವ್ ದಾಸ್ ಮನೆಗೆ ಪೊಲೀಸರು: ‘ಇದಕ್ಕೆಲ್ಲಾ ನಾವು ಹೆದರುವುದಿಲ್ಲ’ ಎಂದ ಸಿಜೆಪಿ ವಕ್ತಾರ

ಪುದುಚೇರಿ: ಕಾಕ್ರೋಚ್ ಜನತಾ ಪಾರ್ಟಿಯ (CJP) ರಾಷ್ಟ್ರೀಯ ವಕ್ತಾರ ಸೌರವ್ ದಾಸ್ ಅವರ ಪುದುಚೇರಿಯಲ್ಲಿರುವ ನಿವಾಸಕ್ಕೆ ಬುಧವಾರ ಪೊಲೀಸರು ಭೇಟಿ ನೀಡಿ ಅವರ ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಎಕ್ಸ್ (X) ಪ್ಲಾಟ್‌ಫಾರ್ಮ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸೌರವ್ ದಾಸ್, “ಇದು ನನ್ನನ್ನು ಮತ್ತು ನನ್ನ ಕುಟುಂಬವನ್ನು ಹೆದರಿಸಲು ಬಿಜೆಪಿ ಸರ್ಕಾರ ಮಾಡುತ್ತಿರುವ ಪ್ರಯತ್ನ. ಆದರೆ ಇಂತಹ ಹಪಾಹಪಿಗೆ ನಾನು ಬೆದರುವುದಿಲ್ಲ, ಬದಲಾಗಿ ನಮ್ಮ ಹೋರಾಟದ ನಿರ್ಧಾರ ಇನ್ನಷ್ಟು ಗಟ್ಟಿಯಾಗುತ್ತದೆ” ಎಂದು ಹೇಳಿದ್ದಾರೆ.

ಸೌರವ್ ದಾಸ್ ಪೋಸ್ಟ್‌ನಲ್ಲಿ ಏನಿದೆ?

“ಎರಡು ಗಂಟೆಗಳ ಹಿಂದೆ ಪೊಲೀಸರು ನನ್ನ ಮನೆಗೆ ಬಂದು ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ. ಈ ತನಿಖೆಗೆ ಆದೇಶಿಸಿದ್ದು ಯಾರು ಮತ್ತು ಇದರ ಉದ್ದೇಶವೇನು? ಬಿಜೆಪಿಯ ಕೇಂದ್ರ ಸರ್ಕಾರದ ಸಮ್ಮತಿಯಿಂದಲೇ ನನ್ನ ಕುಟುಂಬವನ್ನು ಹೆದರಿಸುವ ಕೆಲಸವಾಗುತ್ತಿದೆ. ನನ್ನನ್ನು ಹೆದರಿಸಿ ಮೌನಗೊಳಿಸುವುದು ನಿಮ್ಮ ಉದ್ದೇಶವಾಗಿದ್ದರೆ, ಅದು ಎಂದಿಗೂ ನಡೆಯುವುದಿಲ್ಲ. ಪೊಲೀಸರು ಗೂಂಡಾಗಳಂತೆ ವರ್ತಿಸದೆ ಕಾನೂನನ್ನು ಗೌರವಿಸುವಂತಹ ಉತ್ತಮ ವ್ಯವಸ್ಥೆಯನ್ನು ನಿರ್ಮಿಸಲು ಈ ಘಟನೆ ನಮಗೆ ಮತ್ತಷ್ಟು ಬಲ ನೀಡುತ್ತದೆ,” ಎಂದು ಸೌರವ್ ಆಕ್ರೋಶ ಹೊರಹಾಕಿದ್ದಾರೆ.

ಇದು ‘ರೂಟೀನ್ ಸೆಕ್ಯೂರಿಟಿ ಚೆಕ್’ ಎಂದ ಪೊಲೀಸರು:

ಸೌರವ್ ದಾಸ್ ಅವರ ಆರೋಪಗಳನ್ನು ಪುದುಚೇರಿ ರಾಜ್ಯ ಪೊಲೀಸರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಕ್ರೈಂ ಮತ್ತು ಇಂಟೆಲಿಜೆನ್ಸ್ ವಿಭಾಗದ ಹಿರಿಯ ಅಧಿಕಾರಿ ನಿತ್ಯಾ ರಾಧಾಕೃಷ್ಣನ್, “ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಇದು ಸಾಮಾನ್ಯ ಭದ್ರತಾ ಪರಿಶೀಲನೆಯಾಗಿದೆ (Routine Security Check). ಯಾವುದೇ ನಿರ್ದಿಷ್ಟ ವ್ಯಕ್ತಿ ಅಥವಾ ಕುಟುಂಬವನ್ನು ಗುರಿಯಾಗಿಸಿಕೊಂಡು ನಾವು ಭೇಟಿ ನೀಡಿಲ್ಲ,” ಎಂದು ತಿಳಿಸಿದ್ದಾರೆ.

ಪುದುಚೇರಿಯ ವೈಟ್ ಟೌನ್ ಪ್ರದೇಶದಲ್ಲಿ ರಾಜ್ಯಪಾಲರ (ಎಲ್.ಜಿ) ನಿವಾಸವಿದ್ದು, ಅದೇ ಪ್ರದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದ ಪೂರ್ವಾಭ್ಯಾಸವೂ (Rehearsal) ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆ ರಸ್ತೆಯ ಪ್ರತಿಯೊಂದು ಮನೆಗಳಲ್ಲೂ ಸಾಮಾನ್ಯ ಪರಿಶೀಲನೆ ನಡೆಸಲಾಗಿದೆ. ಪೊಲೀಸರು ಸೌರವ್ ಅವರ ಮನೆಯ ಒಳಗೂ ಪ್ರವೇಶಿಸಿಲ್ಲ, ಕೇವಲ ಬಾಗಿಲ ಬಳಿ ನಿಂತು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು