ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ದೇಶ, ವಿದೇಶ

• 1 ನಿಮಿಷದ ಓದು

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ ಮೊದಲ ಸಂಸತ್ ಚುನಾವಣೆಯಲ್ಲಿ ರಷ್ಯಾದ ಆಡಳಿತಾರೂಢ ಯುನೈಟೆಡ್ ರಷ್ಯಾ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುನೈಟೆಡ್ ರಷ್ಯಾ ಪಕ್ಷ ಶೇ.57.83 ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ರಷ್ಯಾ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.ಇದುವರೆಗೆ ಶೇ. 90 ರಷ್ಟು ಮತಗಳ ಎಣಿಕೆಯಾಗಿದ್ದು, ಆಡಳಿತರೂಢ ಪಕ್ಷವು ಸುಮಾರು ಶೇ. 58 ರಷ್ಟು ಬೆಂಬಲ ಪಡೆದಿದೆ ಎಂದು ರಷ್ಯಾ ಕೇಂದ್ರ ಚುನಾವಣಾ ಆಯೋಗವನ್ನು ಉಲ್ಲೇಖಿಸಿ ರಾಜ್ಯ ಸುದ್ದಿವಾಹಿನಿಗಳು ವರದಿ ಮಾಡಿವೆ.ಕಮ್ಯುನಿಸ್ಟ್ ಪಕ್ಷವು ಶೇ. 13.84 ನೊಂದಿಗೆ ಎರಡನೇ ಸ್ಥಾನದಲ್ಲಿದ್ದು, ನಂತರ ರಾಷ್ಟ್ರೀಯವಾದಿ ಲಿಬರಲ್ ಡೆಮಾಕ್ರಟಿಕ್ ಪಕ್ಷವು ಶೇ. 8.9 ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪುಟಿನ್ ಅವರು ಈ ಚುನಾವಣೆಯನ್ನು ರಷ್ಯಾದಲ್ಲಿ ಕರೆಯಲಾಗುವ “ವಿಶೇಷ ಮಿಲಿಟರಿ ಕಾರ್ಯಾಚರಣೆ”ಗೆ ಸಾರ್ವಜನಿಕರ ಬೆಂಬಲವನ್ನು ಅಳೆಯುವ ಜನಾಭಿಪ್ರಾಯ ಸಂಗ್ರಹದಂತೆ ಬಿಂಬಿಸಿದ್ದರು. ಪುಟಿನ್ ಮತ್ತು ಕ್ರೆಮ್ಲಿನ್‌ನ ಯುದ್ಧ ನೀತಿಯನ್ನು ಬೆಂಬಲಿಸುವ ಪಕ್ಷಗಳಿಗೆ ಮಾತ್ರ ಸ್ಪರ್ಧಿಸಲು ಅನುಮತಿ ನೀಡಲಾಗಿತ್ತು ಹಾಗೂ ಪ್ರಮುಖ ವಿರೋಧ ಪಕ್ಷಗಳನ್ನು ಚುನಾವಣೆಯಿಂದ ದೂರವಿಡಲಾಗಿತ್ತು.

ಪ್ರಾಥಮಿಕ ಫಲಿತಾಂಶಗಳ ಪ್ರಕಾರ, 450 ಸ್ಥಾನಗಳಿರುವ ಡುಮಾ(ರಷ್ಯಾದ ಸಂಸತ್ತಿನ ಕೆಳಮನೆ) ಸಭೆಯಲ್ಲಿ ಯುನೈಟೆಡ್ ರಷ್ಯಾ ಪಕ್ಷವು 355 ಸ್ಥಾನಗಳನ್ನು ಪಡೆಯಲಿದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥೆ ಎಲ್ಲಾ ಪಂಫಿಲೋವಾ ತಿಳಿಸಿದ್ದಾರೆ. ಇದು ಪಕ್ಷವು ಪ್ರಸ್ತುತ ಹೊಂದಿರುವ ಸ್ಥಾನಗಳಿಗಿಂತ ಸುಮಾರು 20 ಸ್ಥಾನಗಳು ಹೆಚ್ಚಾಗಿದ್ದು, ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಜಯವನ್ನು ದಾಖಲಿಸಿದೆ.

ಇದಕ್ಕೂ ಮುನ್ನ 2024 ರ ಮಾರ್ಚ್‌ನಲ್ಲಿ ನಡೆದಿದ್ದ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಅವರು ಶೇ.87.17 ರಷ್ಟು ದಾಖಲೆ ಮತಗಳನ್ನು ಪಡೆದು ಭರ್ಜರಿ ಜಯ ದಾಖಲಿಸಿದ್ದರು. ಆ ಮೂಲಕ ಅವರು ಐದನೇ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದರು

ವಿಷಯಗಳು: #india #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು