ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡಲಾಗದವರು ಇತರರಿಗೆ ದಾರಿ ಬಿಟ್ಟುಕೊಡಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

PPeepal Media

Peepal Media ದೇಶ

• 1 ನಿಮಿಷದ ಓದು

ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡಲಾಗದವರು ಇತರರಿಗೆ ದಾರಿ ಬಿಟ್ಟುಕೊಡಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಕೆಲಸಗಳನ್ನು ಮಾಡಲಾಗದವರು ತಮ್ಮ ಪದವಿಯನ್ನು ತ್ಯಜಿಸಿ ಉಳಿದವರಿಗೆ ದಾರಿ ಮಾಡಿಕೊಡಬೇಕೆಂದು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷ ಮತ್ತು ದೇಶದ ಕುರಿತಾಗಿ ಕಾಂಗ್ರೆಸ್ ನಾಯರಿಗೆ ಇರುವ ದೊಡ್ಡ ಜವಾಬ್ದಾರಿಯೆಂದರೆ ಎಲ್ಲಾ ಹಂತಗಳಲ್ಲಿ ಪಕ್ಷವನ್ನು ಸಂಘಟಿಸುವುದು ಎಂದು ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಚಾಲನಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಕಾಂಗ್ರೆಸ್‌ನಲ್ಲಿ ಕೆಲವು ಜವಾಬ್ದಾರಿಯುತ ಪದಾಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೆ, ಇನ್ನು ಕೆಲವರು ತಮ್ಮ ಜವಾಬ್ದಾರಿಯ ಕೊರತೆಯನ್ನು ನಿರ್ಲಕ್ಷಿಸಿ ಸುಮ್ಮನಾಗುತ್ತಾರೆ ಎಂದು ಭಾವಿಸಿದ್ದಾರೆ ಎಂದು ಖರ್ಗೆ ಹೇಳಿದರು.

ಇದು ಸರಿಯೂ ಅಲ್ಲ, ಸ್ವೀಕಾರಾರ್ಹವೂ ಅಲ್ಲ, “ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು, ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಕಾಂಗ್ರೆಸ್ ಸಂಘಟನೆಯು ಬಲಿಷ್ಠವಾಗಿದ್ದರೆ, ಜವಾಬ್ದಾರಿಯುತವಾಗಿದ್ದರೆ, ಜನರ ನಿರೀಕ್ಷೆಗಳನ್ನು ಪೂರೈಸಿದರೆ ಮಾತ್ರವೇ ನಾವು ಚುನಾವಣೆಯಲ್ಲಿ ಗೆದ್ದು ದೇಶದ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾರತ್‌ ಜೋಡೋ ಯಾತ್ರೆ ಕುರಿತು ಮಾತನಾಡಿದ ಅವರು ಭಾರತ್‌ ಜೋಡೋ ಯಾತ್ರೆಯು ಭಾರತದಲ್ಲಿ ಇತಿಹಾಸ ಸೃಷ್ಟಿಸುತ್ತಿದೆ ಎಂದರು. ಭಾರತ್‌ ಜೋಡೋ ಯಾತ್ರೆಯು ಈಗಾಗಲೇ 2,000 ಕಿಲೋಮೀಟರ್‌ ದೂರವನ್ನು ಕ್ರಮಿಸಿದ್ದು ಮುಂದಿನ ಮಾರ್ಚ್‌ ತಿಂಗಳ ವೇಳೆಗೆ 3,500 ಕಿಲೋಮೀಟರ್‌ ದೂರವನ್ನು ಕ್ರಮಿಸಲಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು