ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇದು ದೇಶದ್ರೋಹ: ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ಬೆನ್ನಲ್ಲೇ ಆಯೋಗ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ

P

Peepal Media • ದೇಶ

• 1 ನಿಮಿಷದ ಓದು

ಇದು ದೇಶದ್ರೋಹ: ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ಬೆನ್ನಲ್ಲೇ ಆಯೋಗ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌ – SIR) ಪ್ರಕ್ರಿಯೆ ಕುರಿತು ಭಾರತೀಯ ಚುನಾವಣಾ ಆಯೋಗದ (ಇಸಿಐ) ಒಳಗೆ ಭಿನ್ನಾಭಿಪ್ರಾಯಗಳು ಎದ್ದಿವೆ ಎಂಬ ಮಾಧ್ಯಮ ವರದಿಗಳ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಮತಗಳ ಕಳ್ಳತನವನ್ನು ‘ದೇಶದ್ರೋಹ’ ಎಂದು ಕರೆದಿರುವ ಅವರು, ಈ ಅಕ್ರಮಕ್ಕೆ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣಾ ಆಯೋಗದಲ್ಲಿನ ವಿದ್ಯಮಾನಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪ್ರಕಟಿಸಿದ ತನಿಖಾ ವರದಿಯನ್ನು ಆಧರಿಸಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕಳೆದ 10 ತಿಂಗಳ ಅವಧಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶಗಳು ಮತ್ತು ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕನಿಷ್ಠ 14 ಬಾರಿ ತಮ್ಮ ಅಧಿಕೃತ ಆಕ್ಷೇಪಗಳನ್ನು ದಾಖಲಿಸಿದ್ದಾರೆ ಎಂದು ವರದಿ ಹೇಳಿತ್ತು.

ಹೊಸ ಮತದಾರರಿಗೆ ನೀಡುವ ಫಾರ್ಮ್-6 ರಲ್ಲಿನ ಬದಲಾವಣೆಗಳು, ಹೆಸರುಗಳ ಸೇರ್ಪಡೆ-ತೆಗೆದುಹಾಕುವಿಕೆ ಹಾಗೂ ಕೇಂದ್ರೀಕೃತ ಮತದಾರರ ಡೇಟಾಬೇಸ್ ಪ್ರವೇಶದಂತಹ ನಿರ್ಧಾರಗಳನ್ನು ಆಯುಕ್ತರು ಆಕ್ಷೇಪಿಸಿದ್ದು, ಕೆಲವು ಕ್ರಮಗಳನ್ನು ಆಂತರಿಕ ಸಂವಹನಗಳಲ್ಲಿ ‘ಅನಧಿಕೃತ’ ಹಾಗೂ ‘ಕಾನೂನುಬಾಹಿರ’ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಈ ವರದಿಯನ್ನು ಉಲ್ಲೇಖಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮತಗಳ ಕಳ್ಳತನವು ದೇಶದ ಜನರ ವಿರುದ್ಧದ ಅಪರಾಧ ಮತ್ತು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದಿದ್ದಾರೆ. ಜೊತೆಗೆ ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು ಚುನಾವಣಾ ಆಯೋಗದ ಅಧಿಕಾರಿಗಳನ್ನು ನೇರವಾಗಿ ಎಚ್ಚರಿಸಿ, “ಇದು ದೇಶದ್ರೋಹ. ಇಂತಹ ದೇಶವಿರೋಧಿ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ, ನ್ಯಾಯ ಸಿಕ್ಕೇ ತೀರುತ್ತದೆ” ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ನಾಯಕರಾದ ಮನೀಷ್ ತಿವಾರಿ ಮತ್ತು ಪಿ. ಚಿದಂಬರಂ ಅವರೂ ಈ ಬೆಳವಣಿಗೆಯನ್ನು ಖಂಡಿಸಿದ್ದು, ಚುನಾವಣಾ ಆಯೋಗವನ್ನು ನಿಯಂತ್ರಿಸುತ್ತಿರುವ ‘ಅದೃಶ್ಯ ಕೈ’ಯ ಬಗ್ಗೆ ಪ್ರಶ್ನಿಸಿದ್ದಾರೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಸಂಸದೀಯ ಸಮಿತಿಯಿಂದ ಪರಿಶೀಲನೆ ನಡೆಸುವಂತೆ ಮತ್ತು ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ವಜಾಗೊಳಿಸುವ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ಆಯೋಗದ ಒಳಗೆ ಒಡಕು ಉಂಟಾಗಿದೆ ಎಂಬ ವರದಿಗಳನ್ನು ಚುನಾವಣಾ ಆಯೋಗ ಸ್ಪಷ್ಟವಾಗಿ ನಿರಾಕರಿಸಿದೆ. ಚರ್ಚೆಗಳ ಸಂದರ್ಭದಲ್ಲಿ ಆಯುಕ್ತರ ನಡುವೆ ವಿಭಿನ್ನ ದೃಷ್ಟಿಕೋನಗಳು ಬರುವುದು ಸಹಜವಾದ ಪ್ರಕ್ರಿಯೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಆಯೋಗದ ಎಲ್ಲಾ ಅಂತಿಮ ತೀರ್ಮಾನಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ಒಮ್ಮತದ ಅನುಮೋದನೆಯೊಂದಿಗೆ ಸರ್ವಾನುಮತದಿಂದಲೇ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version