ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

PPeepal Media

Peepal Media ದೇಶ

• 1 ನಿಮಿಷದ ಓದು

ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಬ್ರಿಟಿಷ್ ಪೌರತ್ವ ಹೊಂದಿರುವ ಬಗ್ಗೆ ಇರುವ ದೂರುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸ್ವತಃ ತನಿಖೆ ನಡೆಸಬಹುದು ಅಥವಾ ಕೇಂದ್ರ ತನಿಖಾ ಸಂಸ್ಥೆಯ ನೆರವು ಪಡೆಯಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಈ ಹಿಂದೆ ಲಕ್ನೋದ ವಿಶೇಷ ಎಂಪಿ/ಎಂಎಲ್‌ಎ ನ್ಯಾಯಾಲಯವು ಜನವರಿ 28ರಂದು ಈ ದೂರನ್ನು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೆಳಹಂತದ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ತನಿಖೆಗೆ ಹಸಿರು ನಿಶಾನೆ ತೋರಿಸಿದೆ.

ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ‘ಬ್ಯಾಕ್‌ಅಪ್ಸ್ ಲಿಮಿಟೆಡ್’ ಎಂಬ ಕಂಪನಿಯನ್ನು ಹೊಂದಿದ್ದು, ಅದರ ದಾಖಲೆಗಳಲ್ಲಿ ತಾವು ಬ್ರಿಟಿಷ್ ಪ್ರಜೆ ಎಂದು ಘೋಷಿಸಿಕೊಂಡಿದ್ದಾರೆ ಎಂಬುದು ಅರ್ಜಿದಾರರ ಪ್ರಮುಖ ಆರೋಪವಾಗಿದೆ. 2005 ಮತ್ತು 2006ರ ವಾರ್ಷಿಕ ರಿಟರ್ನ್ಸ್ ದಾಖಲೆಗಳಲ್ಲಿ ಅವರ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ನಮೂದಿಸಲಾಗಿದೆ ಎಂಬ ಅಂಶವನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಭಾರತೀಯ ಸಂವಿಧಾನವು ದ್ವಿಪೌರತ್ವವನ್ನು ಅನುಮತಿಸುವುದಿಲ್ಲವಾದ್ದರಿಂದ, ಬ್ರಿಟಿಷ್ ಪೌರತ್ವ ಹೊಂದಿರುವ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಲೋಕಸಭೆ ಸದಸ್ಯರಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ. ಸಲ್ಲಿಸಲಾದ ದಾಖಲೆಗಳನ್ನು ಪರಿಶೀಲಿಸಿದ ಹೈಕೋರ್ಟ್, ಇದು ಗಂಭೀರವಾದ ವಿಷಯವಾಗಿದ್ದು ಕಾನೂನುಬದ್ಧ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು