ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲೇ ವಿಷಾದ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ

PPeepal Media

Peepal Media ದೇಶ

• 1 ನಿಮಿಷದ ಓದು

ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲೇ ವಿಷಾದ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಪ್ಪು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಲು ಸಮ್ಮತಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶದ ಮಾಜಿ ಸಿಎಂ ಹಾಗೂ ಪ್ರಸ್ತುತ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ವಿರುದ್ಧ ತಾವು ಮಾಡಿದ್ದ ರಾಜಕೀಯ ಆರೋಪಗಳ ಕುರಿತು ನ್ಯಾಯಾಲಯಕ್ಕೆ ಲಿಖಿತ ವಿಷಾದ ವ್ಯಕ್ತಪಡಿಸುವುದಾಗಿ ಅವರು ತಿಳಿಸಿದ್ದಾರೆ.

ಈ ಹಳೆಯ ವಿವಾದಾತ್ಮಕ ಪ್ರಕರಣದ ವಿವರಗಳು ಹೀಗಿವೆ: ಹಿಂದೆ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡಿದ್ದ ‘ಪನಾಮಾ ಪೇಪರ್ಸ್’ (Panama Papers) ಹಗರಣಕ್ಕೆ ಸಂಬಂಧಿಸಿದಂತೆ 2018 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಪ್ರಚಾರ ನಡೆಸುತ್ತಿದ್ದರು. ಆ ವೇಳೆ ಝಬುವಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್, ಪನಾಮಾ ಪೇಪರ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಂದಿನ ಸಿಎಂ ಶಿವರಾಜ್ ಸಿಂಗ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಅವರ ಹೆಸರೂ ಸಹ ಒಳಗೊಂಡಿದೆ ಎಂದು ನೇರವಾಗಿ ಪ್ರಸ್ತಾಪಿಸಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಕಾರ್ತಿಕೇಯ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವುದೇ ಆಧಾರ ಮತ್ತು ಸಾಕ್ಷ್ಯಗಳಿಲ್ಲದೆ ರಾಜಕೀಯ ಲಾಭಕ್ಕಾಗಿ ತಮ್ಮ ಹೆಸರನ್ನು ಹಗರಣಕ್ಕೆ ಎಳೆದು ತರಲಾಗಿದೆ ಮತ್ತು ಇದರಿಂದ ಸಮಾಜದಲ್ಲಿ ತಮ್ಮ ಘನತೆ ಹಾಗೂ ಪಾವಿತ್ರ್ಯತೆಗೆ ಭಾರಿ ಧಕ್ಕೆ ಉಂಟಾಗಿದೆ ಎಂದು ಅವರು ದೂರಿದ್ದರು. ಈ ಸಂಬಂಧ ರಾಹುಲ್ ತಕ್ಷಣವೇ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದ ಕಾರ್ತಿಕೇಯ, ಮಧ್ಯಪ್ರದೇಶದ ಭೋಪಾಲ್‌ನ ವಿಶೇಷ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನ ನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೆಳ ನ್ಯಾಯಾಲಯವು ರಾಹುಲ್ ಹೇಳಿಕೆಯನ್ನು ತಪ್ಪು ಎಂದು ಪರಿಗಣಿಸಿತ್ತು ಮತ್ತು ಅವರಿಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿ ಆದೇಶಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಹೈಕೋರ್ಟ್ ವಿಚಾರಣೆಯ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆಗೆ ಅಧಿಕೃತವಾಗಿ ವಿಷಾದ ವ್ಯಕ್ತಪಡಿಸಲು ಒಪ್ಪಿಕೊಂಡಿದ್ದಾರೆ.

ತಾವು ಆ ಚುನಾವಣಾ ರ್ಯಾಲಿಯಲ್ಲಿ ಆಡಿದ ಮಾತುಗಳು ವೈಯಕ್ತಿಕವಾಗಿ ಕಾರ್ತಿಕೇಯ ಸಿಂಗ್ ಅವರನ್ನು ಉದ್ದೇಶಿಸಿ ಹೇಳಿದ್ದಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ಅದಕ್ಕೆ ವಿಷಾದಿಸುವುದಾಗಿ ತಿಳಿಸಿದ್ದಾರೆ. ಜಸ್ಟಿಸ್ ಪ್ರಮೋದ್ ಕುಮಾರ್ ಅವರ ನೇತೃತ್ವದ ಹೈಕೋರ್ಟ್ ಪೀಠದ ಮುಂದೆ ಈ ಕುರಿತ ಕಾನೂನು ಪ್ರಕ್ರಿಯೆಗಳು ನಡೆದಿದ್ದು, ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಈ ಲಿಖಿತ ವಿವರಗಳನ್ನು ಮುಂದಿನ ಕ್ರಮಗಳಿಗಾಗಿ ಭೋಪಾಲ್ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ರಾಹುಲ್ ಪರ ನ್ಯಾಯಾವಾದಿಗಳು ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು