ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಳೆ ಅವಾಂತರ; ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಇಬ್ಬರ ಸಾವು

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಮಳೆ ಅವಾಂತರ; ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಇಬ್ಬರ ಸಾವು

ಮೇ 22 ರ ವರೆಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೇ 21, 22 ರ ವರೆಗೂ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗಲಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ, ಹಾಗೂ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಿಳಿಸಿದೆ.

ಇತ್ತ ರಾಜಧಾನಿ ಬೆಂಗಳೂರಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ಬಿಟಿಎಂ ಲೇಔಟ್ ನ 2 ನೇ ಹಂತದ ಎನ್ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಮಧುವನ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ ನಿವಾಸಿ ಮನೋಹರ್ ಕಾಮತ್ ಹಾಗೂ ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ದುರ್ಮರಣ ಹೊಂದಿದ್ದಾರೆ. ಮಳೆಯಿಂದ ಸಂಪೂರ್ಣವಾಗಿ ಅಪಾರ್ಟ್ಮೆಂಟಿನ ಬೇಸ್ಮೆಂಟ್ ಜಲಾವೃತವಾಗಿತ್ತು.

ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್ ನಿಂದ ಮನೋಹರ್ ಕಾಮತ್ ಮತ್ತು ದಿನೇಶ್ ಸಾವನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ಇಬ್ಬರ ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಧುವನ ಅಪಾರ್ಟ್ಮೆಂಟ್ ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು