ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ: ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

PPeepal Media

Peepal Media ದೇಶ

• 1 ನಿಮಿಷದ ಓದು

ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ: ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರಾಜ್ಯ ದರ್ಜೆ ಸಚಿವರಾಗಿದ್ದ ರವನೀತ್ ಸಿಂಗ್ ಬಿಟ್ಟು ಅವರು ಶುಕ್ರವಾರ ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ. ರವನೀತ್ ಸಿಂಗ್ ಬಿಟ್ಟು ಅವರು ರಾಜ್ಯಸಭೆಯ ಮೂಲಕ ಕೇಂದ್ರ ಸಚಿವರಾಗಿ ನಿಯೋಜನೆಗೊಂಡಿದ್ದರು.

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರವನೀತ್ ಸಿಂಗ್ ಬಿಟ್ಟು ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತರಾಗಿದ್ದರು. 2024 ರ ಲೋಕಸಭಾ ಚುನಾವಣೆಗೆ തൊಟ್ಟು ಮುಂಚಿತವಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯು ಅವರನ್ನು ಲುಧಿಯಾನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತ್ತು.

ಆದಾಗ್ಯೂ, ಅವರು ಕಾಂಗ್ರೆಸ್‌ನ ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಹೀಗಿದ್ದರೂ, ಬಿಜೆಪಿಯು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಿತ್ತು.

ರಾಜ್ಯಸಭೆಯಲ್ಲಿ ಸಿಗದ ಸ್ಥಾನ

2024 ರ ಲೋಕಸಭಾ ಚುನಾವಣೆಯ ನಂತರ ಆಡಳಿತಾರೂಢ ಬಿಜೆಪಿಯು ರವನೀತ್ ಸಿಂಗ್ ಬಿಟ್ಟು ಅವರನ್ನು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿತ್ತು. ಆದರೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಟ್ಟು ಅವರಿಗೆ ಮತ್ತೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ.

ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿಯಲು ಸಂಸತ್ತಿನ ಯಾವುದಾದರೂ ಒಂದು ಸದನದ (ಲೋಕಸಭೆ ಅಥವಾ ರಾಜ್ಯಸಭೆ) ಸದಸ್ಯತ್ವ ಕಡ್ಡಾಯವಾಗಿರುವುದರಿಂದ, ಟಿಕೆಟ್ ಸಿಗದಿದ್ದಾಗಲೇ ಅವರ ಸಚಿವ ಸ್ಥಾನ ಕೈತಪ್ಪುವುದು ನಿಶ್ಚಿತವಾಗಿತ್ತು.

ಪಂಜಾಬ್ ಚುನಾವಣೆಯತ್ತ ಗಮನ

ಮೂಲಗಳ ಪ್ರಕಾರ, ಭಾರತೀಯ ಜನತಾ ಪಾರ್ಟಿಯು ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯ ಮೇಲೆ ಸಂಪೂರ್ಣ ಗಮನ ಹರಿಸುತ್ತಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಗೆದ್ದ ನಂತರ ಬಿಜೆಪಿ ಹೈಕಮಾಂಡ್ ಪಂಜಾಬ್ ಚುನಾವಣೆಯನ್ನು ತನ್ನ ಮುಂದಿನ ಪ್ರಮುಖ ಮಿಷನ್ ಎಂದು ಪರಿಗಣಿಸಿದೆ. ಹೀಗಾಗಿ ರವನೀತ್ ಸಿಂಗ್ ಬಿಟ್ಟು ಅವರನ್ನು ಪಂಜಾಬ್ ರಾಜಕಾರಣದಲ್ಲಿ ಸಕ್ರಿಯಗೊಳಿಸಲು ಬಿಜೆಪಿ ಈ ನಿರ್ಧಾರ ಕೈಗೊಂಡಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯಸಭಾ ಚುನಾವಣೆಯ ವೇಳೆ ಟಿಕೆಟ್ ಸಿಗದಿದ್ದಾಗ ಪ್ರತಿಕ್ರಿಯಿಸಿದ್ದ ರವನೀತ್ ಸಿಂಗ್ ಬಿಟ್ಟು, ತಾವು ಪಂಜಾಬ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಸಂಪೂರ್ಣ ಶಕ್ತಿಯನ್ನು ವಿನಿಯೋಗಿಸುವುದಾಗಿ ತಿಳಿಸಿದ್ದರು. ಮುಂಬರುವ ದಿನಗಳಲ್ಲಿ ಬಿಜೆಪಿಯು ರವನೀತ್ ಸಿಂಗ್ ಬಿಟ್ಟು ಅವರನ್ನು ಪಂಜಾಬ್ ಚುನಾವಣೆಗೆ ಪಕ್ಷದ ಪ್ರಮುಖ ಮುಖವನ್ನಾಗಿ ಬಿಂಬಿಸುವ ಸಾಧ್ಯತೆಯಿದೆ.

ರವನೀತ್ ಸಿಂಗ್ ಬಿಟ್ಟು ಕಾಂಗ್ರೆಸ್‌ನಲ್ಲಿದ್ದಾಗ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದರೆ ಪಕ್ಷ ತೊರೆದು ಮೋದಿ ಸರ್ಕಾರದಲ್ಲಿ ಸಚಿವರಾದ ನಂತರ, ಕಳೆದ ವರ್ಷ ಸಂಸತ್ತಿನ ಅಧಿವೇಶನದ ವೇಳೆ ಮಕರ ದ್ವಾರದ ಬಳಿ ರಾಹುಲ್ ಗಾಂಧಿ ಅವರು ರವನೀತ್ ಸಿಂಗ್ ಬಿಟ್ಟು ಅವರನ್ನು ‘ದ್ರೋಹಿ’ (ಗದ್ದಾರ್) ಎಂದು ಕರೆದಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು