ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಂದಿ ಪ್ರಶಸ್ತಿ ಬದಲು ಗದ್ದರ್‌ ಅವಾರ್ಡ್‌: ರೇವಂತ್ ರೆಡ್ಡಿ ಘೋಷಣೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನಂದಿ ಪ್ರಶಸ್ತಿ ಬದಲು ಗದ್ದರ್‌ ಅವಾರ್ಡ್‌: ರೇವಂತ್ ರೆಡ್ಡಿ ಘೋಷಣೆ

ತೆಲುಗು ಸಿನಿಮಾ ಕಲಾವಿದರಿಗೆ ನೀಡುತ್ತಿದ್ದ ‘ನಂದಿ ಪ್ರಶಸ್ತಿ’ ಬದಲು ‘ಗದ್ದರ್ ಅವಾರ್ಡ್’ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಘೋಷಣೆ ಮಾಡಿದ್ದಾರೆ.

ಹೈದರಾಬಾದ್‌ನ ರವೀಂದ್ರ ಭಾರತಿಯಲ್ಲಿ ಆಯೋಜಿಸಿದ್ದ ಗದ್ದರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರೇವಂತ್ ರೆಡ್ಡಿ ಚಲನಚಿತ್ರ ಕಲಾವಿದರಿಗೆ ನಂದಿ ಪ್ರಶಸ್ತಿಯನ್ನು ತೆಲಂಗಾಣ ಸರ್ಕಾರ ಪುನಃ ಪ್ರಾರಂಭಿಸಬೇಕೆಂದು ಕೇಳಿಕೊಂಡ ಹಿನ್ನಲೆಯಲ್ಲಿ, ನಂದಿ ಪ್ರಶಸ್ತಿಯ ಹೆಸರನ್ನು ಗದ್ದರ್‌ ಪ್ರಶಸ್ತಿ ಎಂದು ಬದಲಾಯಿಸಿ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ತೆಲಂಗಾಣ ಉಪ ಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಉಪಸ್ಥಿತರಿದ್ದರು.

“ತನ್ನ ಮಾತೇ ಸರ್ಕಾರದ ಆದೇಶ. ಆದಷ್ಟು ಬೇಗ ಈ ಕುರಿತಂತೆ ಸರ್ಕಾರದಿಂದ ಅಧಿಕೃತ ಅದೇಶ ಹೊರಡಿಸಲಾಗುವುದು. ಮುಂದಿನ ವರ್ಷದಿಂದ ಗದ್ದರ್ ಜಯಂತಿಯಂದು ಈ ಪ್ರಶಸ್ತಿಗಳನ್ನು ನೀಡಲಾಗುವುದು. ರಾಜ್ಯ ಸರ್ಕಾರದ ವತಿಯಿಂದ ಕವಿಗಳು, ಕಲಾವಿದರು ಹಾಗೂ ಚಿತ್ರರಂಗದ ಕಲಾವಿದರಿಗೆ ಗದ್ದರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು,” ಎಂದು ಹೇಳಿದ್ದಾರೆ.

“ತೆಲಂಗಾಣ ರಾಜ್ಯಕ್ಕಾಗಿ ಚಳವಳಿ ಆರಂಭಿಸಿದ ವ್ಯಕ್ತಿ ಗದ್ದರ್ ಸಮಾಜವನ್ನು ಜಾಗೃತಗೊಳಿಸಲು ಧ್ವನಿ ಎತ್ತಿದ ಮಹಾನ್ ವ್ಯಕ್ತಿ, ಜನಪರ ಸರ್ಕಾರ ರಚಿಸುವ ಗದ್ದರಣ್ಣನವರ ಮಾತು ನಮಗೆ ಸ್ಪೂರ್ತಿ ನೀಡಿದೆ,” ಎಂದು ಹೇಳಿದ್ದಾರೆ.

ಗದ್ದರ್ ಪ್ರತಿಮೆ ನಿರ್ಮಾಣಕ್ಕೆ ಹಸಿರು ನಿಶಾನೆ

ಸಾರ್ವಜನಿಕ ಯುದ್ಧನೌಕೆ, ಕ್ರಾಂತಿಕಾರಿ ಕವಿ, ಸಾರ್ವಜನಿಕ ಗಾಯಕ ಗದ್ದರ್ ಪ್ರತಿಮೆ ಸ್ಥಾಪಿಸಲು ಸಿಎಂ ರೇವಂತ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಗದ್ದರ್ ಪ್ರತಿಮೆ ಸ್ಥಾಪಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ರೇವಂತ್ ರೆಡ್ಡಿ ಭರವಸೆ ನೀಡಿದ್ದರು. ಇದಕ್ಕಾಗಿ ಸಂಗಾರೆಡ್ಡಿ ಜಿಲ್ಲೆಯ ತೇಲಾಪುರ್ ಪುರಸಭೆಯ ನಿರ್ಣಯವನ್ನು ಸರ್ಕಾರ ಅನುಮೋದಿಸಿದ್ದು, ಮೂರ್ತಿ ಪ್ರತಿಷ್ಠಾಪನೆಗೆ ಸೂಕ್ತ ಸ್ಥಳ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ರಾಜ್ಯದ ಪ್ರಗತಿಪರ ದಲಿತ ಪರ ಸಂಘಟನೆಗಳು ಸಂತಸವನ್ನು ವ್ಯಕ್ತಪಡಿಸಿವೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು