ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶಾದ್ಯಂತ ಮತದಾರರ ಪಟ್ಟಿಗಳ ಪರಿಶೀಲನೆ: ಆರು ರಾಜ್ಯಗಳಲ್ಲಿ ಜನ್ಮಸ್ಥಳ, ಜನ್ಮ ದಿನಾಂಕದ ಸಮೀಕ್ಷೆ

PPeepal Media

Peepal Media • ದೇಶ

• 1 ನಿಮಿಷದ ಓದು

ದೇಶಾದ್ಯಂತ ಮತದಾರರ ಪಟ್ಟಿಗಳ ಪರಿಶೀಲನೆ: ಆರು ರಾಜ್ಯಗಳಲ್ಲಿ ಜನ್ಮಸ್ಥಳ, ಜನ್ಮ ದಿನಾಂಕದ ಸಮೀಕ್ಷೆ

ದೆಹಲಿ, ಜೂನ್ 25: ಮತದಾರರ ಪಟ್ಟಿಯಲ್ಲಿ ಅರ್ಹ ಭಾರತೀಯ ನಾಗರಿಕರು ಮಾತ್ರ ಸೇರಿರುವುದನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಮತದಾರರ ಪಟ್ಟಿಗಳ ಸಮಗ್ರ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಈ ಉದ್ದೇಶಕ್ಕಾಗಿ ‘ಸ್ಪೆಷಲ್ ಇಂಟೆನ್ಸಿವ್ ರಿವಿಜನ್’ (SIR) ಕೈಗೊಳ್ಳುತ್ತಿರುವುದಾಗಿ ಚುನಾವಣಾ ಆಯೋಗ ಬುಧವಾರ ಘೋಷಿಸಿದೆ. SIR ಪ್ರಕ್ರಿಯೆಯ ಸಮಯದಲ್ಲಿ, ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆ ಸಮೀಕ್ಷೆ ನಡೆಸಿ ಮತದಾರರ ಜನ್ಮ ಸ್ಥಳವನ್ನು ಪರಿಶೀಲಿಸುತ್ತಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ‌

2003 ಲ್ಲಿ EC ನಡೆಸಿದ ಕೊನೆಯ SIRನಲ್ಲಿ ಇಲ್ಲದವರು, ವಿಶೇಷವಾಗಿ ಜುಲೈ 1, 1987ರ ಮೊದಲು ಜನಿಸಿದವರು, ಜನ್ಮ ಸ್ಥಳ ಮತ್ತು ಜನ್ಮ ದಿನಾಂಕದ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ವರ್ಷ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಬಿಹಾರದಿಂದ SIR ಪ್ರಾರಂಭವಾಗಲಿದೆ ಮತ್ತು ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ.

ಅದಾದ ನಂತರ ಇತರ ರಾಜ್ಯಗಳಲ್ಲಿಯೂ ನಡೆಸಲಾಗುವುದು ಎಂದು ಹೇಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮತದಾರರ ಪಟ್ಟಿಯ ನಿಖರತೆಯ ಬಗ್ಗೆ ಅನುಮಾನಗಳು ಮತ್ತು ಕಳವಳಗಳಿವೆ. ಅದರಲ್ಲಿ ಅಕ್ರಮ ವಲಸಿಗರನ್ನು ಸೇರಿಸಲಾಗಿದೆ ಎಂಬ ಆರೋಪಗಳಿವೆ. ಈ ಸಂದರ್ಭದಲ್ಲಿ ‘SIR’ ನಡೆಸಲಾಗುವುದು ಎಂದು EC ತಿಳಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು