ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರಗಳು ಬದಲಾದ ತಕ್ಷಣ ಪರಿಸ್ಥಿತಿ ಬದಲಾಗುವುದಿಲ್ಲ: ಆರೆಸ್ಸೆಸ್ ಶತಮಾನೋತ್ಸವದಲ್ಲಿ ಮೋಹನ್ ಭಾಗವತ್

P

Peepal Media • ದೇಶ

• 1 ನಿಮಿಷದ ಓದು

ಸರ್ಕಾರಗಳು ಬದಲಾದ ತಕ್ಷಣ ಪರಿಸ್ಥಿತಿ ಬದಲಾಗುವುದಿಲ್ಲ: ಆರೆಸ್ಸೆಸ್ ಶತಮಾನೋತ್ಸವದಲ್ಲಿ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ನೂರನೇ ವರ್ಷದ (ಶತಮಾನೋತ್ಸವ) ಸಂಭ್ರಮಾಚರಣೆಯ ಅಂಗವಾಗಿ ನಾಗಪುರದಲ್ಲಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ವಿಜಯದಶಮಿ ಉತ್ಸವ ಹಾಗೂ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ್ ಭಾಗವತ್ ಅವರು ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

ಸಮಾಜದಲ್ಲಿ ಏಕತೆ, ಭಾರತೀಯ ಸಂಸ್ಕೃತಿ, ಸ್ವದೇಶಿ ವಸ್ತುಗಳ ಬಳಕೆ, ಯುವಜನರಲ್ಲಿ ನೈತಿಕ ಮೌಲ್ಯಗಳ ಬೆಳವಣಿಗೆ ಹಾಗೂ ವಿದೇಶಗಳಲ್ಲಿನ ಪ್ರಸ್ತುತ ಪರಿಸ್ಥಿತಿಗಳು ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಅವರು ಸುದೀರ್ಘವಾಗಿ ಮಾತನಾಡಿದರು.

ಆಯುಧ ಪೂಜೆಯ ನಂತರ ಸಂಘದ ಸಂಸ್ಥಾಪಕರಾದ ಡಾ. ಕೇಶವ ಬಲಿರಾಮ ಹೆಡ್ಗೆವಾರ್ ಅವರ ಸ್ಮೃತಿ ಮಂದಿರಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ ಭಾಗವತ್, ಬೆಂಗಾಲದ ರಾಜನಾರಾಯಣ ಬಸು ಹಾಗೂ ಸಂತ ರವಿದಾಸ್ ಅವರ ಕೊಡುಗೆಗಳನ್ನು ಸ್ಮರಿಸಿದರು. ಕಳೆದ ನೂರು ವರ್ಷಗಳಿಂದ ಭಾರತವನ್ನು ಅದರ ನೈಜ ಸಾಂಸ್ಕೃತಿಕ ಅಸ್ಮಿತೆ ಹಾಗೂ ಸಂಪ್ರದಾಯಗಳ ಅಡಿಯಲ್ಲಿ ಸಂಘಟಿಸಲು ಆರೆಸ್ಸೆಸ್ ಶ್ರಮಿಸುತ್ತಿದೆ ಎಂದ ಅವರು, ವೈವಿಧ್ಯತೆಯ ನಡುವೆಯೂ ದೇಶದ ಏಕತೆಯೇ ನಮ್ಮ ಶಕ್ತಿ ಎಂದು ಪುನರುಚ್ಚರಿಸಿದರು.

ಇದೇ ವೇಳೆ ಫ್ರಾನ್ಸ್, ಅಲ್ಬೇನಿಯಾ, ನೇಪಾಳ ಮತ್ತು ಬಾಂಗ್ಲಾದೇಶಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಗಲಭೆಗಳನ್ನು ಉಲ್ಲೇಖಿಸಿದ ಅವರು, ಕೇವಲ ಸರ್ಕಾರಗಳು ಬದಲಾದ ತಕ್ಷಣ ಎಲ್ಲ ಸಮಸ್ಯೆಗಳು ಬಗೆಹರಿದು ಪರಿಸ್ಥಿತಿಗಳು ಸುಧಾರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಸಮಾಜದ ಮರ್ಯಾದೆ, ಶಿಸ್ತು ಮತ್ತು ಸಂಸ್ಕೃತಿಗೆ ಧಕ್ಕೆ ತರುವಂತಹ ಪ್ರವೃತ್ತಿಗಳ ವಿರುದ್ಧ ಜನತೆ ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಎಚ್ಚರಿಸಿದರು.

ಇಂದಿನ ಯುವಜನರಲ್ಲಿ ಮಾದಕ ದ್ರವ್ಯಗಳ (ಡ್ರಗ್ಸ್) ಚಟ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಪೋಷಕರು ಬಾಲ್ಯದಿಂದಲೇ ಮಕ್ಕಳಿಗೆ ಇದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು. ಇದರೊಂದಿಗೆ, ಓಟಿಟಿ (OTT) ಪ್ಲಾಟ್‌ಫಾರ್ಮ್‌ಗಳು ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಷಯಗಳ ಮೇಲೆ ಸೂಕ್ತ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ ಎಂದು ಒತ್ತಿಹೇಳಿದ ಅವರು, ಮಾಧ್ಯಮಗಳ ಅನಿಯಂತ್ರಿತ ಪ್ರಭಾವದಿಂದ ಕುಟುಂಬ ಮೌಲ್ಯಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳಲು ಸರ್ಕಾರ ಗಂಭೀರ ಚರ್ಚೆ ನಡೆಸಬೇಕು ಎಂದು ಕರೆ ನೀಡಿದರು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version