ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಪದವಿ ಪ್ರಕರಣ: ಆರ್‌ಟಿಐ ಇರುವುದು ಮೂರನೇಯವನ ಕುತೂಹಲವನ್ನು ತೃಪ್ತಿಪಡಿಸಲು ಅಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ ದೆಹಲಿ ವಿವಿ

P

Peepal Media Desk • ದೇಶ

• 1 ನಿಮಿಷದ ಓದು

ಮೋದಿ ಪದವಿ ಪ್ರಕರಣ: ಆರ್‌ಟಿಐ ಇರುವುದು ಮೂರನೇಯವನ ಕುತೂಹಲವನ್ನು ತೃಪ್ತಿಪಡಿಸಲು ಅಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ ದೆಹಲಿ ವಿವಿ

ಮಾಹಿತಿ ಹಕ್ಕು ಕಾಯಿದೆಯ ಉದ್ದೇಶ ಮೂರನೇ ವ್ಯಕ್ತಿಯ ಕುತೂಹಲವನ್ನು ತೃಪ್ತಿಪಡಿಸುವುದು ಅಲ್ಲ ಎಂದು ದೆಹಲಿ ವಿಶ್ವವಿದ್ಯಾಲಯವು ಸೋಮವಾರ ದೆಹಲಿ ಹೈಕೋರ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಗಳಿಗೆ ಸಂಬಂಧಿಸಿದ ವಿಚಾರದಲ್ಲಿ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ವಿಶ್ವವಿದ್ಯಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿ ಸಲ್ಲಿಸಿದ್ದಾರೆ.

1978 ರಲ್ಲಿ ಕೊನೆಗೊಳ್ಳುವ ಶೈಕ್ಷಣಿಕ ವರ್ಷದಲ್ಲಿ ಬಿ.ಎ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡುವಂತೆ ನಿರ್ದೇಶಿಸಿದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯವು 2017 ರಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಮೋದಿ ಅವರಿಗೆ ಆ ವರ್ಷ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ಪದವಿ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನು ನೀಡಲಾಯಿತು ಎಂದು ಭಾರತೀಯ ಜನತಾ ಪಕ್ಷ ಹೇಳಿಕೊಂಡಿದೆ.

ಆದರೆ, ಪ್ರತಿಪಕ್ಷ ಆಮ್ ಆದ್ಮಿ ಪಕ್ಷವು ಪದವಿಗಳನ್ನು ಕಪೋಲಕಲ್ಪಿತ ಸುಳ್ಳು ಎಂದು ಆರೋಪಿಸಿತ್ತು.

ಆಯೋಗದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಮೆಹ್ತಾ ವಾದಿಸಿದರು. ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್ 6ರ ಪ್ರಕಾರ ಮಾಹಿತಿ ನೀಡಬೇಕು ಎಂದು ಆದೇಶಿಸಿದೆ ಎಂದು ಹೇಳಿದರು. ಹಾಗಿದ್ದರೂ, ಈ ಕಾಯಿದೆ ಇರುವುದು “ಯಾರೊಬ್ಬರ ಕುತೂಹಲವನ್ನು ಪೂರೈಸಲು ಅಲ್ಲ” ಎಂದು ಅವರು ಹೇಳಿದರು.

ಸಾರ್ವಜನಿಕ ಅಧಿಕಾರಿಗಳ ಹೊಣೆಗಾರಿಕೆ ಮತ್ತು ಪಾರದರ್ಶಕತೆಗೆ ಸಂಬಂಧಿಸದ ಮಾಹಿತಿಯನ್ನು ಬಹಿರಂಗಪಡಿಸುವ ಮೂಲಕ ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಪ್ರತಿಪಾದಿಸಿದರು.

ನಿಯಮಗಳ ಅನುಸಾರ ಒಬ್ಬ ವ್ಯಕ್ತಿ ತನ್ನ ಪದವಿಗಳು ಅಥವಾ ಅಂಕಪಟ್ಟಿಗಳನ್ನು ಕೇಳಿದರೆ ಅವನ್ನು ಶಿಕ್ಷಣ ಸಂಸ್ಥೆಗಳು ಒದಗಿಸಬಹುದು, ಆದರೆ ಕಾಯಿದೆಯ ಸೆಕ್ಷನ್ 8(1)(ಇ) ಅಂತಹ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ನಿಷೇಧಿಸುತ್ತದೆ ಎಂದು ಮೆಹ್ತಾ ಹೇಳಿರುವುದನ್ನು ಲೈವ್ ಲಾ ವರದಿ ಮಾಡಿದೆ.

ಏನು ಈ ಪ್ರಕರಣ?

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಕುಮಾರ್ ಅವರು 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಬಿಎ ಕಾರ್ಯಕ್ರಮದ ಭಾಗವಾಗಿದ್ದ ವಿದ್ಯಾರ್ಥಿಗಳ ಬಗ್ಗೆ ರೋಲ್ ಸಂಖ್ಯೆಗಳು, ಅಂಕಗಳು ಮತ್ತು ಫಲಿತಾಂಶವು ಉತ್ತೀರ್ಣ ಅಥವಾ ಅನುತ್ತೀರ್ಣವಾಗಿದ್ದರೆ ಮುಂತಾದ ಮಾಹಿತಿಯನ್ನು ನೀಡಬೇಕಾಗಿ ಕೋರಿದ್ದರು.

ಲೈವ್ ಲಾ ಪ್ರಕಾರ, ವಿಶ್ವವಿದ್ಯಾನಿಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು “ಮೂರನೇ ವ್ಯಕ್ತಿಯ ಮಾಹಿತಿ” ಎಂಬ ಆಧಾರದ ಮೇಲೆ ವಿನಂತಿಯನ್ನು ನಿರಾಕರಿಸಿದ್ದಾರೆ. ಆ ನಂತರ ಕಾರ್ಯಕರ್ತರು ಕೇಂದ್ರ ಮಾಹಿತಿ ಆಯೋಗದ ಮೊರೆ ಹೋಗಿದ್ದರು.

2016 ರಲ್ಲಿ, ಆಯೋಗವು ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ಗೆ ಒಳಪಟ್ಟಿದೆ ಎಂದು ತೀರ್ಪು ನೀಡಿತು ಮತ್ತು ಮಾಹಿತಿಯನ್ನು ಬಿಡುಗಡೆ ಮಾಡಲು ವಿಶ್ವವಿದ್ಯಾಲಯಕ್ಕೆ ಆದೇಶಿಸಿತು. ದೆಹಲಿ ವಿಶ್ವವಿದ್ಯಾನಿಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದ್ದು, ಅದು ಸಾರ್ವಜನಿಕ ದಾಖಲೆಯಾಗಿದೆ ಎಂದು ಆಯೋಗ ಹೇಳಿತ್ತು.

ವಿಶ್ವವಿದ್ಯಾಲಯವು ಈ ಹಿಂದೆ ಹೈಕೋರ್ಟ್‌ನಲ್ಲಿ ವಾದಿಸಿದ್ದು, ಬಹಿರಂಗಪಡಿಸುವಿಕೆಯಿಂದ ವಿನಾಯಿತಿ ಪಡೆದಿರುವುದರಿಂದ ಎಲ್ಲಾ ವಿದ್ಯಾರ್ಥಿಗಳ ರೋಲ್ ಸಂಖ್ಯೆಗಳು, ಹೆಸರುಗಳು ಮತ್ತು ಅಂಕಗಳಂತಹ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version