ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನ

ಬೆಂಗಳೂರು: ನಾಡಿನ ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ.

ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದ್ದು, ಬಳಿಕ ಮೃತರ ಆಸೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

ನಾಡೋಜ ಪ್ರೊ. ಕಮಲಾ ಹಂಪನಾ ತಮ್ಮ ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.

ಅವರ ಧೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ.

ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು