ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿ ಪ್ರಾಮಾಣಿಕ ರಾಜಕೀಯ ನಾಯಕ:‌ ಚಿತ್ರನಟ ಸೈಫ್‌ ಅಲಿ ಖಾನ್

PPeepal Media

Peepal Media • ದೇಶ

• 1 ನಿಮಿಷದ ಓದು

ರಾಹುಲ್ ಗಾಂಧಿ ಪ್ರಾಮಾಣಿಕ ರಾಜಕೀಯ ನಾಯಕ:‌ ಚಿತ್ರನಟ ಸೈಫ್‌ ಅಲಿ ಖಾನ್

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಅವರೊಬ್ಬ ಧೈರ್ಯಶಾಲಿ ರಾಜಕಾರಣಿ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹೊಗಳಿದ್ದಾರೆ.

ರಾಹುಲ್ ಸಾರ್ವಜನಿಕವಾಗಿ ತನ್ನ ಇಮೇಜ್ ಹೆಚ್ಚಿಸಿಕೊಳ್ಳಲು ಸಾಕಷ್ಟು ಸುಧಾರಣೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೈಫ್ ಈ ಹೇಳಿಕೆ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿಮಗೆ ಎಂತಹ ನಾಯಕ ಎಂದರೆ ಇಷ್ಟ? ಎಂದು ಆಂಕರ್ ಕೇಳಿದಾಗ, ಧೈರ್ಯಶಾಲಿ ಮತ್ತು ಪ್ರಾಮಾಣಿಕ ರಾಜಕೀಯ ನಾಯಕರನ್ನು ನಾನು ಇಷ್ಟಪಡುತ್ತೇನೆ ಎಂದು ಸೈಫ್ ಉತ್ತರಿಸಿದರು. ಆಗ ನಿರೂಪಕ ಕೆಲವರ ಹೆಸರು ಪ್ರಸ್ತಾಪಿಸಿದರು. ಪ್ರಧಾನಿ ಮೋದಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ರಾಹುಲ್ ಗಾಂಧಿ ನಡುವೆ ಯಾರನ್ನು ಆಯ್ಕೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಮತ್ತು, ಇದಕ್ಕೆ ಪ್ರತಿಕ್ರಿಯಿಸಿದ ಸೈಫ್ ಅಲಿಖಾನ್, ಇವರೆಲ್ಲಾ ಕೆಚ್ಚೆದೆಯ ರಾಜಕಾರಣಿಗಳು. ಆದರೆ ರಾಹುಲ್ ಗಾಂಧಿ ಅವರ ಸ್ಟೈಲ್ ನನಗೆ ಸ್ವಲ್ಪ ಹೆಚ್ಚು ಮೆಚ್ಚುಗೆ. ಈ ಹಿಂದೆ ಕೆಲವರು ಅವರ ನಡೆ, ನುಡಿಗಳಿಗೆ ಅಗೌರವ ತೋರಿದ್ದರು. ಅಂತಹ ಪರಿಸ್ಥಿತಿಯಿಂದ ರಾಹುಲ್‌ ತನ್ನ ಇಮೇಜನ್ನು ಸಂಪೂರ್ಣ ಬದಲಾಯಿಸಿಕೊಂಡಿದ್ದಾರೆ. ಜನಬೆಂಬಲ ಪಡೆಯಲು ರಾಹುಲ್ ಗಾಂಧಿ ತುಂಬಾ ಶ್ರಮಿಸಿದ್ದಾರೆ. ಅವರ ರಾಜಕೀಯ ಪಯಣ ಕುತೂಹಲಕಾರಿಯಾಗಿದೆ ಎಂದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಸೈಫ್ ಅಲಿಖಾನ್ ಇತ್ತೀಚಿನ ‘ದೇವರ’ ಚಿತ್ರದಲ್ಲಿ ಭೈರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಪಾತ್ರದಿಂದಾಗಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು