ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಭಾಲ್ ಮಸೀದಿ ಹಿಂಸಾಚಾರ ಪ್ರಕರಣ: ಸಿಎಂ ಯೋಗಿ ವಿರುದ್ಧ ರಾಹುಲ್-ಪ್ರಿಯಾಂಕಾ

PPeepal Media

Peepal Media ದೇಶ

• 1 ನಿಮಿಷದ ಓದು

ಸಂಭಾಲ್ ಮಸೀದಿ ಹಿಂಸಾಚಾರ ಪ್ರಕರಣ: ಸಿಎಂ ಯೋಗಿ ವಿರುದ್ಧ ರಾಹುಲ್-ಪ್ರಿಯಾಂಕಾ

ಉತ್ತರ ಪ್ರದೇಶದಲ್ಲಿ ಸಂಭಾಲ್‌ನಲ್ಲಿರುವ ಮೊಘಲರ ಕಾಲದ ಜಾಮಾ ಮಸೀದಿಯಲ್ಲಿ ಸರ್ಕಾರ ಸಮೀಕ್ಷೆ ನಡೆಸುತ್ತಿದ್ದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ನಾಗರೀಕರು ಜೀವ ಕಳೆದುಕೊಂಡಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಯನಾಡು ನೂತನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯೋಗಿ ಆದಿತ್ಯನಾಥ್ ಸರ್ಕಾರ ಮುಸ್ಲಿಂ ಧ್ವೇಷದ ನಡೆಯನ್ನು ಅನುಸರಿಸುತ್ತಿದೆ ಎಂದು ಯೋಗಿ ವಿರುದ್ಧ ಹರಿಹಾಯ್ದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಸೂಕ್ಷ್ಮ ವಿಷಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಮೊಘಲರ ಕಾಲದ ಜಾಮಾ ಮಸೀದಿಯ ಜಾಗದಲ್ಲಿ ಹರಿಹರ ದೇವಸ್ಥಾನವಿತ್ತು. ದೊರೆ ಬಾಬರ್‌ ಅದನ್ನು ಧ್ವಂಸ ಮಾಡಿ ಮಸೀದಿ ಕಟ್ಟಿಸಿದ್ದ ಎಂಬ ಆರೋಪಿಸಿ ಅರ್ಜಿಯೊಂದನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ನ್ಯಾಯಾಲಯ ಕಳೆದ ತಿಂಗಳು ಅದರ ಸಮೀಕ್ಷೆಗೆ ಆದೇಶಿಸಿತ್ತು. ನಂತರದ ಬೆಳವಣಿಗೆಯಲ್ಲಿ ಸಂಭಾಲ್ ಉದ್ವಿಗ್ನಗೊಂಡಿತು. ಮಂಗಳವಾರ ಒಂದು ಸುತ್ತಿನ ಸಮೀಕ್ಷೆ ನಡೆದಿದ್ದು, ಭಾನುವಾರ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಮಸೀದಿ ಬಳಿ ಮುಸ್ಲಿಂ ಸಮುದಾಯದ ಕೆಲವರು ಗುಂಪು ಗುಂಪಾಗಿ ಜಮಾಯಿಸಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಪೂರ್ಣ ಪ್ರಮಾಣದ ಘರ್ಷಣೆಗೆ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಬಲಪ್ರಯೋಗ ಮಾಡಿದ್ದರು. ಈ ಬಲ ಪ್ರಯೋಗದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆಸಿಯಾ ಹೇಳಿದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 400 ಜನರ ವಿರುದ್ಧ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ಹಿಂಸಾಚಾರದಲ್ಲಿ ಸತ್ತವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಸರ್ಕಾರ ಎಲ್ಲ ಬದಿಗಳಿಂದ ವಿಚಾರಣೆ ನಡೆಸಲಿಲ್ಲ. ಸಂವೇದನಾರಹಿತವಾಗಿ ವರ್ತಿಸಿತು. ಇದು ವಾತಾವರಣವನ್ನು ಹಾಳುಮಾಡಿತು ಮತ್ತು ಸಾವುಗಳಿಗೆ ಕಾರಣವಾಯಿತು. ಈ ಸಾವುಗಳಿಗೆ ಬಿಜೆಪಿಯೇ ಹೊಣೆಯಾಗಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯು ಹಿಂದೂ ಮತ್ತು ಮುಸ್ಲಿಮರ ನಡುವೆ ಬಿರುಕು ಮೂಡಿಸುತ್ತಿದೆ, ಈ ವಿಷಯದಲ್ಲಿ ಶೀಘ್ರವಾಗಿ ಮಧ್ಯಪ್ರವೇಶಿಸುವಂತೆ ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ ಎಂದಿರುವ ಅವರು, ತನಿಖೆ ಪೂರ್ಣಗೊಳ್ಳುವವರೆಗೂ ಜನರು ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

ಹೊಸದಾಗಿ ಚುನಾಯಿತ ಲೋಕಸಭಾ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತನ್ನ ಸಹೋದರನ ಹೇಳಿಕೆಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ತನಿಖೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು