ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸನಾತನ ಧರ್ಮ: ಉದಯನಿಧಿ ಹೇಳಿಕೆಗೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನೋಟಿಸ್

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಸನಾತನ ಧರ್ಮ: ಉದಯನಿಧಿ ಹೇಳಿಕೆಗೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಸನಾತನ ಧರ್ಮ ನಿರ್ಮೂಲನಾ ಸಮಾವೇಶದ ಹೆಸರಿನಲ್ಲಿ ಸೆಪ್ಟೆಂಬರ್ 2ರಂದು ನಡೆದ ಸಭೆ ಕುರಿತು ಸಿಬಿಐ ತನಿಖೆ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಮದ್ರಾಸ್ ಹೈಕೋರ್ಟ್ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ

ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅರ್ಜಿದಾರ ಬಿ ಜಗನ್ನಾಥ್ ಅವರನ್ನು ಹೈಕೋರ್ಟ್‌ಗೆ ಸಂಪರ್ಕಿಸದೆ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿತು. ಒಬ್ಬ ವ್ಯಕ್ತಿ ಧರ್ಮದ ವಿರುದ್ಧ ಮಾತನಾಡಿದರೆ ಅದು ಬೇರೆ ವಿಷಯ, ಆದರೆ ಇಲ್ಲಿ ಒಬ್ಬ ರಾಜ್ಯ ಸಚಿವರು, ರಾಜ್ಯ ಸರ್ಕಾರವು ಧರ್ಮದ ವಿರುದ್ಧ ವರ್ತಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು.

ನೀವು ಸುಪ್ರೀಂ ಕೋರ್ಟ್ ಅನ್ನು ಪೊಲೀಸ್ ಠಾಣೆಯನ್ನಾಗಿ ಮಾಡುತ್ತಿದ್ದೀರಿ ಎಂದು ಪೀಠ ಪ್ರತಿಕ್ರಿಯಿಸಿದೆ. ಆದರೆ, ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ಬಾಕಿ ಇವೆ ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನಕ್ಕೆ ತಂದರು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ, ಡಿಎಂಕೆ ನಾಯಕರಾದ ಪೀಟರ್ ಅಲ್ಫೋನ್ಸ್, ಎ ರಾಜಾ, ತೋಳ್ ತಿರುಮಾಳಲವನ್ ಮತ್ತು ಅವರ ಅನುಯಾಯಿಗಳ ವಿರುದ್ಧ ಭವಿಷ್ಯದಲ್ಲಿ ಸನಾತನ ಧರ್ಮ ಅಥವಾ ಹಿಂದೂ ಧರ್ಮದ ವಿರುದ್ಧ ಯಾವುದೇ ದ್ವೇಷದ ಭಾಷಣ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು