ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿಗೆ ನುಂಗಲಾರದ ತುತ್ತಾದ ಸತ್ಯಪಾಲ್ ಮಲಿಕ್ : 2024 ರ ಚುನಾವಣೆ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ

P

Peepal Media Desk • ದೇಶ

• 1 ನಿಮಿಷದ ಓದು

ಬಿಜೆಪಿಗೆ ನುಂಗಲಾರದ ತುತ್ತಾದ ಸತ್ಯಪಾಲ್ ಮಲಿಕ್ : 2024 ರ ಚುನಾವಣೆ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ

ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಸಂದರ್ಶನದಲ್ಲಿ ಪುಲ್ವಾಮಾ ದುರ್ಘಟನೆಗೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ನೀಡಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿ ಸುದ್ದಿಗೆ ಬಂದಿದ್ದಾರೆ. ಈ ಬಾರಿ 2024 ರ ಚುನಾವಣಾ ಹಿನ್ನೆಲೆಯಲ್ಲಿ ನೀಡಿದ ಹೇಳಿಕೆ, ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿ ಆಪ್ತ ವಲಯದಲ್ಲಿ ಒಬ್ಬರಾಗಿದ್ದ ಸತ್ಯಪಾಲ್ ಮಲಿಕ್ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ಅಷ್ಟೆ ಆಘಾತಕಾರಿಯಾಗಿದೆ. “ಬಿಜೆಪಿ ಪಕ್ಷದವರು 2024 ಕ್ಕೆ ರಾಮಮಂದಿರ ಸ್ಪೋಟ ಅಥವಾ ಬಿಜೆಪಿ ಪಕ್ಷದ್ದೇ ಪ್ರಭಾವಿ ನಾಯಕರೊಬ್ಬರ ಹತ್ಯೆ ಮಾಡಿಯಾದರೂ ಅಧಿಕಾರ ಪಡೆಯಲು ಹಿಂದೇಟು ಹಾಕುವುದಿಲ್ಲ” ಎಂಬ ಹೇಳಿಕೆ ಅತ್ಯಂತ ಕಳವಳಕಾರಿಯಾಗಿದೆ. “ಪುಲ್ವಾಮಾ ದಾಳಿ ಮಾಡಿಸಿದವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬಹುದು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಈ ಹಿಂದೆ ಪುಲ್ವಾಮಾ ದಾಳಿಯ ಹಿಂದೆ ಬಿಜೆಪಿ ಕೈವಾಡದ ಬಗ್ಗೆ ಹೇಳಿಕೆ ನೀಡಿದ್ದ ಸತ್ಯಪಾಲ್ ಮಲಿಕ್, ಆ ಸಂದರ್ಶನದ ನಂತರ ಸತ್ಯಪಾಲ್ ಮಲಿಕ್ ಮತ್ತು ಅವರ ಆಪ್ತ ಸಹಾಯಕರ ಮೇಲೆ ಸಿಬಿಐ ದಾಳಿ ನಡೆದಿತ್ತು. ಆ ನಂತರ ಮಣಿಪುರ ಗಲಭೆಗಳ ಬಗ್ಗೆ ಮೋದಿ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದರು.

ಇನ್ನು “ದೆಹಲಿಯಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ನಾನು ಮೋದಿ ಅವರಿಗೆ ಸಲಹೆ ನೀಡಿದರೆ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು” ಎಂದು ಸತ್ಯಪಾಲ್ ಮಲಿಕ್ ಅವರು ನೀಡಿದ ಹೇಳಿಕೆ ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸತ್ಯಪಾಲ್ ಮಲಿಕ್ ನೀಡಿರುವ ಹೇಳಿಕೆ, ಯಾವ ಮಾಧ್ಯಮದ ಸಂದರ್ಶನ ಎಂಬುದು ತಿಳಿದು ಬಂದಿಲ್ಲ.

ವಿಷಯಗಳು: #bjp #karnataka #peepal #peepalmedia #politics
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version