ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

PPeepal Media

Peepal Media ದೇಶ

• 1 ನಿಮಿಷದ ಓದು

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿ: ಅರುಣಾಚಲ ಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಪೆಮಾ ಖಂಡು ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ (CBI) ತನಿಖೆಗೆ ಆದೇಶಿಸಿದೆ.

ಸುಮಾರು 1,270 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿಯಮಬಾಹಿರವಾಗಿ ತಮ್ಮವರಿಗೆ ಹಂಚಿಕೆ ಮಾಡಿದ್ದಾರೆ ಎಂಬ ದೂರಿನ ಅನ್ವಯ ನ್ಯಾಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, 2015 ರಿಂದ 2025 ರ ನಡುವಿನ ಅವಧಿಯಲ್ಲಿ ನಡೆದ ಗುತ್ತಿಗೆ ಹಂಚಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದೆ.

ಮುಖ್ಯಮಂತ್ರಿಯವರ ಪತ್ನಿ, ತಾಯಿ ಮತ್ತು ಇತರ ಸಂಬಂಧಿಕರಿಗೆ ಸೇರಿದ ಸಂಸ್ಥೆಗಳಿಗೆ ಟೆಂಡರ್ ಇಲ್ಲದೆಯೇ ಕೆಲಸಗಳನ್ನು ನೀಡಲಾಗಿದೆ ಎಂಬ ಅಂಶದ ಕುರಿತು 16 ವಾರಗಳಲ್ಲಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ತಿಳಿಸಿದೆ. ಈ ತನಿಖೆಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಕಳೆದ 11 ವರ್ಷಗಳಿಂದ ರಾಜ್ಯದಲ್ಲಿ ಇಂತಹದ್ದೇ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಮುಖ್ಯಮಂತ್ರಿಯವರ ಪತ್ನಿಗೆ ಸೇರಿದ ‘ಬ್ರಾಂಡ್ ಈಗಲ್ಸ್’ ಸೇರಿದಂತೆ ಇತರ ಸಂಬಂಧಿಕರ ಕಂಪನಿಗಳಿಗೆ 121 ಕೆಲಸಗಳನ್ನು ಟೆಂಡರ್ ಮೂಲಕ ಹಾಗೂ 322 ಕೆಲಸಗಳನ್ನು ಯಾವುದೇ ಟೆಂಡರ್ ಇಲ್ಲದೆಯೇ ನೀಡಲಾಗಿದೆ ಎಂದು ವಿವರಿಸಿದರು.

ರಾಜ್ಯದ ಒಟ್ಟು ಗುತ್ತಿಗೆಗಳಲ್ಲಿ ಶೇ. 3 ರಷ್ಟು ಕೇವಲ ಮುಖ್ಯಮಂತ್ರಿಯವರ ಕುಟುಂಬಕ್ಕೇ ದಕ್ಕಿದೆ ಎಂದು ಅವರು ದೂರಿದರು. ಫೆಬ್ರವರಿಯಲ್ಲೇ ವಾದ-ಪ್ರತಿವಾದ ಮುಗಿದಿದ್ದು, ಸೋಮವಾರ ಹೊರಬಿದ್ದ ಈ ತೀರ್ಪು ಅರುಣಾಚಲ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು