ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನೀಟ್ ಅಕ್ರಮ ಕುರಿತು ಪ್ರತ್ಯೇಕ ಚರ್ಚೆಗೆ ಪಟ್ಟು: ವಿಪಕ್ಷಗಳಿಂದ ಸಭಾತ್ಯಾಗ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನೀಟ್ ಅಕ್ರಮ ಕುರಿತು ಪ್ರತ್ಯೇಕ ಚರ್ಚೆಗೆ ಪಟ್ಟು: ವಿಪಕ್ಷಗಳಿಂದ ಸಭಾತ್ಯಾಗ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಒಂದು ದಿನ ಪೂರ್ತಿ ಚರ್ಚಿಸಬೇಕು ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಒತ್ತಾಯಿಸಿದವು. ಇದಕ್ಕೆ ಸ್ಪೀಕರ್ ಅನುಮತಿ ನೀಡದ ಕಾರಣ ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿವೆ.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ನೀಟ್ ಅಕ್ರಮ ಕುರಿತ ಚರ್ಚೆಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು. ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಮುಗಿಯುವವರೆಗೂ ಪ್ರತ್ಯೇಕ ಚರ್ಚೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

‘ನೀಟ್ ಪ್ರಶ್ನೆ ಪತ್ರಿಕೆಗಳು 70 ಕಡೆ ಸೋರಿಕೆಯಾಗಿವೆ. ಈ ಅಕ್ರಮದ ಬಗ್ಗೆ ಒಂದು ದಿನ ಪ್ರತ್ಯೇಕ ಚರ್ಚೆಯನ್ನು ನಾವು ಬಯಸುತ್ತಿದ್ದೇವೆ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಅತ್ಯಂತ ಸಂತಸವಾಗುತ್ತದೆ’ ಎಂದು ರಾಹುಲ್ ಗಾಂಧಿ ಕೇಳಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ಉಪನಾಯಕ ಸಿಂಗ್, ʼಸದನದಲ್ಲಿ ಚರ್ಚೆಗೆ ಕೆಲವು ನೀತಿ ನಿಯಮಗಳಿವೆ. ಅವುಗಳೇ ಸದನವನ್ನು ಗಟ್ಟಿಗೊಳಿಸಿವೆ.ನನ್ನ ದಶಕಗಳ ಅನುಭವದಲ್ಲಿ ವಂದನಾ ನಿರ್ಣಯದ ಚರ್ಚೆ ವೇಳೆ ಬೇರೆ ಯಾವುದೇ ವಿಷಯವನ್ನು ಚರ್ಚೆಗೆ ತೆಗೆದುಕೊಂಡಿಲ್ಲ. ಈ ಚರ್ಚೆ ಮುಗಿದ ಬಳಿಕವೇ ಉಳಿದ ವಿಷಯಗಳ ಚರ್ಚೆ ನಡೆಯುತ್ತದೆ’ ಎಂದು ಹೇಳಿದರು.

ವಂದನಾ ನಿರ್ಣಯದ ಮೇಲಿನ ಚರ್ಚೆ ಬಳಿಕ ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವ ಬಗ್ಗೆ ಸ್ಪಷ್ಟ ಭರವಸೆ ನೀಡುವಂತೆ ರಾಹುಲ್ ಮತ್ತು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು.

ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಬೇರೆ ಯಾವುದೇ ಚರ್ಚೆಯನ್ನು ತೆಗೆದುಕೊಳ್ಳುವ ಸಂಪ್ರದಾಯವಿಲ್ಲ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ಆದರೆ,ನೀಟ್ ಕುರಿತು ಪ್ರತ್ಯೇಕ ಚರ್ಚೆ ನಡೆಸುವ ಕುರಿತು ಸರ್ಕಾರದಿಂದ ಸ್ಪಷ್ಟ ಭರವಸೆಯಾದರೂ ಸಿಗಲಿ ಎಂದು ಪ್ರತಿಪಕ್ಷದ ಸದಸ್ಯರು ಪಟ್ಟು ಹಿಡಿದು, ಸಭಾತ್ಯಾಗ ಮಾಡಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು