ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಅಡ್ವಕೇಟ್ ರಾಕೇಶ್ ವಿರುದ್ಧ ಕ್ರಮಕ್ಕೆ ಅಟಾರ್ನಿ ಜನರಲ್ ಸಮ್ಮತಿ

PPeepal Media

Peepal Media ದೇಶ

• 1 ನಿಮಿಷದ ಓದು

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಅಡ್ವಕೇಟ್ ರಾಕೇಶ್ ವಿರುದ್ಧ ಕ್ರಮಕ್ಕೆ ಅಟಾರ್ನಿ ಜನರಲ್ ಸಮ್ಮತಿ

ದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಅಡ್ವಕೇಟ್ ರಾಕೇಶ್ ಕಿಶೋರ್ ಶೂ ಎಸೆಯಲು ಪ್ರಯತ್ನಿಸಿದ ವಿಷಯ ಎಲ್ಲರಿಗೂ ತಿಳಿದಿದೆ. ಆ ಘಟನೆಯ ಕುರಿತು ಇಂದು ಅಟಾರ್ನಿ ಜನರಲ್ (Attorney General) ಆರ್. ವೆಂಕಟರಮಣಿ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಅಡ್ವಕೇಟ್ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ಕಂಟೆಂಪ್ಟ್‌ ಆಫ್‌ ಕೋರ್ಟ್ (Criminal Contempt of Court) ಅಡಿಯಲ್ಲಿ ಕ್ರಮ ಕೈಗೊಳ್ಳಲು ಅವರು ಅನುಮತಿ ನೀಡಿದ್ದಾರೆ. ಅಕ್ಟೋಬರ್ 6ರಂದು ಒಂದು ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಧರ್ಮಾಸನದಲ್ಲಿ ಕುಳಿತಿದ್ದ ಸಿಜೆಐ ಗವಾಯಿ ಅವರ ಮೇಲೆ ಅಡ್ವಕೇಟ್ ರಾಕೇಶ್ ಅವರು ಶೂ ಎಸೆಯಲು ಪ್ರಯತ್ನಿಸಿದ್ದರು. ಈ ಬಗ್ಗೆ ಅಟಾರ್ನಿ ಜನರಲ್ ಅವರು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷ ವಿಕಾಸ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

1971 ರ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 15(1)(ಬಿ) ಅಡಿಯಲ್ಲಿ ಕ್ರಿಮಿನಲ್ ಕೋನದಲ್ಲಿ ಅಡ್ವಕೇಟ್ ರಾಕೇಶ್ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡುತ್ತಿರುವುದಾಗಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ತಿಳಿಸಿದ್ದಾರೆ. ಅಡ್ವಕೇಟ್ ರಾಕೇಶ್ ಅವರ ಈ ಕ್ರಮವು ನಿಂದನೀಯ ಮತ್ತು ಸುಪ್ರೀಂ ಕೋರ್ಟ್‌ನ ಅತ್ಯುನ್ನತ ವ್ಯಕ್ತಿಗೆ ಅಗೌರವ ತರುವಂಥದ್ದಾಗಿದೆ ಎಂದು ಅವರು ಹೇಳಿದ್ದಾರೆ. ಇಂತಹ ನಡವಳಿಕೆಯಿಂದ ನ್ಯಾಯಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಧಕ್ಕೆಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ಗೆ ಪತ್ರ ಬರೆದಿದ್ದು, ಅಡ್ವಕೇಟ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯಾ ಬಾಗ್ಚಿ ಅವರ ಧರ್ಮಾಸನದ ಮುಂದೆ ಆ ಪ್ರಕರಣ ವಿಚಾರಣೆಗೆ ಇದೆ ಎಂದು ಅವರು ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು