ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನದಲ್ಲಿESI ಆಸ್ಪತ್ರೆ ಸ್ಥಾಪನೆಗೆ ಶ್ರೇಯಸ್ ಪಟೇಲ್ ಮನವಿ – ಸುದೀರ್ಘ ಚರ್ಚೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ

• 1 ನಿಮಿಷದ ಓದು

ಹಾಸನದಲ್ಲಿESI ಆಸ್ಪತ್ರೆ ಸ್ಥಾಪನೆಗೆ ಶ್ರೇಯಸ್ ಪಟೇಲ್ ಮನವಿ – ಸುದೀರ್ಘ ಚರ್ಚೆ

ನವದೆಹಲಿ : ಹಾಸನದಲ್ಲಿರುವ ಪ್ರಸ್ತುತ ESI ಡಿಸ್ಪೆನ್ಸರಿಯನ್ನು ಮೇಲ್ದರ್ಜೆಗೇರಿಸಿ, 200 ಹಾಸಿಗೆಗಳ ಪೂರ್ಣ ಪ್ರಮಾಣದ ಸುಸಜ್ಜಿತ ESI ಆಸ್ಪತ್ರೆಯನ್ನಾಗಿ ಸ್ಥಾಪಿಸುವಂತೆ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾದ ಸಂಸದರು, ಆಸ್ಪತ್ರೆ ಸ್ಥಾಪನೆಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿ ಸುದೀರ್ಘ ಚರ್ಚೆ ನಡೆಸಿದರು. ಹಾಸನದಲ್ಲಿ ಪ್ರಸ್ತುತ ಸುಮಾರು 61,337 ESI ವಿಮಾ ಫಲಾನುಭವಿಗಳು ನೋಂದಾಯಿತರಾಗಿದ್ದಾರೆ. ಆದರೆ, ಈ ದೊಡ್ಡ ಸಂಖ್ಯೆಯ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಆರೋಗ್ಯ ಸೇವೆಯ ಅಗತ್ಯಗಳಿಗೆ ಈಗಿರುವ ವ್ಯವಸ್ಥೆ ಸಮರ್ಪಕವಾಗಿಲ್ಲ. ಗಂಭೀರ ಕಾಯಿಲೆಗಳು, ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ತಜ್ಞ ವೈದ್ಯಕೀಯ ಸೇವೆ ಪಡೆಯಲು ಫಲಾನುಭವಿಗಳು ಇತರೆ ಆಸ್ಪತ್ರೆಗಳಿಗೆ ಅಥವಾ ಹಾಸನದ ಹೊರಗೆ ತೆರಳಬೇಕಾದ ಪರಿಸ್ಥಿತಿ ಇದೆ. ಇದರಿಂದ ಬಡ ಕಾರ್ಮಿಕರು ಮತ್ತು ಅವರ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹಾಗೂ ಪ್ರಯಾಣದ ಹೊರೆ ಬೀಳುತ್ತಿದೆ ಎಂದು ಶ್ರೇಯಸ್ ಪಟೇಲ್ ಸಚಿವರ ಗಮನಕ್ಕೆ ತಂದರು.

ಹಾಸನ ಜಿಲ್ಲೆ ಕೈಗಾರಿಕಾ, ವಾಣಿಜ್ಯ ಹಾಗೂ ಸೇವಾ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಕಾರ್ಮಿಕರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಲಿಷ್ಠ ESI ಆರೋಗ್ಯ ಮೂಲಸೌಕರ್ಯ ನಿರ್ಮಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ 200 ಹಾಸಿಗೆಗಳ ESI ಆಸ್ಪತ್ರೆ ಯೋಜನೆಗೆ ಸಂಬಂಧಿಸಿದಂತೆ ತಕ್ಷಣ ಕಾರ್ಯಸಾಧ್ಯತಾ ಅಧ್ಯಯನ ಮತ್ತು ಅಗತ್ಯತೆಗಳ ಮೌಲ್ಯಮಾಪನ ನಡೆಸುವುದು, ಆಡಳಿತಾತ್ಮಕ ಅನುಮೋದನೆ ಹಾಗೂ ವೆಚ್ಚ ಮಂಜೂರಾತಿಯನ್ನು ಶೀಘ್ರ ನೀಡುವುದು, ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸುವುದು ಮತ್ತು ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸಂಸದರು ಮನವಿ ಮಾಡಿದರು.

ಹೊಸ ಆಸ್ಪತ್ರೆಯಲ್ಲಿ ತಜ್ಞ ವೈದ್ಯಕೀಯ ವಿಭಾಗಗಳು, ತುರ್ತು ಚಿಕಿತ್ಸಾ ಘಟಕ, ICU, ಶಸ್ತ್ರಚಿಕಿತ್ಸಾ ಕೊಠಡಿಗಳು, ರೋಗನಿರ್ಣಯ ಸೌಲಭ್ಯಗಳು ಹಾಗೂ ಔಷಧಾಲಯ ಸೇರಿದಂತೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಒತ್ತಾಯಿಸಿದರು. 61,337 ESI ಫಲಾನುಭವಿಗಳ ಹಿತದೃಷ್ಟಿಯಿಂದ ಯೋಜನೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು, ನಿರ್ದಿಷ್ಟ ಕಾಲಮಿತಿಯೊಳಗೆ ಜಾರಿಗೊಳಿಸಬೇಕು. 200 ಹಾಸಿಗೆಗಳ ESI ಆಸ್ಪತ್ರೆ ನಿರ್ಮಾಣವಾದರೆ ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಹಾಸನದಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆ ದೊರೆಯಲಿದೆ. ಇದು ಜಿಲ್ಲೆಯ ಕಾರ್ಮಿಕರ ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ಶ್ರೇಯಸ್ ಎಂ. ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು