ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

IOC ಅಧ್ಯಕ್ಷ ಸ್ಥಾನಕ್ಕೆ ಶ್ಯಾಮ್ ಪಿತ್ರೋಡಾ ರಾಜೀನಾಮೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

IOC ಅಧ್ಯಕ್ಷ ಸ್ಥಾನಕ್ಕೆ ಶ್ಯಾಮ್ ಪಿತ್ರೋಡಾ ರಾಜೀನಾಮೆ

ಹೊಸದೆಹಲಿ: ಕಾಂಗ್ರೆಸ್ ಪಕ್ಷದ ವಿದೇಶಿ ವಿಭಾಗವಾದ ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ (ಐಒಸಿ) ಅಧ್ಯಕ್ಷ ಸ್ಥಾನಕ್ಕೆ ಶ್ಯಾಮ್ ಪಿತ್ರೋಡಾ ರಾಜೀನಾಮೆ ನೀಡಿದ್ದಾರೆ.

ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗೀಕರಿಸಿದ್ದಾರೆ. ಈ ವಿಷಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಪಿತ್ರೋಡಾ ಸಂದರ್ಶನವೊಂದರಲ್ಲಿ ಎಲ್ಲಾ ಭಾರತೀಯರು ಸಹೋದರತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಮತ್ತು ವಿವಿಧತೆಯಲ್ಲಿ ಏಕತೆ ಭಾರತದ ವಿಶಿಷ್ಟ ಲಕ್ಷಣವಾಗಿದೆ ಎಂದು ಹೇಳಿದ್ದರು.

ಸ್ಯಾಮ್‌ ಪಿತ್ರೋಡಾ ವೈವಿಧ್ಯತೆಯ ಕುರಿತು ಮಾತನಾಡುತ್ತಾ ಈಶಾನ್ಯದ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್ಬರಂತೆ ಕಾಣುತ್ತಾರೆ ಮತ್ತು ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಹೇಳಿದ್ದರು. ಆದರೆ ದೇಶದ ಜನರು ಈ ವೈವಿಧ್ಯತೆಯನ್ನು ಸ್ವಾಗತಿಸುತ್ತಾರೆ ಎಂದು ಸಹ ಹೇಳಿದ್ದರು. ‘ನಾವೆಲ್ಲರೂ ಸಹೋದರರು. ನಾವೆಲ್ಲರೂ ವಿವಿಧ ಭಾಷೆಗಳು, ವಿಭಿನ್ನ ಧರ್ಮಗಳು, ವಿಭಿನ್ನ ಉಡುಗೆ, ಆಹಾರವನ್ನು ಒಪ್ಪಿಕೊಂಡಿದ್ದೇವೆ’ ಎಂದು ಪಿತ್ರೋಡಾ ಹೇಳಿದರು.

ಆದರೆ, ಪಿಡ್ರೋಡಾ ಅವರ ಹೇಳಿಕೆಯು ‘ವರ್ಣ’ ತಾರತಮ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ಮತ್ತು ಸಂಫು ಪರಿವಾರ ವಿವಾದವನ್ನು ಹುಟ್ಟುಹಾಕಿತು. ಪ್ರಧಾನಿ ಮೋದಿ ಕೂಡ ಇದನ್ನು ಟೀಕಿಸಿದ್ದಾರೆ. ಪಿತ್ರೋಡಾ ಅವರ ಹೇಳಿಕೆಗೆ ‘ರಾಜಕುಮಾರ’ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಐಒಸಿಗೆ ರಾಜೀನಾಮೆ ನೀಡಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು