ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾಮಾನ್ಯ ಜನರಿಗೆ ಹೆಚ್ಛಿದ ವೈದ್ಯಕೀಯ ವೆಚ್ಚದ ಬರೆ: ದೇಶದಲ್ಲಿ ಗಣನೀಯವಾಗಿ ಏರಿಕೆಯಾದ ಸ್ವಂತ ಆರೋಗ್ಯ ಖರ್ಚು; ಎನ್‌ಹೆಚ್‌ಎ ವರದಿ

PPeepal Media

Peepal Media ದೇಶ

• 1 ನಿಮಿಷದ ಓದು

ಸಾಮಾನ್ಯ ಜನರಿಗೆ ಹೆಚ್ಛಿದ ವೈದ್ಯಕೀಯ ವೆಚ್ಚದ ಬರೆ: ದೇಶದಲ್ಲಿ ಗಣನೀಯವಾಗಿ ಏರಿಕೆಯಾದ ಸ್ವಂತ ಆರೋಗ್ಯ ಖರ್ಚು; ಎನ್‌ಹೆಚ್‌ಎ ವರದಿ

ದೆಹಲಿ: ದೇಶದಲ್ಲಿ ಸಾಮಾನ್ಯ ಜನರಿಗೆ ವೈದ್ಯಕೀಯ ಚಿಕಿತ್ಸೆ ಮತ್ತಷ್ಟು ದುಬಾರಿಯಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ಆರೋಗ್ಯದ ಅಗತ್ಯಗಳಿಗಾಗಿ ಸಾಲ ಮಾಡಿ, ಕೈಯಿಂದಲೇ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇತ್ತೀಚೆಗೆ ಬಿಡುಗಡೆ ಮಾಡಿರುವ ‘ರಾಷ್ಟ್ರೀಯ ಆರೋಗ್ಯ ಖಾತೆಗಳ (NHA) 2022-23’ ರ ಅಂದಾಜು ವರದಿ ಸ್ಪಷ್ಟಪಡಿಸಿದೆ.

ಕೊರೊನಾ ಸಾಂಕ್ರಾಮಿಕ ಮುಗಿದ ನಂತರ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸರ್ಕಾರವು ನಿರ್ಲಕ್ಷಿಸಿರುವುದೇ ಜನರ ಮೇಲಿನ ಈ ಹೆಚ್ಚುವರಿ ಹೊರೆಗೆ ಕಾರಣ ಎಂದು ತಿಳಿದುಬಂದಿದೆ. ಸರ್ಕಾರಗಳು ಉಚಿತ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವಲ್ಲಿ ವಿಫಲವಾಗುತ್ತಿರುವುದರಿಂದ, ದೇಶದ ಒಟ್ಟು ಆರೋಗ್ಯ ವೆಚ್ಚದಲ್ಲಿ ಜನರೇ ತಮ್ಮ ಸ್ವಂತ ಹಣವನ್ನು ವ್ಯಯಿಸಬೇಕಾಗಿ ಬಂದಿದೆ.

ಈ ವರದಿಯ ಪ್ರಕಾರ, ದೇಶದ ಒಟ್ಟು ಆರೋಗ್ಯ ವೆಚ್ಚದಲ್ಲಿ ಜನರು ತಮ್ಮ ಜೇಬಿನಿಂದಲೇ ಭರಿಸುವ ವೆಚ್ಚದ (ಔಟ್ ಆಫ್ ಪಾಕೆಟ್ ಎಕ್ಸ್‌ಪೆಂಡಿಚರ್) ಪಾಲು 2021-22ರ ಹಣಕಾಸು ವರ್ಷದಲ್ಲಿ ಶೇಕಡಾ 39.4 ರಷ್ಟಿತ್ತು. ಆದರೆ, 2022-23ರ ವೇಳೆಗೆ ಇದು ಶೇಕಡಾ 43.4 ಕ್ಕೆ ಏರಿಕೆಯಾಗಿದೆ.

ಕೋವಿಡ್ ನಿರ್ಬಂಧಗಳು ಸಂಪೂರ್ಣವಾಗಿ ಸರಳೀಕರಣಗೊಂಡು ಸಾಮಾನ್ಯ ಪರಿಸ್ಥಿತಿ ಮರಳಿದ ನಂತರ ಜನರು ವೈದ್ಯರ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು ಮತ್ತು ಔಷಧಿಗಳ ಖರೀದಿಗಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ಹೆಚ್ಚು ಅವಲಂಬಿತರಾಗಿ ಹಣ ಖರ್ಚು ಮಾಡಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ವರದಿ ಹೇಳಿದೆ.

ಕಡಿಮೆಯಾದ ಸರ್ಕಾರಿ ಅನುದಾನ.. ಜನರ ಜೇಬು ಖಾಲಿಯಾಗಲು ಪ್ರಮುಖ ಕಾರಣ ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರದ ವೆಚ್ಚ ಗಣನೀಯವಾಗಿ ಕಡಿಮೆಯಾಗಿರುವುದು. 2021-22ರಲ್ಲಿ ಒಟ್ಟು ಆರೋಗ್ಯ ವೆಚ್ಚದಲ್ಲಿ ಸರ್ಕಾರದ ಪಾಲು ಶೇಕಡಾ 48 ರಷ್ಟಿದ್ದರೆ, 2022-23ರ ವೇಳೆಗೆ ಅದು ಶೇಕಡಾ 43.7 ಕ್ಕೆ ಕುಸಿದಿದೆ.

ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಅನಿವಾರ್ಯವಾಗಿ ಲಸಿಕೆ ಮತ್ತು ಟೆಸ್ಟಿಂಗ್‌ಗಾಗಿ ಖರ್ಚು ಮಾಡಿದ್ದ ಸರ್ಕಾರ, ತದನಂತರ ಸಾಮಾನ್ಯ ಪರಿಸ್ಥಿತಿ ಮರಳುತ್ತಿದ್ದಂತೆ ತುರ್ತು ವೆಚ್ಚಗಳ ಹೆಸರಿನಲ್ಲಿ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದೆ.

ಯುಪಿಎ-2 ಸರ್ಕಾರದ ಅವಧಿಯಲ್ಲಿ ಶೇಕಡಾ 64 ರಷ್ಟಿದ್ದ ಸರ್ಕಾರದ ಪಾಲು ಈಗ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಪ್ರಸ್ತುತ ಆರ್ಥಿಕ ಮಂದಗತಿ ಮತ್ತು ಬೆಲೆ ಏರಿಕೆಯ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಸಾಮಾನ್ಯ ಜನರೇ ಶೇಕಡಾ 43.4 ರಷ್ಟು ಹಣವನ್ನು ಭರಿಸಬೇಕಾಗಿ ಬಂದಿರುವುದು ಜನರನ್ನು ಸಾಲದ ಸುಳಿಗೆ ದೂಡುತ್ತಿದ್ದು, ತೀವ್ರ ಆತಂಕ ಮೂಡಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು