ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೋಷಿಯಲ್‌ ಮೀಡಿಯಾ ಮೂಲಕ ನ್ಯಾಯಾಲಯದ ಮೇಲೆ ಒತ್ತಡ ಹೇರುವ ಪ್ರಯತ್ನಗಳನ್ನು ನ್ಯಾಯಾಧೀಶರು ಗಮನಿಸಬೇಕು: ನಿವೃತ್ತ ಸಿಜೆಐ ಡಿವೈ ಚಂದ್ರಚೂಡ್

PPeepal Media

Peepal Media ದೇಶ

• 1 ನಿಮಿಷದ ಓದು

ಸೋಷಿಯಲ್‌ ಮೀಡಿಯಾ ಮೂಲಕ ನ್ಯಾಯಾಲಯದ ಮೇಲೆ ಒತ್ತಡ ಹೇರುವ ಪ್ರಯತ್ನಗಳನ್ನು ನ್ಯಾಯಾಧೀಶರು ಗಮನಿಸಬೇಕು: ನಿವೃತ್ತ ಸಿಜೆಐ ಡಿವೈ ಚಂದ್ರಚೂಡ್

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳ ಮೂಲಕ ನ್ಯಾಯಾಲಯದ ತೀರ್ಪಿನ ಮೇಲೆ ಪ್ರಭಾವ ಬೀರಲು ಕೆಲವು ಗುಂಪುಗಳು ಪ್ರಯತ್ನಿಸುತ್ತಿವೆ ಎಂದು ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನ್ಯಾಯಾಧೀಶರು ಜಾಗೃತರಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಎನ್‌ಡಿಟಿವಿ ಇಂಡಿಯಾ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಸಾಮಾಜಿಕ ಮಾಧ್ಯಮ ಟ್ರೋಲಿಂಗ್ ನ್ಯಾಯಾಧೀಶರ ಮೇಲೆ ಪರಿಣಾಮ ಬೀರುತ್ತದೆಯೇ? ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಅವರು, ‘ಇಂದು ವಿಶೇಷ ಆಸಕ್ತಿ ಗುಂಪುಗಳು ಮತ್ತು ಒತ್ತಡ ಗುಂಪುಗಳಿವೆ. ನ್ಯಾಯಾಲಯಗಳು ಮತ್ತು ಪ್ರಕರಣಗಳ ಫಲಿತಾಂಶದ ಮೇಲೆ ಪ್ರಭಾವ ಬೀರಲು ಅವರು ಸಾಮಾಜಿಕ ಮಾಧ್ಯಮವನ್ನು ಬಳಸಲು ಪ್ರಯತ್ನಿಸುತ್ತಾರೆ. ತೀರ್ಪಿನ ಆಧಾರವನ್ನು ತಿಳಿದುಕೊಳ್ಳುವ ಹಕ್ಕು ಮತ್ತು ನ್ಯಾಯಾಲಯದ ತೀರ್ಪುಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಇದು ನ್ಯಾಯಾಲಯದ ತೀರ್ಪುಗಳನ್ನು ಮೀರಿ ಮತ್ತು ನ್ಯಾಯಾಧೀಶರನ್ನು ವೈಯಕ್ತಿಕವಾಗಿ ಗುರಿಯಾಗಿಸಿದಾಗ, ಅದು ನಿಜವಾಗಿಯೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವೇ? ಎಂಬ ಮೂಲಭೂತ ಪ್ರಶ್ನೆಗಳು ಉದ್ಭವಿಸುತ್ತವೆ’ ಎಂದು ಚಂದ್ರಚೂಡ್ ಹೇಳಿದರು.

ಇಂದಿನ ಜನರು ಯೂಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ 20 ಸೆಕೆಂಡ್ ಗಳ ವೀಡಿಯೋ ನೋಡಿ ಅದರ ಆಧಾರದ ಮೇಲೆ ಅಭಿಪ್ರಾಯ ರೂಪಿಸಲು ಬಯಸುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಎಂದರು. ನ್ಯಾಯಮೂರ್ತಿಗಳು ನಿವೃತ್ತಿ ನಂತರ ರಾಜಕೀಯಕ್ಕೆ ಬರಬಾರದು ಎಂದು ಸಂವಿಧಾನವಾಗಲಿ, ಕಾನೂನುಗಳಾಗಲಿ ಹೇಳುವುದಿಲ್ಲ ಎಂದರು. ಸಮಾಜವು ನಿವೃತ್ತಿಯ ನಂತರವೂ ನ್ಯಾಯಾಧೀಶರನ್ನು ನ್ಯಾಯಾಧೀಶರಂತೆ ನೋಡುತ್ತದೆ, ಆದ್ದರಿಂದ ನ್ಯಾಯಾಧೀಶರು ನಿವೃತ್ತಿಯ ನಂತರವೂ ಅದು ಮಾಡಬಾರದು, ಇದು ಮಾಡಬಾರದು ಎನ್ನುವುದು ಸರಿಯಲ್ಲ ಎಂದು ಹೇಳಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಕೊಲಿಜಿಯಂ ಉತ್ತಮ ನೀತಿ ಎಂದೂ ಅವರು ಅಭಿಪ್ರಾಯಪಟ್ಟರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು