ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿ ಮೋದಿಯನ್ನು ‘ದೇಶದ್ರೋಹಿ’ ಎಂದ ಸಮಾಜವಾದಿ ಪಕ್ಷದ ಸಂಸದ ಅಜೇಂದ್ರ ಸಿಂಗ್ ಲೋಧಿ ವಿರುದ್ಧ ಎಫ್‌ಐಆರ್ ದಾಖಲು

PPeepal Media

Peepal Media ದೇಶ

• 1 ನಿಮಿಷದ ಓದು

ಪ್ರಧಾನಿ ಮೋದಿಯನ್ನು ‘ದೇಶದ್ರೋಹಿ’ ಎಂದ ಸಮಾಜವಾದಿ ಪಕ್ಷದ ಸಂಸದ ಅಜೇಂದ್ರ ಸಿಂಗ್ ಲೋಧಿ ವಿರುದ್ಧ ಎಫ್‌ಐಆರ್ ದಾಖಲು

ಲಕ್ನೋ: ಹಮೀರಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದ ಅಜೇಂದ್ರ ಸಿಂಗ್ ಲೋಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ಜಿಲ್ಲಾ ಮಾಧ್ಯಮ ಉಸ್ತುವಾರಿ ಸತ್ಯೇಂದ್ರ ಪ್ರತಾಪ್ ಗುಪ್ತಾ ನೀಡಿದ ದೂರಿನ ಆಧಾರದ ಮೇಲೆ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಅಡಿಯಲ್ಲಿ ದ್ವೇಷ ಪ್ರಚೋದನೆ, ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕಾನೂನುಬಾಹಿರ ಸಭೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿವಾದದ ಹಿನ್ನೆಲೆ: ಮೇ 11 ರಂದು ಸಂಸದ ಲೋಧಿ ಮತ್ತು ಅವರ ಬೆಂಬಲಿಗರು ವಿದ್ಯುತ್ ಕಡಿತ ಮತ್ತು ಸ್ಮಾರ್ಟ್ ಮೀಟರ್ ಸಮಸ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಿ, ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಧಿ, ಪ್ರಧಾನಿ ಮೋದಿಯವರನ್ನು “ದೇಶದ್ರೋಹಿ” ಎಂದು ಕರೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ಪ್ರಧಾನಿಯವರ ಇತ್ತೀಚಿನ ಬಂಗಾರ ಖರೀದಿ ಮತ್ತು ಪೆಟ್ರೋಲ್ ಉಳಿತಾಯದ ಕರೆಗಳನ್ನು ಅವರು ತೀವ್ರವಾಗಿ ಟೀಕಿಸಿದ್ದರು. ಅವರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಯೋಗಿ ಆದಿತ್ಯನಾಥ್ ಖಂಡನೆ: ಸಂಸದರ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದಾರೆ. “ಪ್ರಧಾನಿಯವರನ್ನು ದೇಶದ್ರೋಹಿ ಎಂದು ಕರೆಯುವುದು ಕ್ಷಮಿಸಲಾಗದ ಅಪರಾಧ ಮತ್ತು ಪ್ರಜಾಪ್ರಭುತ್ವದ ಮರ್ಯಾದೆಗೆ ಚ್ಯುತಿ ತರುವಂತದ್ದು. ಇದು ಸಮಾಜವಾದಿ ಪಕ್ಷದ ಕೆಟ್ಟ ರಾಜಕೀಯ ಸಂಸ್ಕೃತಿ ಮತ್ತು ಸೈದ್ಧಾಂತಿಕ ದಿವಾಳಿತನವನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಕಿಡಿಕಾರಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು