ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

RSS, BJP ಕುರಿತಾದ ರಾಹುಲ್‌ ಹೇಳಿಕೆಗಳನ್ನು ಕಡತಗಳಿಂದ ತೆಗೆದು ಹಾಕಿಸಿದ ಸ್ಪೀಕರ್

PPeepal Media

Peepal Media ದೇಶ

• 1 ನಿಮಿಷದ ಓದು

RSS, BJP ಕುರಿತಾದ ರಾಹುಲ್‌ ಹೇಳಿಕೆಗಳನ್ನು ಕಡತಗಳಿಂದ ತೆಗೆದು ಹಾಕಿಸಿದ ಸ್ಪೀಕರ್

ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಗಳೆಂದು ಹೇಳಿಕೊಂಡು ಹಿಂದೂಗಳ ಭಾವನೆಗಳಿಗೆ ವಿರುದ್ಧವಾಗಿ ಹಿಂಸಾಚಾರ ಮತ್ತು ಜನರನ್ನು ದಾರಿ ತಪ್ಪಿಸು ವ ಕಾರ್ಯಗಳಲ್ಲಿ ತೊಡಗಿಕೊಂಡಿವೆ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸಂಸತ್ತಿನ ದಾಖಲೆಗಳಿಂದ ಅಳಿಸಲಾಗಿದೆ.

ಇದೇ ತಿಂಗಳ 1ರಂದು ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದರು. ಅವು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಟೀಕಿಸಿದ್ದರು. ಅಗ್ನಿವೀರ್ ಯೋಜನೆಯ ಮೂಲಕ ಸೈನಿಕರನ್ನು ಅವಮಾನಿಸುತ್ತಿರುವ ರೀತಿ, ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ರಾಹುಲ್ ಅತ್ಯಂತ ಪರಿಣಾಮಕಾರಿಯಾಗಿ ಪ್ರಸ್ತಾಪಿಸಿದರು. ದೇಶಾದ್ಯಂತ ಇವುಗಳ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ದಾಖಲೆಗಳಿಂದ ಈ ಭಾಗಗಳನ್ನು ಅಳಿಸಿ ಹಾಕಿರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ರಾಹುಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಿಜೆಪಿ ನೀಡಿರುವ ದೂರಿನ ಮೇರೆಗೆ ಕ್ರಮ ಕೈಗೊಂಡಿರುವುದು ಗಮನಾರ್ಹ.

ರಾಹುಲ್ ಅಚ್ಚರಿ

ತಮ್ಮ ಭಾಷಣದ ಟೀಕೆಗಳನ್ನು ದಾಖಲೆಗಳಿಂದ ತೆಗೆದು ಹಾಕಿರುವುದಕ್ಕೆ ರಾಹುಲ್ ಗಾಂಧಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಮರುದಾಖಲೆ ಮಾಡುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಭಾಷಣದಲ್ಲಿನ ಟೀಕೆಗಳನ್ನು ದಾಖಲೆಗಳಿಂದ ತೆಗೆದುಹಾಕಿರುವ ರೀತಿ ಆಘಾತಕಾರಿ ಮತ್ತು ಸಂಸದೀಯ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ರಾಹುಲ್ ಪತ್ರದಲ್ಲಿ ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು