ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುಟುಂಬ ಭಾವನೆಗೆ ಧಕ್ಕೆಯಾಗುತ್ತಿದೆ: ಸುಪ್ರೀಂ ಕೋರ್ಟ್ ಆತಂಕ

PPeepal Media

Peepal Media ದೇಶ

• 1 ನಿಮಿಷದ ಓದು

ಕುಟುಂಬ ಭಾವನೆಗೆ ಧಕ್ಕೆಯಾಗುತ್ತಿದೆ: ಸುಪ್ರೀಂ ಕೋರ್ಟ್ ಆತಂಕ
ಸುಪ್ರೀಂ ಕೋರ್ಟ್

ನವದೆಹಲಿ: ಪ್ರಪಂಚವನ್ನೇ ಒಂದು ಕುಟುಂಬವೆಂದು (ವಸುಧೈವ ಕುಟುಂಬಕಂ) ಭಾವಿಸುವ ನಾವು, ಇಂದು ಕುಟುಂಬದೊಳಗೆ ಸ್ವಂತ ಜನರೊಂದಿಗೆ ಒಗ್ಗೂಡಿ ಬದುಕಲು ಸಾಧ್ಯವಾಗದ ಸ್ಥಿತಿಗೆ ಬಂದಿದ್ದೇವೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಕ್ರಮೇಣ ಕುಟುಂಬ ಎಂಬ ಭಾವನೆಗೆ ಧಕ್ಕೆಯಾಗುತ್ತಿದೆ ಎಂದು ಹೇಳಿದ ಕೋರ್ಟ್, ಇದು “ಒಬ್ಬ ವ್ಯಕ್ತಿ-ಒಂದು ಕುಟುಂಬ” ಎಂಬ ವ್ಯವಸ್ಥೆಗೆ ದಾರಿ ಮಾಡಿಕೊಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದೆ. ತನ್ನ ದೊಡ್ಡ ಮಗನನ್ನು ಮನೆಯಿಂದ ಹೊರಗೆ ಕಳುಹಿಸಬೇಕೆಂದು ಕೋರಿ ಒಬ್ಬ ಮಹಿಳೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಕಲ್ಲೂ ಮಾಲ್ ಮತ್ತು ಸಂತೋಲಾ ದೇವಿ ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಮಕ್ಕಳು ಮತ್ತು ಪೋಷಕರ ನಡುವೆ ಒಳ್ಳೆಯ ಸಂಬಂಧ ಇರಲಿಲ್ಲ.

ತಮ್ಮ ಮಕ್ಕಳಿಂದ ಜೀವನಾಧಾರ ಭತ್ಯೆ ಪಡೆಯಲು 2017ರಲ್ಲಿ ಸ್ಥಳೀಯ ಕುಟುಂಬ ನ್ಯಾಯಾಲಯವನ್ನು ಆಶ್ರಯಿಸಿದಾಗ, ಪೋಷಕರಿಗೆ ತಿಂಗಳಿಗೆ 8 ಸಾವಿರ ರೂಪಾಯಿ ಒದಗಿಸಬೇಕೆಂದು ಆದೇಶಿಸಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಮಗ ಹಾಗೂ ಪೋಷಕರ ನಡುವೆ ಆಸ್ತಿ ವಿವಾದ ಉದ್ಭವಿಸಿತು. ಈ ವಿವಾದ ಮುಂದುವರಿಯುತ್ತಿರುವಾಗಲೇ ಕಲ್ಲೂ ಮಾಲ್ ಮೃತಪಟ್ಟರು. ಈ ಘಟನೆಯ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನ್ನ ದೊಡ್ಡ ಮಗನನ್ನು ಮನೆಯಿಂದ ಹೊರಗೆ ಕಳುಹಿಸಬೇಕೆಂದು ತಾಯಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಿತು. ಮಗ ತನ್ನ ಪೋಷಕರನ್ನು, ವಿಶೇಷವಾಗಿ ತಾಯಿಯನ್ನು ಅವಮಾನಿಸಿದ್ದಾನೆ ಅಥವಾ ಆಕೆಯ ಜೀವನದಲ್ಲಿ ಮಧ್ಯಪ್ರವೇಶಿಸಿದ್ದಾನೆ ಎಂಬುದಕ್ಕೆ ಯಾವುದೇ ದೂರುಗಳು ಅಥವಾ ಸಾಕ್ಷ್ಯಗಳಿಲ್ಲ ಎಂದು ತಿಳಿಸಿತು.

ಆಸ್ತಿಗೆ ತಂದೆ ಮಾತ್ರ ಮಾಲೀಕ ಎಂದು ಹೇಳಲಾಗದು, ಮಗನಿಗೂ ಅದರಲ್ಲಿ ಪಾಲು ಇರುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಮಗನನ್ನು ಮನೆಯಿಂದ ಹೊರಗೆ ಕಳುಹಿಸುವಷ್ಟು ತೀವ್ರ ಕ್ರಮ ಕೈಗೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿತು. ಈ ಸಂದರ್ಭದಲ್ಲಿ ಕುಟುಂಬ ವ್ಯವಸ್ಥೆಯ ಬಗ್ಗೆ ಒಂದಷ್ಟು ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು. “ನಾವೆಲ್ಲರೂ ‘ಪ್ರಪಂಚವೇ ಒಂದು ಕುಟುಂಬ’ ಎಂಬ ಭಾವನೆಯನ್ನು ನಂಬುತ್ತೇವೆ.

ಆದರೆ ಇಂದು ಕುಟುಂಬದ ಒಗ್ಗಟ್ಟನ್ನೇ ಉಳಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದೇವೆ. ಹೀಗಿರುವಾಗ ‘ಪ್ರಪಂಚವೇ ಒಂದೇ ಕುಟುಂಬ (ವಸುಧೈವ ಕುಟುಂಬಕಂ)’ ಎಂಬುದರ ಬಗ್ಗೆ ಏನನ್ನು ಮಾತನಾಡಲು ಸಾಧ್ಯ? ‘ಕುಟುಂಬ’ ಎಂಬ ಭಾವನೆಯೇ ನಾಶವಾಗುತ್ತಿದೆ. ‘ಒಬ್ಬ ವ್ಯಕ್ತಿ, ಒಂದು ಕುಟುಂಬ’ ಎಂಬ ವ್ಯವಸ್ಥೆಗೆ ನಾವು ಸಮೀಪಿಸುತ್ತಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಪೀಠವು ತಿಳಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು