ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್ಮತದಾರರ ಪಟ್ಟಿಯಿಂದ ಹೆಸರು ತೆಗೆದರೆ ದೇಶದಿಂದಲೇ ಗಡಿಪಾರು ಭೀತಿ: ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿದ ಪೌರತ್ವ ಕಳೆದುಕೊಳ್ಳುವ ಆತಂಕಶಿವಮೊಗ್ಗ ವಿಮಾನ ನಿಲ್ದಾಣ: ಮಲೆನಾಡಿಗೆ ಕಿರೀಟವಾಗಬೇಕಿದ್ದದ್ದು, “ಕಪ್ಪುಚುಕ್ಕೆ” ಆದ ಬಗೆತಿಂಗಳಿಗೆ ₹15 ಸಾವಿರ ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ ₹350 ಕೋಟಿ ಜಿಎಸ್‌ಟಿ ವಹಿವಾಟು!ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಅಮಾನತುಗೊಂಡ ಅಧ್ಯಕ್ಷರಿಂದ ₹4.17 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪಕರ್ನಾಟಕ ಸಚಿವ ಸಂಪುಟಕ್ಕೆ ಮಹಿಳಾ ಸಚಿವೆಯ ಸೇರ್ಪಡೆ ಸಾಧ್ಯತೆ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿರುವ ಕಾಂಗ್ರೆಸ್ಬೆಂಗಳೂರಿನಲ್ಲಿ ಮನೆಮನೆಗೆ ತೆರಳಿ ನಿವಾಸಿಗಳ ಮಾಹಿತಿ ಸಂಗ್ರಹ: ಪೊಲೀಸರಿಗೆ ಜವಾಬ್ದಾರಿ ನೀಡಲು ಸರ್ಕಾರದ ಚಿಂತನೆಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ: ₹30 ಲಕ್ಷ ಸುಪಾರಿ ನೀಡಿದ್ದ ಮಾಜಿ ಸ್ನೇಹಿತ ಸೇರಿ ಐವರ ಬಂಧನಆಂಧ್ರ ಕರಾವಳಿಗೆ ಅಪ್ಪಳಿಸಲಿರುವ ಅಕ್ವಾನ್ ಚಂಡಮಾರುತ: ಗಂಟೆಗೆ 145 ಕಿ.ಮೀ. ವೇಗದಲ್ಲಿ ಬೀಸಲಿದೆ ಗಾಳಿ; ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆಐದು ರಾಜ್ಯಗಳ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್‌ನಿಂದ ಸ್ಕ್ರೀನಿಂಗ್ ಸಮಿತಿಗಳ ರಚನೆಇಂದು ಬೆಂಗಳೂರಿನಲ್ಲಿ ಟೆಕ್ ಸಮಿಟ್ ಆರಂಭ: ಎಐ, ರೋಬೋಟಿಕ್ಸ್ ಮತ್ತು ಡೀಪ್‌ಟೆಕ್ ತಂತ್ರಜ್ಞಾನಕ್ಕೆ ವಿಶೇಷ ಒತ್ತುಓಲಾ, ಉಬರ್ ಸೇರಿದಂತೆ ಎಲ್ಲಾ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯಕ್ಕೆ ಸರ್ಕಾರ ಸಿದ್ಧತೆ; ನಿಯಮ ಉಲ್ಲಂಘಿಸಿದರೆ ವಾಹನ ಜಪ್ತಿ ಎಚ್ಚರಿಕೆ!ವಿಜಯಲಕ್ಷ್ಮೀ–ಧನ್ವೀರ್ ವಿವಾದಕ್ಕೆ ಹೈಕೋರ್ಟ್ ಮಧ್ಯಂತರ ಬ್ರೇಕ್: ಮೂರು ಎಫ್‌ಐಆರ್‌ಗಳ ತನಿಖೆ ಸ್ಥಗಿತಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣಬೇಲೂರು 56 ಕಾಡಾನೆಗಳನ್ನು ತಿಂಗಳೊಳಗೆ ಸ್ಥಳಾಂತರ – ಸಚಿವ ಕೆ. ಎಂ. ಶಿವಲಿಂಗೇಗೌಡ ಭರವಸೆಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಅವಕಾಶ: ಬಿಜೆಪಿ ನಾಯಕರ ಮನವೊಲಿಕೆಗೆ ಕುಮಾರಸ್ವಾಮಿ ಯತ್ನಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತಲೋಕ ಸುತ್ತಾಟ : ಪ್ರಕೃತಿ ವಿಸ್ಮಯದ ಪ್ರವಾಸಿ ತಾಣ : ವಿಯೆಟ್ನಾಂ ಬಾ ನಾ ಹಿಲ್ಸ್‌

ಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್

PPeepal Media

Peepal Media ದೇಶ

• 1 ನಿಮಿಷದ ಓದು

ಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್

ದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಿರ್ದಿಷ್ಟ ಕ್ಷೇತ್ರವೊಂದನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಅಥವಾ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಮೀಸಲಿಡಬೇಕು ಎಂದು ಯಾವುದೇ ಮತದಾರರು ಅಥವಾ ಅಭ್ಯರ್ಥಿಗಳು ಹಕ್ಕಿನ ಆಧಾರದ ಮೇಲೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಈ ಸಮುದಾಯಗಳ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವುದಕ್ಕೆ ಕಾನೂನು ಅವಕಾಶ ನೀಡುತ್ತದೆ. ಆದರೆ, ನಿರ್ದಿಷ್ಟ ಕ್ಷೇತ್ರವನ್ನೇ ಮೀಸಲಿಡುವ ಭರವಸೆ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮಹಾರಾಷ್ಟ್ರದ ಜಿಲ್ಲಾ ಪಂಚಾಯಿತಿಗಳು ಮತ್ತು ಪಂಚಾಯತ್ ಸಮಿತಿಗಳ ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲು ಕ್ಷೇತ್ರಗಳ ರೊಟೇಷನ್‌ (ಪರ್ಯಾಯ ವ್ಯವಸ್ಥೆ) ವಿಧಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.

ಮಹಾರಾಷ್ಟ್ರ ಜಿಲ್ಲಾ ಪಂಚಾಯಿತಿಗಳು ಮತ್ತು ಪಂಚಾಯತ್ ಸಮಿತಿಗಳಲ್ಲಿ ಮೀಸಲು ಕ್ಷೇತ್ರಗಳ ಹಂಚಿಕೆ ಹಾಗೂ ರೊಟೇಷನ್‌ಗೆ ಸಂಬಂಧಿಸಿದ 2025ರ ನಿಯಮಗಳ ನಿಯಮ 12ನ್ನು ಪ್ರಶ್ನಿಸಿ ರೂಪಾಲಿ ಇಂದ್ರಭೂಷಣ್ ಸೊಂಡೆ ಅರ್ಜಿ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠ 2025ರ ಸೆಪ್ಟೆಂಬರ್‌ನಲ್ಲಿ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ರೊಟೇಷನ್ ವ್ಯವಸ್ಥೆ ಪ್ರಶ್ನಿಸಿ ಅರ್ಜಿ

2025ರ ಹೊಸ ನಿಯಮವು ಮೀಸಲು ಕ್ಷೇತ್ರಗಳ ರೊಟೇಷನ್‌ಗೆ ಸಂಬಂಧಿಸಿದ ಆರಂಭಿಕ ಮಾನದಂಡವನ್ನು ಬದಲಾಯಿಸಿದೆ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿತ್ತು. ಹೊಸ ನಿಯಮದಿಂದ ಈಗಾಗಲೇ ಜಾರಿಯಲ್ಲಿದ್ದ ರೊಟೇಷನ್ ಚಕ್ರ ಅಸ್ತವ್ಯಸ್ತವಾಗುತ್ತದೆ ಮತ್ತು ಕೆಲವು ಕ್ಷೇತ್ರಗಳು ಮೀಸಲಾತಿ ಪಡೆಯುವ ಅವಕಾಶದಿಂದ ವಂಚಿತವಾಗಬಹುದು ಎಂದು ಅರ್ಜಿದಾರರು ವಾದಿಸಿದ್ದರು.

ವಿಶೇಷವಾಗಿ, ಎಸ್‌ಸಿ ಮತ್ತು ಎಸ್‌ಟಿ ಜನಸಂಖ್ಯೆ ಕಡಿಮೆ ಇರುವ ಕ್ಷೇತ್ರಗಳು ರೊಟೇಷನ್ ಪ್ರಕ್ರಿಯೆಯನ್ನು ಮರುಪ್ರಾರಂಭಿಸುವುದರಿಂದ ಎಂದಿಗೂ ಮೀಸಲಾತಿ ವ್ಯಾಪ್ತಿಗೆ ಬರದಿರುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಈ ನಿಯಮ ಸಂವಿಧಾನದ 14ನೇ ವಿಧಿಯ ಸಮಾನತೆಯ ಹಕ್ಕಿಗೂ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ರೊಟೇಷನ್ ನಿರ್ಧರಿಸುವ ಅಧಿಕಾರ ಸರ್ಕಾರಕ್ಕೆ

ಈ ವಾದಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ, ಕಾನೂನು ಎಸ್‌ಸಿ, ಎಸ್‌ಟಿ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಮೀಸಲಾತಿ ಮತ್ತು ಕ್ಷೇತ್ರಗಳ ರೊಟೇಷನ್‌ಗೆ ಅವಕಾಶ ಕಲ್ಪಿಸುತ್ತದೆ. ಆದರೆ, ನಿರ್ದಿಷ್ಟ ಕ್ಷೇತ್ರವೊಂದನ್ನು ಮೀಸಲಿಡುವಂತೆ ಮತದಾರರು ಅಥವಾ ಅಭ್ಯರ್ಥಿಗಳು ವಿಶೇಷ ಹಕ್ಕು ಮಂಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಮೀಸಲು ಕ್ಷೇತ್ರಗಳ ರೊಟೇಷನ್ ಯಾವ ರೀತಿಯಲ್ಲಿ ನಡೆಯಬೇಕು ಮತ್ತು ಅದನ್ನು ಯಾವ ಸಮಯದಲ್ಲಿ ಜಾರಿಗೊಳಿಸಬೇಕು ಎಂಬುದು ರಾಜ್ಯ ಸರ್ಕಾರದ ವಿವೇಚನೆಗೆ ಒಳಪಟ್ಟಿರುತ್ತದೆ ಎಂದು ನ್ಯಾಯಪೀಠ ತಿಳಿಸಿತು. 2025ರ ತಿದ್ದುಪಡಿಯ ನಂತರ ನಡೆಯುವ ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಮೀಸಲು ಕ್ಷೇತ್ರಗಳ ರೊಟೇಷನ್‌ಗೆ ಆರಂಭಿಕ ಚುನಾವಣೆಯಾಗಿ ಪರಿಗಣಿಸುವ ನಿಯಮ 12ರಲ್ಲಿಯೂ ಕಾನೂನುಬಾಹಿರ ಅಂಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಹಿನ್ನೆಲೆಯಲ್ಲಿ ನಿಯಮ 12 ಮೀಸಲಾತಿ ಅಥವಾ ಕ್ಷೇತ್ರಗಳ ರೊಟೇಷನ್‌ನ ಮೂಲತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಲು ಯಾವುದೇ ಕಾರಣವಿಲ್ಲ ಎಂದು ತಿಳಿಸಿದ ಸುಪ್ರೀಂಕೋರ್ಟ್, ರೂಪಾಲಿ ಸೊಂಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು